Breaking: ತಮಿಳುನಾಡಿನಲ್ಲಿ ಮತ್ತೊಬ್ಬ ಬಾಲಕಿ ಸಾವು, 3ನೇ ಪ್ರಕರಣ
ಚೆನ್ನೈ, ಜುಲೈ 26: ತಮಿಳುನಾಡಿನಲ್ಲಿ ಬಾಲಕಿಯರ ಸಾವಿನ ಪ್ರಕರಣಗಳು ಮುಂದುವರೆಯುತ್ತಲೇ ಇವೆ. ಎರಡು ವಾರಗಳಲ್ಲಿ ಮೂವರು ವಿದ್ಯಾರ್ಥಿನಿಯರು ಜೀವ ಕಳೆದುಕೊಂಡಿದ್ದಾರೆ. ಕಡಲೂರು ಜಿಲ್ಲೆಯಲ್ಲಿ ಮಂಗಳವಾರ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಿರುವಳ್ಳೂರಿನಲ್ಲಿ 12 ನೇ ತರಗತಿಯ ಬಾಲಕಿಯೊಬ್ಬಳು ಸಾವನ್ನಪ್ಪಿದ ಸುಮಾರು 24 ಗಂಟೆಗಳ ಅಂತರದಲ್ಲಿಯೇ ಮತ್ತೊಬ್ಬ ವಿದ್ಯಾರ್ಥಿನಿ ಸಾವಿಗೀಡಾಗಿರುವುದು ಆತಂಕ ಮೂಡಿಸಿದೆ. ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ಸಾವನ್ನಪ್ಪಿದ 12 ನೇ ತರಗತಿಯ ಮೂರನೇ ವಿದ್ಯಾರ್ಥಿನಿಯಾಗಿದ್ದಾರೆ.
ತಾಯಿ ಗದರಿಸಿದ್ದರಿಂದ ಬಾಲಕಿ ನೊಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಹದಿಹರೆಯದ ವಿದ್ಯಾರ್ಥಿನಿಯರ ಸಾವು ಪದೇ ಪದೇ ವರದಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಆತ್ಮಹತ್ಯೆಯ ಆಲೋಚನೆಗಳನ್ನು ದೂರವಿಡುವಂತೆ ಯುವಜನತೆಯಲ್ಲಿ ಮನವಿ ಮಾಡಿದ್ದಾರೆ.
ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ಸೋಮವಾರ (ಜುಲೈ 25) ತನ್ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಶವಪರೀಕ್ಷೆ ವೇಳೆ CB-CID ಅಧಿಕಾರಿಗಳು ಮತ್ತು ಮೃತ ಬಾಲಕಿಯ ತಾಯಿ ಮತ್ತು ಸಹೋದರನ ಸಮ್ಮುಖದಲ್ಲಿ ವೀಡಿಯೊ ರೆಕಾರ್ಡಿಂಗ್ ಮಾಡಲಾಗಿದೆ. ಬಾಲಕಿಯ ಪರ ವಕೀಲ ಅರುಣ್, ತಿರುಟ್ಟಣಿ ಶಾಸಕ ಎಸ್ ಚಂದ್ರನ್ ಮತ್ತು ಡಿಎಂಕೆಯ ತಿರುವಳ್ಳೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಕೂಡ ಈ ವೇಳೆ ಶವಗಾರದಲ್ಲಿ ಉಪಸ್ಥಿತರಿದ್ದರು.
ಇನ್ನು, ಜುಲೈ 13 ರಂದು, ಕಲ್ಲಕುರಿಚಿ ಜಿಲ್ಲೆಯ ಶಾಲೆಯೊಂದರ 12 ನೇ ತರಗತಿಯ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿತ್ತು. ಸಾವು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರಿಗೆ ಗಾಯಗಳಾಗಿದ್ದವು. ಪ್ರತಿಭಟನಾಕಾರರು ಕನಿಷ್ಠ 15 ಬಸ್‌ಗಳಿಗೆ ಬೆಂಕಿ ಹಚ್ಚಿದ್ದರು.
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications