ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌: ಮತ್ತೆ ಮರಣೋತ್ತರ ಪರೀಕ್ಷೆಗೆ ಹೈಕೋರ್ಟ್ ಆದೇಶ

|
Google Oneindia Kannada News

ಚೆನ್ನೈ, ಜುಲೈ, 18: ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ಉದ್ವಿಗ್ನತೆಗೆ ಕಾರಣವಾಗಿದ್ದ ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮತ್ತೊಂದು ಸುತ್ತಿನ ಮರಣೋತ್ತರ ಪರೀಕ್ಷೆಗೆ ಆದೇಶಿಸಿದೆ.

ಚೆನ್ನೈನಿಂದ 260 ಕಿ.ಮೀ ದೂರದಲ್ಲಿರುವ ಕಲ್ಲಾಕುರಿಚಿಯಲ್ಲಿ ಜುಲೈ 13ರಂದು ಶಾಲಾ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕರ ಮೇಲೆ ಆರೋಪ ಮಾಡಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದರಿಂದ ಪ್ರತಿಭಟನಾಕಾರರು ಕಲ್ಲಾಕುರಿಚಿ ನಗರದಲ್ಲಿ ಶಾಲಾ ಬಸ್​ಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ತನಿಖೆ ನಡೆಸುವಂತೆ ಪಟ್ಟು ಹಿಡಿದಿದ್ದರು. ಖಾಸಗಿ ವಸತಿ ಶಾಲೆಯ ಕ್ಯಾಂಪಸ್‌ನಲ್ಲಿ ಗುಂಪೊಂದು ದೌರ್ಜನ್ಯ ನಡೆಸಿದ ಒಂದು ದಿನದ ನಂತರ ನ್ಯಾಯಾಲಯ ತೀರ್ಪು ಹೊರಡಿಸಿದ್ದು, ಗಲಭೆಕೋರರು ಮತ್ತು ಅವರಿಗೆ ಪ್ರಚೋದನೆ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಆಗುವ ಸಾವುಗಳ ಪ್ರಕರಣಗಳನ್ನು ಸಿಐಡಿ ತನಿಖೆ ನಡೆಸಬೇಕು ಎಂದು ಹೇಳಿದೆ.

ವಿದ್ಯಾರ್ಥಿನಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಶಾಲೆಯ ಪ್ರಧಾನ ಕಾರ್ಯದರ್ಶಿಗಳನ್ನು ಬಂಧಿಸಿದ್ದೇವೆ. ಕ್ಯಾಂಪಸ್‌ನಲ್ಲಿ ಗಲಭೆ ನಡೆಸಿದ್ದವರೆನ್ನಲಾದ ನೂರಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಹಾಗೂ ಬಾಲಕಿ ಹಾಸ್ಟೆಲ್‌ನ 3ನೇ ಮಹಡಿಯಿಂದ ಜಿಗಿದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Student suicide case: High Court orders another round of postmortem

ವಿದ್ಯಾರ್ಥಿನಿಗೆ ಇಬ್ಬರು ಶಿಕ್ಷಕರು ಮಾನಸಿಕವಾಗಿ ಕಿರುಕುಳ ಮತ್ತು ಅವಮಾನ ಮಾಡಿದ್ದಾರೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದರು. ಬಾಲಕಿಯು ತಾನು ಹಲವಾರು ವಿಷಯಗಳಲ್ಲಿ ಕಷ್ಟಪಡುತ್ತಿದ್ದೇನೆ ಮತ್ತು ತನ್ನ ಶೈಕ್ಷಣಿಕ ಸಾಧನೆಗಾಗಿ ತನ್ನ ಶಿಕ್ಷಕರಿಂದ ಅವಮಾನಿತಳಾಗಿದ್ದೇನೆ ಎಂದು ಮರಣ ಪತ್ರದಲ್ಲಿ ಬರೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಬಾಲಕಿ ಶವವಾಗಿ ಪತ್ತೆಯಾದ ಸ್ಥಳದ ಬಳಿಯ ಗೋಡೆಯೊಂದರಲ್ಲಿ ರಕ್ತಸಿಕ್ತ ಅಂಗೈಯ ಗುರುತು ಇದೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಸರಿಯಾಗಿ ತನಿಖೆ ನಡೆಸಬೇಕೆಂದು ತಮಿಳುನಾಡಿನ ಎಲ್ಲೆಡೆ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಕಡಲೂರು ಜಿಲ್ಲೆಯ ಪೆರಿಯನಸಲೂರು ಗ್ರಾಮದಲ್ಲೂ ಜನರು ಪ್ರತಿಭಟನೆ ನಡೆಸಿದ್ದಾರೆ.

Student suicide case: High Court orders another round of postmortem

ನಿನ್ನೆ ಶಾಲಾ ಆವರಣದ ಹೊರಗೆ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ ಸುಮಾರು 15 ಬಸ್‌ಗಳಿಗೆ ಬೆಂಕಿ ಹಚ್ಚಿದರು. ಘಟನೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಯಾವುದೇ ಅಹಿತಕರ ಘಟನೆ ನಡೆಯದಂತೆ ಜುಲೈ 31ರವರೆಗೆ ಕಲ್ಲಾಕುರಿಚಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆ ನಡೆಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

English summary
Madras High Court has ordered another round of postmortem in connection with the schoolgirl suicide case that caused tension in Tamil Nadu's Kallakurichy. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X