ಕಮಲ್ ಹಾಸನ್ಗೆ ತೀವ್ರ ನಿರಾಸೆ: ಅಂತಿಮ ಸುತ್ತಿನಲ್ಲಿ ಸೋಲು
ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ಸಮಯದಲ್ಲಿ ಗಮನ ಸೆಳೆದಿದ್ದ ಕಮಲ್ ಹಾಸನ್ ಸ್ಥಾಪಿತ ಹೊಸ ಪಕ್ಷ 'ಮಕ್ಕಳ್ ನಿಧಿ ಮಯಂ' ಫಲಿತಾಂಶದಲ್ಲಿ ಗುರುತು ಮೂಡಿಸಲು ವಿಫಲವಾಗಿದೆ.
ಸ್ವತಃ ಕಮಲ್ ಹಾಸನ್ ಸೇರಿದಂತೆ ಪಕ್ಷದ ಯಾವೊಬ್ಬ ಅಭ್ಯರ್ಥಿ ಸಹ ಚುನಾವಣೆಯಲ್ಲಿ ಗೆಲುವು ಸಾಧಿಸಲು ವಿಫಲರಾಗಿದ್ದಾರೆ. ಅಂತಿಮ ಸುತ್ತಿನವರೆಗೂ ಮುನ್ನಡೆಯಲ್ಲಿದ್ದ ಕಮಲ್ ಹಾಸನ್ ಗೆಲುವಿನ ನಿರೀಕ್ಷೆ ಹುಟ್ಟಿಸಿದ್ದರಾದರೂ ಅಂತಿಮವಾಗಿ ಅವರೂ ಸೋಲು ಕಂಡಿದ್ದಾರೆ.
ಕಮಲ್ ಹಾಸನ್ ಅವರ ಮಕ್ಕಳ್ ನಿಧಿ ಮಯಂ ಪಕ್ಷವು 193 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಿತ್ತು. ಕಮಲ್ ಹಾಸನ್ ಅವರು ಕೊಯಂಬತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆರಂಭದ ಕೆಲವು ಸುತ್ತುಗಳ ಮತ ಎಣಿಕೆ ಬಳಿಕ ಮುನ್ನಡೆ ಸಾಧಿಸಿದ್ದ ಕಮಲ್ ಹಾಸನ್ ಕೊನೆಯ ಸುತ್ತಿನಲ್ಲಿ ಸೋಲನುಭವಿಸಿದ್ದಾರೆ.

ಅಂತಿಮ ಮತ ಎಣಿಕೆ ಮುಗಿದಾಗ ಕಮಲ್ ಹಾಸನ್ 49,561 ಮತಗಳನ್ನು ಪಡೆದಿದ್ದರೆ ಬಿಜೆಪಿಯ ಅಭ್ಯರ್ಥಿ ವನತಿ ಶ್ರೀನಿವಾಸ್ 50,798 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 1237 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ. ಕಾಂಗ್ರೆಸ್ನ ಮಯೂರ ಜಯಕುಮಾರ್ 41,081 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
'ಮಕ್ಕಳ್ ನಿಧಿ ಮಯಂ' ಪಕ್ಷವು 2019 ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಿತ್ತು ಆದರೆ ಆಗಲೂ ಯಾವೊಬ್ಬ ಅಭ್ಯರ್ಥಿಯೂ ಸಹ ಜಯ ಸಾಧಿಸಿರಲಿಲ್ಲ. ಈಗ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಸೀಟಾದರೂ ಗೆಲ್ಲುವ ನಿರೀಕ್ಷೆ ಇದೆಯೆಂದು ಕಮಲ್ ಹಾಸನ್ ಹೇಳಿದ್ದರು ಆದರೆ ಅದೂ ಸುಳ್ಳಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications