• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

38 ಬ್ಯಾಂಕ್ ಸಿಬ್ಬಂದಿಗೆ ಸೋಂಕು; ಗ್ರಾಹಕರಿಗೆ ಆತಂಕ

|

ಚೆನ್ನೈ, ಜುಲೈ 26 : ತಮಿಳುನಾಡಿನಲ್ಲಿ ಕೊರೊನಾ ವೈರಸ್ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದ ಬ್ಯಾಂಕ್‌ವೊಂದರ ಮುಖ್ಯ ಕಚೇರಿಯ 38 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಬ್ಯಾಂಕ್‌ಗೆ ಹೋಗಿದ್ದ ಗ್ರಾಹಕರಿಗೆ ಆತಂಕ ಶುರುವಾಗಿದೆ.

ತಿರುಚಿರಾಪಳ್ಳಿ ನಗರದ ಬ್ಯಾಂಕ್‌ವೊಂದರ ಮುಖ್ಯ ಕಚೇರಿಯ 38 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಬ್ಯಾಂಕ್‌ಗೆ ಭೇಟಿ ನೀಡಿದ್ದ ಗ್ರಾಹಕರು ಸ್ವಯಂ ಪ್ರೇರಿತರವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಕರೆ ನೀಡಿದ್ದಾರೆ.

ರಾಜ್ಯದಲ್ಲಿ ಮತ್ತೆ 5 ಸಾವಿರ ಸೋಂಕು, ತಮಿಳುನಾಡು ಹಿಂದಿಕ್ಕಿದ ಕರ್ನಾಟಕ

ತಮಿಳುನಾಡಿನ ತಿರುಚಿರಾಪಳ್ಳಿ ನಗರದಲ್ಲಿ ಇದುವರೆಗೂ 3,289 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. 57 ಜನರು ಮೃತಪಟ್ಟಿದ್ದಾರೆ. ನಗರದ ಬ್ಯಾಂಕ್‌ನ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ಹರಡಿರುವುದು ಎಲ್ಲಿಂದ ಎಂದು ಆರೋಗ್ಯ ಇಲಾಖೆ ಮಾಹಿತಿ ಸಂಗ್ರಹ ಮಾಡುತ್ತಿದೆ.

ಚೆನ್ನೈ ತರಕಾರಿ ಮಾರುಕಟ್ಟೆಯ 150 ಮಂದಿಗೆ ಕೋವಿಡ್ ಪರೀಕ್ಷೆ

ಭಾರತದಲ್ಲಿಯೇ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಇರುವ ರಾಜ್ಯಗಳಲ್ಲಿ ತಮಿಳುನಾಡು 2ನೇ ಸ್ಥಾನದಲ್ಲಿದೆ. 2,06,737 ಸೋಂಕಿತರು ರಾಜ್ಯದಲ್ಲಿದ್ದಾರೆ. 3,409 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ ಮತ್ತು ಕೇರಳದ ಕೊವಿಡ್-19 ಕಥೆ

ರಾಜ್ಯದಲ್ಲಿ ಸೋಂಕು ಹರಡುವಿಕೆ ತಡೆಯಲಿ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆಗಸ್ಟ್ ತಿಂಗಳಿನಲ್ಲಿಯೂ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆಯೇ? ಎಂದು ಕಾದು ನೋಡಬೇಕು.

English summary
In Tamil Nadu's Tiruchirappalli city 38 employees of main branch of bank tested positive for COVID - 19. Customers who visited bank advised to appear for tests.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X