Breaking :ತಮಿಳುನಾಡಿನಲ್ಲಿ ನಿಲ್ಲದ ಬಾಲಕಿಯರ ಸಾವು, 4ನೇ ಪ್ರಕರಣ

ಚೆನ್ನೈ, ಜುಲೈ 26: ಕಳೆದೆರಡು ವಾರಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿರುವ ಶಾಲಾ ವಿದ್ಯಾರ್ಥಿನಿಯರ ಭೀಕರ ಸಾವಿನ ಸರಣಿಗೆ 11ನೇ ತರಗತಿ ವಿದ್ಯಾರ್ಥಿನಿಯು ಸೇರಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಶಿವಕಾಶಿಯಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಬಾಲಕಿ ದೀರ್ಘಕಾಲದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ 12 ನೇ ತರಗತಿಯ ಮೂವರು ಬಾಲಕಿಯರು ಮತ್ತು ಈಗ 11 ನೇ ತರಗತಿಯ ಬಾಲಕಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಲ್ಲಿ ಮೂವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ.

Tamil Nadu: Class 11 Girl Dies, 4th case In 2 Weeks

ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬರು ಶವವಾಗಿ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಶಿವಕಾಶಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಬರೆದಿರುವ ನಾಲ್ಕು ಪುಟಗಳ ಸೂಸೈಡ್ ನೋಟ್‌ನಲ್ಲಿ, "ತನ್ನ ಹೆತ್ತವರು ತನ್ನ ಮೇಲೆ ಇಟ್ಟಿರುವ ಐಎಎಸ್ ಆಕಾಂಕ್ಷೆಗಳನ್ನು ಪೂರೈಸಲು ತಾನು ಅಸಮರ್ಥಳು" ಎಂದು ಆಕೆ ಬರೆದಿದ್ದಾರೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಕಾರ್ತಿಕ್ ಹೇಳಿದ್ದಾರೆ.

ವಿದ್ಯಾರ್ಥಿನಿಯರ ಸರಣಿ ಸಾವಿನಿಂದ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ವಿದ್ಯಾರ್ಥಿನಿಯರು ಆತ್ಮಹತ್ಯೆಯ ಆಲೋಚನೆಗಳನ್ನು ದೂರವಿಡುವಂತೆ ಮನವಿ ಮಾಡಿದ್ದಾರೆ. ಹೆಣ್ಣು ಮಕ್ಕಳನ್ನು ಯಾವತ್ತೂ ಆತ್ಮಹತ್ಯಾ ಯೋಚನೆಗೆ ತಳ್ಳಬಾರದು. ವಿದ್ಯಾರ್ಥಿನಿಯರಿಗೆ ಲೈಂಗಿಕ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ಸೋಮವಾರ (ಜುಲೈ 25) ತನ್ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು, ಜುಲೈ 13 ರಂದು, ಕಲ್ಲಕುರಿಚಿ ಜಿಲ್ಲೆಯ ಶಾಲೆಯೊಂದರ 12 ನೇ ತರಗತಿಯ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು.

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+