ತಮಿಳುನಾಡು ಚುನಾವಣೆ: 173 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಡಿಎಂಕೆ
ಚೆನ್ನೈ, ಮಾರ್ಚ್ 12: ತಮಿಳುನಾಡು ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದು, ದ್ರಾವಿಡ ಮುನ್ನೇತ್ರ ಕಾಳಗಂ(ಡಿಎಂಕೆ) 173 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.
ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಮತ್ತೊಮ್ಮೆ ಕೊಲತ್ತೂರ್‌ನಿಂದ ಸ್ಪರ್ಧಿಸಲಿದ್ದಾರೆ, ಅವರ ಪುತ್ರ ನಟ-ರಾಜಕಾರಣಿ ಉದಯನಿಧಿ, ಚೆಪಾಕ್-ಟ್ರಿಪ್ಲಿಕೇನ್‌ನಿಂದ ಸ್ಪರ್ಧಿಸಲಿದ್ದಾರೆ.
ಒಟ್ಟು 234 ವಿಧಾನಸಭಾ ಸ್ಥಾನಗಳಲ್ಲಿ 186ರಲ್ಲಿ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಮಂಗಳವಾರ ಸ್ಟಾಲಿನ್ ಅವರು ಪಶ್ಚಿಮ ತಮಿಳುನಾಡು ಮೂಲದ ಕೆಎಂಡಿಕೆ ಜತೆ ಒಪ್ಪಂದ ಮಾಡಿಕೊಂಡಿದೆ. ಇದು ದ್ರಾವಿಡ ಪಕ್ಷದ ರೈಸಿಂಗ್ ಸನ್ ಚಿಹ್ನೆಯ ಮೇಲೆ ಸ್ಪರ್ಧಿಸಲಿದೆ.

ಡಿಎಂಕೆ ಮಿತ್ರ ಪಕ್ಷ ಕಾಂಗ್ರೆಸ್‌ಗೆ 25 ಸ್ಥಾನಗಳನ್ನು ಮತ್ತು ಸಿಪಿಐ, ಸಿಪಿಐ(ಎಂ),ಎಂಡಿಎಂಕೆಗೆ ತಲಾ 6 ಸ್ಥಾನಗಳನ್ನು ನಿಗದಿಪಡಿಸಿದೆ. ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ 12ನೇ ಮಾರ್ಚ್‌ರಂದು ಗೆಜೆಟ್ ಅಧಿಸೂಚನೆ ಪ್ರಕಟವಾಗಲಿದೆ. 19ನೇ ಮಾರ್ಚ್ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 20 ಮಾರ್ಚ್ ನಾಮಪತ್ರ ಪರಿಶೀಲನೆ ನಡೆಯಲಿದೆ.
ನಾಮಪತ್ರ ಹಿಂಪಡೆಯಲು ಮಾರ್ಚ್ 22 ಕೊನೆ ದಿನವಾಗಿದೆ. ಏಪ್ರಿಲ್ 6ರಂದು ತಮಿಳುನಾಡಿನ ಎಲ್ಲ 234 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ತಮಿಳುನಾಡು ವಿಧಾನಸಭೆಯ ಅವಧಿಯು ಮೇ 24ರಂದು ಅಂತ್ಯಗೊಳ್ಳಲಿದೆ. ಚುನಾವಣೆಯ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ.
ಹೀಗಾಗಿ ಅವಧಿ ಪೂರ್ಣಗೊಳ್ಳುವ ಮುನ್ನವೇ ಹಾಲಿ ವಿಧಾನಸಭೆ ವಿಸರ್ಜನೆಯಾಗಿ ಹೊಸ ಸರ್ಕಾರ ಸ್ಥಾಪನೆಯಾಗಬಹುದು. ಆದರೆ ಇದು ಫಲಿತಾಂಶವನ್ನು ಅವಲಂಬಿಸಿದೆ. ತಮಿಳುನಾಡು ವಿಧಾನಸಭೆಯ ಒಟ್ಟು ಸೀಟುಗಳ ಪೈಕಿ 44 ಕ್ಷೇತ್ರಗಳು ಪರಿಶಿಷ್ಟ ಜಾತಿ ಹಾಗೂ ಎರಡು ಸೀಟುಗಳು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾಗಿವೆ.












Click it and Unblock the Notifications