ಕೊವಿಡ್ 19: ತಮಿಳುನಾಡು ಕೃಷಿ ಸಚಿವರ ಸ್ಥಿತಿ ಗಂಭೀರ
ಚೆನ್ನೈ,ಅಕ್ಟೋಬರ್ 31: ತಮಿಳುನಾಡು ಕೃಷಿ ಸಚಿವ ಆರ್ ದುರೈಕಣ್ಣು ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ಕಾವೇರಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಗರಿಷ್ಠ ಜೀವ ರಕ್ಷಕದ ಹೊರತಾಗಿಯೂ ಸಚಿವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಅರವಿಂದನ್ ಸೆಲ್ವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 72 ವರ್ಷದ ದೊರೈಕಣ್ಣಾ ಅವರು ಅಕ್ಟೋಬರ್ 13ರಂದು ಕೋವಿಡ್-19 ಪರೀಕ್ಷೆ ಮಾಡಿಸಿದ್ದರು. ವರದಿ ಪಾಸಿಟಿವ್ ಬಂದಿದ್ದರಿಂದ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

ದೇಶದಲ್ಲಿ ಮತ್ತೆ 50 ಸಾವಿರಕ್ಕೂ ಕಡಿಮೆ ಕೋವಿಡ್ ಪ್ರಕರಣ ವರದಿಯಾಗಿದೆ. ಭಾರತದಲ್ಲಿ 24 ಗಂಟೆಗಳಲ್ಲಿ 48,268 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಬಾರಿ ಕೂಡ ಹೊಸ ಪ್ರಕರಣಗಳಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆಯೇ ಅಧಿಕವಾಗಿರುವುದು ಸಮಾಧಾನ ಮೂಡಿಸಿದೆ.
ಕಳೆದ 24 ಗಂಟೆಗಳಲ್ಲಿ 551 ಮಂದಿ ಕೊರೊನಾ ವೈರಸ್‌ನಿಂದ ಬಲಿಯಾಗಿದ್ದಾರೆ. ಇದರಿಂದ ದೇಶದಲ್ಲಿ ವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,21,641ಕ್ಕೆ ಏರಿಕೆಯಾಗಿದೆ. ಶುಕ್ರವಾರದ ಅಂತ್ಯದ ವೇಳೆಗೆ 59,454 ಮಂದಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೂ 74,32,829 ಮಂದಿ ಗುಣಮುಖರಾಗಿ ಮನೆಗೆ ಮರಳಿದಂತಾಗಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಐದು ಲಕ್ಷಕ್ಕಿಂತ ಕಡಿಮೆಯಾಗಿರುವುದು ಮತ್ತೊಂದು ಗಮನಾರ್ಹ ಸಾಧನೆ. ಶನಿವಾರದ ಬೆಳಗಿನ ವೇಳೆಗೆ ದೇಶದಲ್ಲಿ 5,82,649 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ದಾಖಲಾದ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 81,37,119ಕ್ಕೆ ತಲುಪಿದೆ.












Click it and Unblock the Notifications