ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ಇಡಿ ವಿಚಾರಣೆ ಒಂದು ರಾಜಕೀಯ ಸೇಡಿನ ಕ್ರಮ: ಸ್ಟಾಲಿನ್ ಟೀಕೆ

|
Google Oneindia Kannada News

ಚೆನ್ನೈ, ಜೂ. 15: ರಾಹುಲ್‌ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸೇರಿಂದತೆ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಇದು ರಾಜಕೀಯ ಸೇಡಿನ ಕ್ರಮ ಎಂದು ಹೇಳಿದ್ದಾರೆ.

ಮೂರನೇ ದಿನವೂ ವಿಚಾರಣೆ: ಮೂರನೇ ದಿನಕ್ಕಾಗಿ ರಾಹುಲ್ ಗಾಂಧಿಗೆ ಇಡಿ ಸಮನ್ಸ್ಮೂರನೇ ದಿನವೂ ವಿಚಾರಣೆ: ಮೂರನೇ ದಿನಕ್ಕಾಗಿ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ಡಿಎಂಕೆ ನೇತಾರರು ಆಗಿರುವ ಎಂ.ಕೆ. ಸ್ಟಾಲಿನ್ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ ಕ್ರಮವನ್ನು ಖಂಡಿಸಿ, ಇದು ರಾಷ್ಟ್ರೀಯ ಪಕ್ಷ ಕೇಂದ್ರದ ಆಡಳಿತಾರೂಢ ಬಿಜೆಪಿಯ ವಿರುದ್ಧ ತನಿಖಾ ಸಂಸ್ಥೆಯನ್ನು ರಾಜಕೀಯ ಸೇಡಿನ ಅತಿರೇಕದ ಕೃತ್ಯಕ್ಕೆ ಬಳಸಲಾಗುತ್ತಿದೆ ಎಂದು ಬಣ್ಣಿಸಿದ್ದಾರೆ.

Stalin Says Rahul Gandhi Trial is a Political Revenge

ರಾಜಕೀಯ ವಿರೋಧಿಗಳ ವಿರುದ್ಧ ರಾಜಕೀಯವಾಗಿಯೇ ಹೋರಾಡಬೇಕು ಎಂದು ಸ್ಟಾಲಿನ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ವಿರುದ್ಧ ಆಡಳಿತಾರೂಢ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ರಾಜಕೀಯ ಸೇಡಿನ ಅತಿರೇಕದ ಕೃತ್ಯವನ್ನು ನಾನು ಖಂಡಿಸುತ್ತೇನೆ. ಜನಸಾಮಾನ್ಯರ ತುರ್ತು ಸಮಸ್ಯೆಗಳಿಗೆ ಉತ್ತರಿಸಲಾಗದ ಬಿಜೆಪಿ ಸಾರ್ವಜನಿಕರ ಆಕ್ರೋಶದಿಂದ ಪಾರಾಗಲು ಇಂತಹ ದಿಕ್ಕು ತಪ್ಪಿಸುವ ತಂತ್ರಗಳನ್ನು ಬಳಸುತ್ತಿದೆ. ರಾಜಕೀಯ ವಿರೋಧಿಗಳ ವಿರುದ್ಧ ರಾಜಕೀಯವಾಗಿ ಹೋರಾಟ ನಡೆಸಬೇಕೇ ಹೊರತು ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸುವ ಮೂಲಕ ಅಲ್ಲ ಎಂದು ಅವರು ಹೇಳಿದರು.

Stalin Says Rahul Gandhi Trial is a Political Revenge

Recommended Video

PM Kisan Samman Yajaneಯಿಂದ ಹಣ ಪಡೆದ ರೈತರು ಈಗ ವಾಪಸ್ ಕೊಡ್ಬೇಕು | Oneindia Kannada

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್‌ನಿಂದ ಪ್ರಚಾರಗೊಂಡಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಹಣಕಾಸು ಅಕ್ರಮಗಳ ತನಿಖೆಯ ಭಾಗವಾಗಿ ಇಡಿ ಸೋಮವಾರ ಮತ್ತು ಮಂಗಳವಾರ ರಾಹುಲ್ ಗಾಂಧಿಯನ್ನು ಪ್ರಶ್ನಿಸಿದೆ. ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಎಜೆಎಲ್‌ ಪ್ರಕಟಿಸಿದೆ. ಇದು ಯಂಗ್ ಇಂಡಿಯನ್ ಒಡೆತನದಲ್ಲಿದೆ. ಕೋವಿಡ್-ಸಂಬಂಧಿತ ಸಮಸ್ಯೆಗಳಿಂದಾಗಿ ಪ್ರಸ್ತುತ ನವದೆಹಲಿಯ ಆಸ್ಪತ್ರೆಗೆ ದಾಖಲಾಗಿರುವ ರಾಹುಲ್ ಅವರ ತಾಯಿ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನೂ ಜೂನ್ 23 ರಂದು ಪ್ರಕರಣದ ವಿಚಾರಣೆಗಾಗಿ ಇಡಿ ಸಮನ್ಸ್ ನೀಡಿದೆ.

(ಒನ್ಇಂಡಿಯಾ ಸುದ್ದಿ)

English summary
Several Congress leaders have expressed outrage over Rahul Gandhi's interrogation by an enforcement officer. Now, Tamil Nadu Chief Minister M.K. Stalin called it a political revenge.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X