ಒಂದು ಲಕ್ಷ ಶ್ರೀಲಂಕಾದ ತಮಿಳರ ಪರ ದನಿ ಎತ್ತಿದ್ದ ಶ್ರೀ ಶ್ರೀ

ಚೆನ್ನೈ, ಡಿಸೆಂಬರ್ 11: ಆರ್ಟ್ ಆಫ್ ಲಿವಿಂಗ್ ನ ಆಧಾತ್ಮ ಗುರು ಶ್ರೀ ಶ್ರೀ ರವಿಶಂಕರ್ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸಾಹಿತಿ ವೈರಮುತ್ತು ಅವರು ಶ್ರೀಲಂಕಾದಲ್ಲಿರುವ ತಮಿಳು ನಿರಾಶ್ರಿತರಿಗೆ ಭಾರತದ ಪೌರತ್ವ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮೂರು ದಶಕಗಳಿಗಿಂತಲೂ ಅಧಿಕ ಕಾಲ ಭಾರತದಲ್ಲಿ ನೆಲೆಸಿರುವ ಶ್ರೀಲಂಕಾದ ತಮಿಳು ನಿರಾಶ್ರಿತರಿಗೆ ಭಾರತದ ಪೌರತ್ವ ನೀಡುವಂತೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಟ್ವೀಟ್ ಮಾಡಿದ್ದಾರೆ.

Sri Sri Ravi Shankar urges Centre to grant citizenship to over 1 lakh Sri Lankan Tamils

ರಾಷ್ಟ್ರೀಯ ಪೌರತ್ವ ತಿದ್ದುಪಡಿ ವಿಧೇಯಕ ಇಂದು ಭಾರತದಲ್ಲಿ ಬಹು ಚರ್ಚೆಯ ವಿಷಯವಾಗಿದೆ. ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿದ್ದು, ರಾಜ್ಯಸಭೆಯಲ್ಲಿ ಇಂದು ಮಂಡನೆಯಾಗಲಿದ್ದು, ಪ್ರಾದೇಶಿಕ ಪಕ್ಷಗಳ ಬೆಂಬಲದಿಂದ ಮಸೂದೆ ಅಂಗೀಕಾರವಾಗುವ ನಿರೀಕ್ಷೆಯಿದೆ.

ಈ ವಿಧೇಯಕಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಸಂವಿಧಾನದ ಆಶಯಗಳಿಗೆ ಇದು ವಿರುದ್ಧವಾಗಿದೆ ಎಂಬ ಆಕ್ರೋಶ ವ್ಯಕ್ತಪಡಿಸಲಾಗಿದೆ. ಇದರ ಜೊತೆಗೆ ಈಶಾನ್ಯ ಭಾರತದಲ್ಲಿ ಪ್ರತಿಭಟನೆಯೂ ನಡೆಯುತ್ತಿದೆ.

ದೆಹಲಿ, ರಾಜಸ್ತಾನ ಸೇರಿ ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಪಾಕಿಸ್ತಾನ, ಬಾಂಗ್ಲಾ, ಅಫ್ಘಾನಿಸ್ತಾನದಿಂದ ಬಂದ ಹಿಂದು, ಸಿಖ್, ಜೈನ, ಬೌದ್ಧ, ಪಾರ್ಸಿ, ಕ್ರಿಶ್ಚಿಯನ್ ಧರ್ಮದವರು ಭಾರತದ ಶಾಶ್ವತ ಪ್ರಜೆಗಳನ್ನಾಗಿ ಮಾಡಿ ಎಂದು ಮನವಿ ಮಾಡಿದ್ದರು. ಪೌರತ್ವ ಕಾಯ್ದೆ ಪ್ರಕಾರ , ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ನೀಡಲು ಅವಕಾಶವಿಲ್ಲ. ಆದರೆ ಹೊಸ ತಿದ್ದುಪಡಿ ಮಸೂದೆ ಅನ್ವಯ ಮುಸ್ಲಿಮೇತರರಿಗೆ ಸೇರಿದ ಅಕ್ರಮ ವಲಸಿಗರು ಭಾರತದಲ್ಲಿ ಅನೇಕ ವರ್ಷಗಳಿಂದ ನೆಲೆಸಿದ್ದರೆ ಇಲ್ಲಿನ ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಅಂಶವನ್ನು ಅನೇಕ ಮುಸ್ಲಿಮರು ವಿರೋಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+