ಸಿದ್ದಗಂಗಾ ಶ್ರೀಗಳಿಗೆ ಚೆನ್ನೈನಲ್ಲಿ ಯಶಸ್ವೀ ಶಸ್ತ್ರಚಿಕಿತ್ಸೆ, ಶ್ರೀಗಳು ಕ್ಷೇಮ

ಚೆನ್ನೈ, ಡಿಸೆಂಬರ್ 08: ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಚೆನ್ನೈಯಲ್ಲಿ ಹೃದಯದ ಯಶಸ್ವೀ ಶಸ್ತ್ರಚಿಕಿತ್ಸೆ ಮಾಡಲಾಗಿದೆ..
ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಅಂಡ್ ಮೆಡಿಕಲ್ ಸೆಂಟರ್ ನ ಪ್ರಖ್ಯಾತ ವೈದ್ಯರಾದ ಮಹಮ್ಮದ್ ರೇಲಾ ಅವರ ನೇತೃತ್ವದಲ್ಲಿ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ಬಿಜಿಎಸ್ ನ ಡಾ. ರವೀಂದ್ರ ಅವರ ಉಪಸ್ಥಿತಿಯಲ್ಲೇ ಶಸ್ತ್ರಚಿಕಿತ್ಸೆ ನಡೆದಿದೆ.
ನಡೆದಾಡುವ ದೇವರ ಸರ್ಜರಿ ಮಾಡುತ್ತಿರುವ ವೈದ್ಯಲೋಕದ ಮಹಾನ್ ಸಾಧಕ
ಶಸ್ತ್ರ ಚಿಕಿತ್ಸೆಯಾಗಿರುವುದರಿಂದ ಶ್ರೀಗಳು 8 ರಿಂದ 10 ವಾರಗಳ ವಿಶ್ರಾಂತಿ ಪಡೆಯಬೇಕಾಗುತ್ತದೆಂದು ವೈದ್ಯರು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚೆನ್ನೈಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದಗಂಗಾ ಶ್ರೀ ಈಗ ಹೇಗಿದ್ದಾರೆ?
ಸದ್ಯಕ್ಕೆ ಶ್ರೀಗಳನ್ನು ಆಪರೇಶನ್ ಥಿಯೇಟರ್ ನಿಂದ ಐಸಿಯು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.ಡಿಸೆಂಬರ್ 7 ರಂದು ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಿಂದ ಏರ್ ಆಂಬುಲೆನ್ಸ್ ಮೂಲಕ ಚೆನ್ನೈಗೆ ತೆರಳಿದ್ದ 111 ವರ್ಷ ವಯಸ್ಸಿನ ಶ್ರೀಗಳಿಗೆ ನಿನ್ನೆ ಸಂಜೆಯೇ ಅಗತ್ಯವಿರುವ ಎಲ್ಲಾ ಆರೋಗ್ಯ ತಪಾಸಣೆಯನ್ನೂ ಮಾಡಲಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರೂ ಲವಲವಿಕೆಯಿಂದಲೇ ಇದ್ದ ಶ್ರೀಗಳು ಇಷ್ಟಲಿಂಗ ಪೂಜೆಯನ್ನೂ ನೆರವೇರಿಸಿದ್ದರು.
ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !