ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು, ಕೊರೊನಾ ಶಂಕೆ!

|
Google Oneindia Kannada News

ಚೆನ್ನೈ, ಜುಲೈ 14: ತಮಿಳುನಾಡಿನಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಇದರ ಮಧ್ಯೆ ಕೋವಿಡ್-19 ಸೋಂಕಿನ ಲಕ್ಷಣಗಳು ಗೋಚರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Tamil Nadu CM MK Stalin admitted to hospital after Tested Positive for COVID-19

ಚೆನ್ನೈನ ಅಲ್ವಾರಪೇಟೆಯಲ್ಲಿ ಇರುವ ಕಾವೇರಿ ಆಸ್ಪತ್ರೆಗೆ ಸಿಎಂ ಸ್ಟಾಲಿನ್ ದಾಖಲಾಗಿರುವ ಬಗ್ಗೆ ಆಸ್ಪತ್ರೆಯು ವೈದ್ಯಕೀಯ ಪ್ರಕಟಣೆಯನ್ನು ಹೊರಡಿಸಿದೆ. ಸ್ಟಾಲಿನ್ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡು ಬಂದಿದ್ದು, ಕೊರೊನಾ ವೈರಸ್ ಸೋಂಕಿನ ಲಕ್ಷಣಗಳಿವೆ ಎಂದು ವೈದ್ಯಕೀಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮಿಳುನಾಡಿನಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 2,000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 2269 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಪೈಕಿ 729 ಪ್ರಕರಣಗಳು ಚೆನ್ನೈ ನಗರವೊಂದರಲ್ಲೇ ವರದಿಯಾಗಿವೆ.

ಭಾರತದಲ್ಲಿ ಕೊರೊನಾ ವೈರಸ್ ಅಂಕಿ-ಸಂಖ್ಯೆ:
ಕಳೆದ 24 ಗಂಟೆಗಳಲ್ಲಿ 20139 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 38 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 16,482 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,689,989ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,028,356 ಸೋಂಕಿತರು ಗುಣಮುಖರಾಗಿದ್ದು, 525,557 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 136,076ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Recommended Video

ಸಿದ್ದರಾಮೋತ್ಸವ ಮತ್ತು ಶಿವಕುಮಾರೋತ್ಸವದ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು? | *Politics | OneIndia

English summary
Tamil Nadu CM MK Stalin was admitted in the Kauvery Hospital at Alwarpet in Chennai for investigations after tested positive for Covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X