• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಮಿಳುನಾಡಿನಲ್ಲಿ ಮತದಾನಕ್ಕಾಗಿ ಪಿಪಿಇ ಕಿಟ್ ಧರಿಸಿದ ಸಂಸದೆ ಕನಿಮೋಳಿ!

|

ಚೆನ್ನೈ, ಏಪ್ರಿಲ್ 06: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಕೊರೊನಾವೈರಸ್ ಸೋಂಕು ತಗುಲಿದ ಹಿನ್ನೆಲೆ ಪಿಪಿಇ ಕಿಟ್ ಧರಿಸಿ ಚೆನ್ನೈನ ಮೈಲಾಪೂರ್ ಮತಗಟ್ಟೆಗೆ ಆಗಮಿಸಿದ ಡಿಎಂಕೆ ಸಂಸದೆ ಕೆ ಕನಿಮೋಳಿ ಮತದಾನ ಮಾಡಿದ್ದಾರೆ.

ಅಸಲಿಗೆ, ಮತ ಹಾಕಲು ನಟ ವಿಜಯ್ ಸೈಕಲ್‌ನಲ್ಲಿ ಬಂದಿದ್ದೇಕೆ? ಇಲ್ಲಿದೆ ನಿಜ ಕಾರಣಅಸಲಿಗೆ, ಮತ ಹಾಕಲು ನಟ ವಿಜಯ್ ಸೈಕಲ್‌ನಲ್ಲಿ ಬಂದಿದ್ದೇಕೆ? ಇಲ್ಲಿದೆ ನಿಜ ಕಾರಣ

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಆಯೋಗ ಮತದಾನ ನಡೆಸುತ್ತಿದೆ. ಈ ಹಿನ್ನೆಲೆ ಸಂಜೆ 6 ಗಂಟೆಯಿಂದ 7 ಗಂಟೆವರೆಗೂ ಕೊರೊನಾವೈರಸ್ ಸೋಂಕು ತಗುಲಿದ ರೋಗಿಗಳಿಗೂ ಮತ ಚಲಾಯಿಸುವುದಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.

ತಮಿಳುನಾಡಿನ 38 ಜಿಲ್ಲೆಗಳ 234 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಯಿತು. ಈ ಬಾರಿ 3998 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.


ತಮಿಳುನಾಡಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ತಮಿಳುನಾಡಿನಲ್ಲಿ ಒಂದೇ ದಿನ 3,645 ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತ ಪ್ರಕರಣಗಳ ಸಂಖ್ಯೆ 9,07,124ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,809 ಸೋಂಕಿತರು ಗುಣಮುಖರಾಗಿದ್ದು, 15 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೂ 8,68,722 ಸೋಂಕಿತರು ಗುಣಮುಖರಾಗಿದ್ದು, 12,804 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 25,598 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

English summary
Special Facility For Covid-19 Patients In Tamil Nadu: DMK MP Kanimozhi Came In PPE Kit To Cast Her Vote.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X