38 ಬ್ಯಾಂಕ್ ಸಿಬ್ಬಂದಿಗೆ ಸೋಂಕು; ಗ್ರಾಹಕರಿಗೆ ಆತಂಕ
ಚೆನ್ನೈ, ಜುಲೈ 26 : ತಮಿಳುನಾಡಿನಲ್ಲಿ ಕೊರೊನಾ ವೈರಸ್ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದ ಬ್ಯಾಂಕ್‌ವೊಂದರ ಮುಖ್ಯ ಕಚೇರಿಯ 38 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಬ್ಯಾಂಕ್‌ಗೆ ಹೋಗಿದ್ದ ಗ್ರಾಹಕರಿಗೆ ಆತಂಕ ಶುರುವಾಗಿದೆ.
ತಿರುಚಿರಾಪಳ್ಳಿ ನಗರದ ಬ್ಯಾಂಕ್‌ವೊಂದರ ಮುಖ್ಯ ಕಚೇರಿಯ 38 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಬ್ಯಾಂಕ್‌ಗೆ ಭೇಟಿ ನೀಡಿದ್ದ ಗ್ರಾಹಕರು ಸ್ವಯಂ ಪ್ರೇರಿತರವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಕರೆ ನೀಡಿದ್ದಾರೆ.
ತಮಿಳುನಾಡಿನ ತಿರುಚಿರಾಪಳ್ಳಿ ನಗರದಲ್ಲಿ ಇದುವರೆಗೂ 3,289 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. 57 ಜನರು ಮೃತಪಟ್ಟಿದ್ದಾರೆ. ನಗರದ ಬ್ಯಾಂಕ್‌ನ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ಹರಡಿರುವುದು ಎಲ್ಲಿಂದ ಎಂದು ಆರೋಗ್ಯ ಇಲಾಖೆ ಮಾಹಿತಿ ಸಂಗ್ರಹ ಮಾಡುತ್ತಿದೆ.

ಭಾರತದಲ್ಲಿಯೇ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಇರುವ ರಾಜ್ಯಗಳಲ್ಲಿ ತಮಿಳುನಾಡು 2ನೇ ಸ್ಥಾನದಲ್ಲಿದೆ. 2,06,737 ಸೋಂಕಿತರು ರಾಜ್ಯದಲ್ಲಿದ್ದಾರೆ. 3,409 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಸೋಂಕು ಹರಡುವಿಕೆ ತಡೆಯಲಿ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆಗಸ್ಟ್ ತಿಂಗಳಿನಲ್ಲಿಯೂ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆಯೇ? ಎಂದು ಕಾದು ನೋಡಬೇಕು.












Click it and Unblock the Notifications