• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಮಿಳುನಾಡಿನಲ್ಲಿ 2ನೇ ಡೋಸ್ ಕೊರೊನಾ ಲಸಿಕೆ ಪಡೆದ ನಟ ರಜನಿಕಾಂತ್

|

ಚೆನ್ನೈ, ಮೇ 13: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆ ಸೂಪರ್ ಸ್ಟಾರ್ ರಜನಿಕಾಂತ್ ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ತಂದೆ ಕೊವಿಡ್-19 ಲಸಿಕೆ ಪಡೆದಿರುವ ಬಗ್ಗೆ ಅವರ ಪುತ್ರಿ ಸೌಂದರ್ಯ ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.

"ನಮ್ಮ ತಲೈವಾ ಅವರು ತಮ್ಮ ಕೊರೊನಾವೈರಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಕೊರೊನಾವೈರಸ್ ವಿರುದ್ಧದ ಈ ಯುದ್ಧವನ್ನು ನಾವೆಲ್ಲ ಒಟ್ಟಾಗಿ ಹೋರಾಡಿ ಗೆಲ್ಲೋಣ" ಎಂದು ಸೌಂದರ್ಯ ರಜನಿಕಾಂತ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸೂಪರ್ ಸ್ಟಾರ್ ಸೋತಿದ್ದು ಎಲ್ಲಿ; ತಮಿಳುನಾಡು ರಾಜಕೀಯದಲ್ಲಿ ರಜನಿಕಾಂತ್!ಸೂಪರ್ ಸ್ಟಾರ್ ಸೋತಿದ್ದು ಎಲ್ಲಿ; ತಮಿಳುನಾಡು ರಾಜಕೀಯದಲ್ಲಿ ರಜನಿಕಾಂತ್!

ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಪಿಪಿಇ ಕಿಟ್ ಧರಿಸಿದ ವೈದ್ಯಕೀಯ ಸಿಬ್ಬಂದಿಯೊಬ್ಬರು ಕೊರೊನಾವೈರಸ್ ಲಸಿಕೆ ನೀಡುತ್ತಿರುವುದು ಹಾಗೂ ಈ ವೇಳೆ ತಲೈವಾ ಅವರು ಮಾಸ್ಕ್ ಧರಿಸಿ ಕುಳಿತಿರುವ ಫೋಟೋವನ್ನು ಶೇರ್ ಮಾಡಲಾಗಿದೆ. ಆದರೆ ರಜನಿಕಾಂತ್ ಅವರು ಯಾವ ಕೊವಿಡ್-19 ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಸ್ಪಷ್ಟವಾಗಿ ಗೊತ್ತಾಗಿಲ್ಲ.

ಕೊರೊನಾ ಲಸಿಕೆ ಪಡೆದ ನಟ ಕಮಲ್ ಹಾಸನ್:

ತಮಿಳುನಾಡಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅಷ್ಟೇ ಅಲ್ಲದೇ ಮತ್ತೊಬ್ಬ ಪ್ರಖ್ಯಾತ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಕೂಡಾ ಗುರುವಾರ ಕೊರೊನಾವೈರಸ್ ಲಸಿಕೆಯ ಎರಡನೇ ಡೋಸ್ ಅನ್ನು ಪಡೆದುಕೊಂಡಿದ್ದಾರೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಇಬ್ಬರು ಹಿರಿಯ ನಟರು ಕೊವಿಡ್-19 ಲಸಿಕೆಯನ್ನು ಪಡೆದಿದ್ದರು.

English summary
Tamil Nadu: Actor Rajinikanth Took Second Dose of Coronavirus Vaccination In Chennai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X