ಈ ಹಸುವಿನ ಹೊಟ್ಟೆಯಲ್ಲಿದ್ದದ್ದು ಬರೋಬ್ಬರಿ 52 ಕೆಜಿ ಪ್ಲಾಸ್ಟಿಕ್!
ಚೆನ್ನೈ, ಅಕ್ಟೋಬರ್ 23: ತಮ್ಮ ಹಸು ಮೊದಲಿನಂತೆ ಇಲ್ಲ, ಅದಕ್ಕೆ ಏನೋ ಆಗಿದೆ ಎಂದು ಮಾಲೀಕರು ಅದನ್ನು ವೈದ್ಯರ ಬಳಿ ಕೊಂಡೊಯ್ದಿದ್ದರು. ಅಸ್ವಸ್ಥಗೊಂಡಿದ್ದ ಹಸುವಿನ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಇದೆ ಎಂಬುದನ್ನು ಪತ್ತೆ ಮಾಡಿದ ವೈದ್ಯರು ಅದನ್ನು ಹೊರತೆಗೆಯಲು ಶಸ್ತ್ರ ಚಿಕಿತ್ಸೆ ಅನಿವಾರ್ಯ ಎಂದು ತೀರ್ಮಾನಿಸಿದರು.
ಹೀಗೆ ಶಸ್ತ್ರ ಚಿಕಿತ್ಸೆ ನಡೆಸಲು ವೈದ್ಯರು ತೆಗೆದುಕೊಂಡ ಸಮಯ 5 ಗಂಟೆ. ಆ ಅವಧಿಯಲ್ಲಿ ಅವರು ಹೊರತೆಗೆದದ್ದು ಬರೋಬ್ಬರಿ 52 ಕೆಜಿ ತೂಕದಷ್ಟು ಪ್ಲಾಸ್ಟಿಕ್ ವಸ್ತುಗಳನ್ನು. ಅಷ್ಟೇ ಅಲ್ಲ, ಆ ಹಸುವಿನ ಹೊಟ್ಟೆಯೊಳಗೆ ಸೂಜಿ, ನಾಣ್ಯ, ಸ್ಕ್ರೂ, ಪಿನ್‌ಗಳು ಕೂಡ ಇದ್ದವು.

ತಮಿಳುನಾಡು ಪಶುವೈದ್ಯಕೀಯ ಮತ್ತು ಪ್ರಾಣಿ ಸೇವಾ ವಿಶ್ವವಿದ್ಯಾಲಯದ ವೈದ್ಯರು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಹಾರಕ್ಕಾಗಿ ಸಿಕ್ಕಿದ್ದನ್ನೆಲ್ಲ ತಿನ್ನುತ್ತಿದ್ದ ಹಸು, ಎರಡು ವರ್ಷಕ್ಕೂ ಹೆಚ್ಚು ಸಮಯದಿಂದ ತನ್ನ ಹೊಟ್ಟೆಯನ್ನು ಪ್ಲಾಸ್ಟಿಕ್ ಮತ್ತಿತರ ಪದಾರ್ಥಗಳಿಂದ ತುಂಬಿಸಿಕೊಂಡಿತ್ತು ಎಂಬ ಆಘಾತಕಾರಿ ಸಂಗತಿ ತಿಳಿದುಬಂದಿದೆ.
Watch this video and decide whether we want to sit and blame everyone else or do something to save India from Plastics.
— Doraemon (@DoraemonHKT) October 21, 2019
Tamil Nadu veterinary university surgeons remove 52 kg of plastic from cow in Chennai. pic.twitter.com/1LC7IhmbUE
ಚೆನ್ನೈನಲ್ಲಿರುವ ವಿಶ್ವವಿದ್ಯಾಲಯದ ಆಸ್ಪತ್ರೆಗೆ ಹಸುವನ್ನು ಅದರ ಮಾಲೀಕರು ಕರೆತಂದಿದ್ದರು. ಆ ಹಸು ತೀವ್ರ ವೇದನೆ ಅನುಭವಿಸುತ್ತಿರುವಂತೆ ಅನಿಸುತ್ತಿತ್ತು. ಇತ್ತೀಚೆಗೆ ಅದು ಕರು ಹಾಕಿದ್ದರೂ, ಅದಕ್ಕೆ ಹಾಲುಣಿಸಲು ಒದ್ದಾಡುತ್ತಿತ್ತು. ಮಾತ್ರವಲ್ಲ, ಮೂತ್ರ ಹಾಗೂ ಸಗಣಿ ವಿಸರ್ಜನೆಗೆ ಸಹ ಪರದಾಡುತ್ತಿತ್ತು. ತನ್ನ ಹೊಟ್ಟೆಗೆ ತಾನೇ ಒದೆಯುತ್ತಿತ್ತು.
ಎಕ್ಸ್ ರೇ ಮತ್ತು ಅಲ್ಟ್ರಾಸೌಂಡ್ ಸ್ಕ್ಯಾನ್ ನಡೆಸಿದಾಗ ಹಸುವಿನ ಹೊಟ್ಟೆಯಲ್ಲಿ ಶೇ 75ರಷ್ಟು ಜೀರ್ಣವಾಗದ ಕಸವೇ ತುಂಬಿರುವುದು ಪತ್ತೆಯಾಯಿತು. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಆರಂಭವಾದ ಶಸ್ತ್ರಚಿಕಿತ್ಸೆ ಸಂಜೆ 4.30ರವರೆಗೂ ನಡೆಯಿತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications