ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆಗಳು ರದ್ದು

|
Google Oneindia Kannada News

ಚೆನ್ನೈ, ಜೂನ್ 9: ಕೊರೊನಾ ವೈರಸ್ ಭೀತಿ ಹೆಚ್ಚಿರುವ ಕಾರಣ ತಮಿಳುನಾಡಿನಲ್ಲಿ 10ನೇ ತರಗತಿಯ ಪರೀಕ್ಷೆಗಳು ರದ್ದುಗೊಳಿಸಿರುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪರೀಕ್ಷೆ ಬರೆಯದೇ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಹನ್ನೊಂದನೇ ತರಗತಿಯ ಪರೀಕ್ಷೆಗಳನ್ನು ಮುಂದಿನ ವರ್ಷ ನಡೆಸಲು ತೀರ್ಮಾನಿಸಲಾಗಿದೆ.

ತೆಲಂಗಾಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಲ್ಲ: ಅಂಕದ ಬದಲು ಗ್ರೇಡ್ತೆಲಂಗಾಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಲ್ಲ: ಅಂಕದ ಬದಲು ಗ್ರೇಡ್

ಜೂನ್ 15-25ನೇ ತಾರೀಕಿನವರೆಗೂ ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆ ದಿನಾಂಕ ಪ್ರಕಟವಾಗಿತ್ತು. ಆದರೆ, ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ 2020ನೇ ಪರೀಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ರದ್ದು ಮಾಡಿದೆ. ಸುಮಾರು 9.5 ಲಕ್ಷ ವಿದ್ಯಾರ್ಥಿಗಳು ಈ ಸಲ 10ನೇ ತರಗತಿ ಪರೀಕ್ಷೆ ಬರೆಯುತ್ತಿದ್ದರು.

Tamil Nadu class 10th exams Cancelled

ತೆಲಂಗಾಣ ಸರ್ಕಾರವೂ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆ ಇಲ್ಲದೇ ಗ್ರೇಡ್ ಆಧಾರದಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲು ಸೂಚಿಸಿದ್ದಾರೆ.

ಕರ್ನಾಟಕದಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದಂತೆ ತಜ್ಞರು ಶಿಕ್ಷಣ ಸಚಿವರಿಗೆ ಸಲಹೆ ನೀಡಿದ್ದಾರೆ. ಸದ್ಯದವರೆಗೂ ರಾಜ್ಯ ಸರ್ಕಾರ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ನಡೆಸಿಕೊಂಡಿದೆ. ಜೂನ್ 25ರಿಂದ ಜುಲೈ 4ರವರೆಗೂ ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆ ನಡೆಯಲಿದೆ. ಒಟ್ಟು 8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

English summary
Tamil Nadu Chief Minister announced the cancellation of 10th Public Exams. All students declared Pass.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X