Breaking: ತಮಿಳುನಾಡಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಶವವಾಗಿ ಪತ್ತೆ

ಚೆನ್ನೈ, ಜುಲೈ 25: ತಮಿಳುನಾಡಿನಲ್ಲಿ ಮತ್ತೊಬ್ಬ 12ನೇ ತರಗತಿಯ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ಸೋಮವಾರ (ಜುಲೈ 25) ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿನಿಯ ಕೊಠಡಿಯಲ್ಲಿಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈಗಲೇ ನಾವು ಹೆಚ್ಚಿಗೆ ಏನನ್ನೂ ಹೇಳಲಾಗದು. ಪ್ರಕರಣವನ್ನು ರಾಜ್ಯ ಪೊಲೀಸರ ಸಿಬಿ-ಸಿಐಡಿ ವಿಭಾಗಕ್ಕೆ ವರ್ಗಾಯಿಸಲಾಗಿದೆ" ಎಂದು ತಿರುವಳ್ಳೂರಿನ ಪೊಲೀಸ್ ವರಿಷ್ಠಾಧಿಕಾರಿ ಸೆಫಾಸ್ ಕಲ್ಯಾಣ್ ತಿಳಿಸಿದ್ದಾರೆ.

Tamil Nadu another Class 12 Student Found Dead In Hostel

ಮೃತ ವಿದ್ಯಾರ್ಥಿನಿಯ ಪೋಷಕರು ಮತ್ತು ಸಂಬಂಧಿಕರ ಪ್ರತಿಭಟನೆ ನಡೆಯುವ ಭೀತಿಯ ನಡುವೆ ಶಾಲೆಗೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ವಿದ್ಯಾರ್ಥಿನಿ ಸರಳಾ ತಮಿಳುನಾಡಿನ ತಿರುಟ್ಟಣಿಯವರಾಗಿದ್ದು, ಯಾವುದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ಆಕೆಯ ಗ್ರಾಮದಲ್ಲಿಯೂ ಭದ್ರತೆ ಕೈಗೊಳ್ಳಲಾಗಿದೆ.

ಜುಲೈ 13 ರಂದು, ಕಲ್ಲಕುರಿಚಿ ಜಿಲ್ಲೆಯ ಶಾಲೆಯೊಂದರ 12 ನೇ ತರಗತಿಯ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿತ್ತು. ಸಾವು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರಿಗೆ ಗಾಯಗಳಾಗಿದ್ದವು. ಪ್ರತಿಭಟನಾಕಾರರು ಕನಿಷ್ಠ 15 ಬಸ್‌ಗಳಿಗೆ ಬೆಂಕಿ ಹಚ್ಚಿದ್ದರು.

ಆಕೆಯ ಶಾಲೆಯ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಶಿಕ್ಷಕರನ್ನು "ತನ್ನ ಶೈಕ್ಷಣಿಕ ಸಾಧನೆಗಾಗಿ ಅವಮಾನಿಸಿದ್ದಾರೆ" ಎಂದು ವಿದ್ಯಾರ್ಥಿನಿ ಆರೋಪಿಸಿದ್ದಳು.

Recommended Video

      Tiger Crossing Road: ಹುಲಿಯನ್ನ ರಸ್ತೆ ದಾಟಿಸಿದ ಪೊಲೀಸ್ ಅಧಿಕಾರಿ | *India | OneIndia Kannada

      ಬಾಲಕಿಯ ಎರಡು ಮರಣೋತ್ತರ ಪರೀಕ್ಷಾ ವರದಿಗಳನ್ನು ವಿಶ್ಲೇಷಿಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ವೈದ್ಯರ ತಂಡಕ್ಕೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಆದೇಶ ನೀಡಿತ್ತು. ಜೊತೆಗೆ ಶಿಕ್ಷಣ ಸಂಸ್ಥೆಗಳಲ್ಲಿನ ಸಾವುಗಳನ್ನು ಭವಿಷ್ಯದಲ್ಲಿ ರಾಜ್ಯ ತನಿಖಾ ಸಂಸ್ಥೆ ಸಿಬಿ-ಸಿಐಡಿ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಸೂಚಿಸಿತ್ತು.

      COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+