ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನ ಥೇಣಿಯಲ್ಲಿ ಮಕ್ಕಳು, ಪೋಷಕರು ಸೇರಿ 41 ಮಂದಿಗೆ ಕೊರೊನಾ

|
Google Oneindia Kannada News

ಥೇಣಿ ಜುಲೈ 8: ಕಳೆದ ಎರಡು ದಿನಗಳಲ್ಲಿ ತಮಿಳುನಾಡಿನ ಥೇಣಿ ಜಿಲ್ಲೆಯ ಆಂಡಿಪಟ್ಟಿಯಲ್ಲಿರುವ ಸರ್ಕಾರಿ ಶಾಲೆಯ 31 ವಿದ್ಯಾರ್ಥಿಗಳಲ್ಲಿ ಕೋವಿಡ್ -19 ವೈರಸ್ ಇರುವುದು ವರದಿಯಾಗಿದೆ. ವಿದ್ಯಾರ್ಥಿಗಳ ಹೊರತಾಗಿ, ಪೋಷಕರು ಸೇರಿದಂತೆ ಇತರ 10 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಹಲವಾರು ವಿದ್ಯಾರ್ಥಿಗಳಿಗೆ ಶೀತದ ಲಕ್ಷಣಗಳು ಕಾಣಿಸಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ.

ಜಿಲ್ಲಾ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಗುರುವಾರ ಜುಲೈ 7 ರಂದು, 12 ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ದೃಢವಾದರೆ, ಶುಕ್ರವಾರ ಇನ್ನೂ 19 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಪರೀಕ್ಷೆಯಿಂದ ತಿಳಿದು ಬಂದಿದೆ.

31 ವಿದ್ಯಾರ್ಥಿಗಳ ಹೊರತಾಗಿ, ಶಾಲೆಯಲ್ಲಿ ಪೋಷಕರು ಮತ್ತು ಇತರರು ಸೇರಿದಂತೆ 10 ಜನರಿಗೂ ಕೊರೊನಾ ಹರಡಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 41 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಅಧಿಕಾರಿಗಳು ಶಾಲೆ ಮತ್ತು ಅದರ ಸುತ್ತಮುತ್ತಲಿನ ನೈರ್ಮಲ್ಯೀಕರಣದ ಉಪಕ್ರಮಗಳನ್ನು ಪ್ರಾರಂಭಿಸಿದ್ದಾರೆ. ಮುಂದಿನ ಮೂರು ದಿನಗಳ ಕಾಲ ಶಾಲೆಯನ್ನು ಮುಚ್ಚುವಂತೆಯೂ ಆದೇಶಿಸಲಾಗಿದೆ.

Tamil nadu 31 govt school students, 10 others including parents, test Covid-19 positive

ಜುಲೈ 7 ಗುರುವಾರ ರಾಜ್ಯದಲ್ಲಿ 2,765 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ರಾಜಧಾನಿ ಚೆನ್ನೈನಲ್ಲಿ 1,011 ಹೊಸ ಪ್ರಕರಣಗಳು, ಚೆಂಗಲ್‌ಪೇಟ್ 408 ಹೊಸ ಪ್ರಕರಣಗಳು ಮತ್ತು ಕೊಯಮತ್ತೂರಿನಲ್ಲಿ 125 ಹೊಸ ಪ್ರಕರಣಗಳು ದಾಖಲಾಗಿವೆ. ತಮಿಳುನಾಡಿನಲ್ಲಿ ಗುರುವಾರಕ್ಕೆ ಒಟ್ಟು 18,378 ಸಕ್ರಿಯ ಪ್ರಕರಣಗಳಿವೆ.

ಭಾರತದಲ್ಲಿ ಕೊರೊನಾ:-

ಭಾರತದಲ್ಲಿ ಒಂದೇ ದಿನ 18,815 ಹೊಸ ಕೊರೊನವೈರಸ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಒಟ್ಟು ಈವರೆಗೆ 4,35,85,554 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳು 1,22,335 ಕ್ಕೆ ಏರಿಕಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯು ಶುಕ್ರವಾರ ತಿಳಿಸಿದೆ. 38 ಹೊಸ ಸಾವುಗಳೊಂದಿಗೆ ಸಾವಿನ ಸಂಖ್ಯೆ 5,25,343 ಕ್ಕೆ ಏರಿಕೆಯಾಗಿದೆ.

Tamil nadu 31 govt school students, 10 others including parents, test Covid-19 positive

ಒಟ್ಟು ಸಕ್ರಿಯ ಪ್ರಕರಣಗಳು ಶೇಕಡಾ 0.28 ರಷ್ಟಿದ್ದರೆ, ರಾಷ್ಟ್ರೀಯ ಕೋವಿಡ್ -19 ಚೇತರಿಕೆ ದರವು ಶೇಕಡಾ 98.51 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ದೈನಂದಿನ ಸಕಾರಾತ್ಮಕತೆಯ ದರವು ಶೇಕಡಾ 4.96 ರಷ್ಟಿದ್ದರೆ, ಸಾಪ್ತಾಹಿಕ ಸಕಾರಾತ್ಮಕತೆಯ ದರವು ಶೇಕಡಾ 4.09 ರಷ್ಟಿದೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳು 2,878 ದಾಖಲಾಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,29,37,876 ಕ್ಕೆ ಏರಿದೆ.

ಸಚಿವಾಲಯದ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 198.51 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

English summary
As many as 31 students have tested positive for Covid-19 in a government school in Andipatti in Tamil Nadu’s Theni district in the last two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X