ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು ಚುನಾವಣೆ: ಮತದಾನ, ಫಲಿತಾಂಶ ಯಾವಾಗ?

|
Google Oneindia Kannada News

ಚೆನ್ನೈ, ಫೆಬ್ರವರಿ 26: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸಂಬಂಧ ಮೊದ ಕುತೂಹಲಕ್ಕೆ ತೆರೆಬಿದ್ದಿದೆ. ಕೇಂದ್ರ ಚುನಾವಣಾ ಆಯೋಗವು ವಿಧಾನಸಭೆ ಚುನಾವಣೆಗಳ ದಿನಾಂಕಗಳನ್ನು ಪ್ರಕಟಿಸಿದೆ. ದಕ್ಷಿಣದ ಎರಡು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿನ ವಿಧಾನಸಭೆ ಚುನಾವಣೆ ಒಂದೇ ಹಂತಗಳಲ್ಲಿ ನಡೆಯಲಿದೆ.

ನೆರೆಯ ತಮಿಳುನಾಡಿನಲ್ಲಿ ಈಗಾಗಲೇ ಚುನಾವಣಾ ಚಟುವಟಿಕೆಗಳು ಬಿರುಸುಗೊಂಡಿವೆ. ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಹಾಗೂ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟಗಳು ಪ್ರಮುಖವಾಗಿ ಸೆಣಸಾಟ ನಡೆಸುವ ನಿರೀಕ್ಷೆಯಿದೆ. ಕಮಲ ಹಾಸನ್ ಅವರ ಪಕ್ಷ ಸೇರಿದಂತೆ ಇತರೆ ಪಕ್ಷಗಳೂ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.

Breaking: 5 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ, ಸಂಪೂರ್ಣ ವಿವರBreaking: 5 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ, ಸಂಪೂರ್ಣ ವಿವರ

ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ 12ನೇ ಮಾರ್ಚ್‌ರಂದು ಗೆಜೆಟ್ ಅಧಿಸೂಚನೆ ಪ್ರಕಟವಾಗಲಿದೆ. 19ನೇ ಮಾರ್ಚ್ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 20 ಮಾರ್ಚ್ ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 22 ಕೊನೆ ದಿನವಾಗಿದೆ. ಏಪ್ರಿಲ್ 6ರಂದು ತಮಿಳುನಾಡಿನ ಎಲ್ಲ 234 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಮೇ 24ರಂದು ಅಂತ್ಯ

ಮೇ 24ರಂದು ಅಂತ್ಯ

ತಮಿಳುನಾಡು ವಿಧಾನಸಭೆಯ ಅವಧಿಯು ಮೇ 24ರಂದು ಅಂತ್ಯಗೊಳ್ಳಲಿದೆ. ಚುನಾವಣೆಯ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ. ಹೀಗಾಗಿ ಅವಧಿ ಪೂರ್ಣಗೊಳ್ಳುವ ಮುನ್ನವೇ ಹಾಲಿ ವಿಧಾನಸಭೆ ವಿಸರ್ಜನೆಯಾಗಿ ಹೊಸ ಸರ್ಕಾರ ಸ್ಥಾಪನೆಯಾಗಬಹುದು. ಆದರೆ ಇದು ಫಲಿತಾಂಶವನ್ನು ಅವಲಂಬಿಸಿದೆ. ತಮಿಳುನಾಡು ವಿಧಾನಸಭೆಯ ಒಟ್ಟು ಸೀಟುಗಳ ಪೈಕಿ 44 ಕ್ಷೇತ್ರಗಳು ಪರಿಶಿಷ್ಟ ಜಾತಿ ಹಾಗೂ ಎರಡು ಸೀಟುಗಳು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾಗಿವೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟ...ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟ...

ಕನ್ಯಾಕುಮಾರಿ ಉಪ ಚುನಾವಣೆ

ಕನ್ಯಾಕುಮಾರಿ ಉಪ ಚುನಾವಣೆ

ತಮಿಳುನಾಡಿನ ಕನ್ಯಾಕುಮಾರಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಕೂಡ ಏ. 6ರಂದು ನಡೆಯಲಿದೆ. ಕನ್ಯಾಕುಮಾರಿ ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿದ್ದ ಎಚ್. ವಸಂತ ಕುಮಾರ್ ಅವರು ಕಳೆದ ವರ್ಷದ ಆಗಸ್ಟ್ 28ರಂದು ಕೊರೊನಾ ವೈರಸ್ ಸೋಂಕಿನಿಂದಾಗಿ ಚೆನ್ನೈನಲ್ಲಿ ಮೃತಪಟ್ಟಿದ್ದರು. ವಸಂತ್ ಆಂಡ್ ಕಂಪೆನಿ ಎಂಬ ಉದ್ಯಮ ನಡೆಸುತ್ತಿದ್ದ 70 ವರ್ಷದ ವಸಂತಕುಮಾರ್ ನಿಧನದಿಂದ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿತ್ತು.

ಜಯಲಲಿತಾ, ಕರುಣಾನಿಧಿ ಗೈರಿನಲ್ಲಿ ಚುನಾವಣೆ

ಜಯಲಲಿತಾ, ಕರುಣಾನಿಧಿ ಗೈರಿನಲ್ಲಿ ಚುನಾವಣೆ

ಮಾಜಿ ಮುಖ್ಯಮಂತ್ರಿಗಳಾದ ಜೆ. ಜಯಲಲಿತಾ ಮತ್ತು ಎಂ ಕರುಣಾನಿಧಿ ಅವರ ನಿಧನದ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ. 2016ರ ವಿಧಾನಸಭೆ ಚುನಾವಣೆಯಲ್ಲಿ ಜಯಲಲಿತಾ ನೇತೃತ್ವದಲ್ಲಿ ಎಐಎಡಿಎಂಕೆ 136 ಸೀಟುಗಳಲ್ಲಿ ಗೆದ್ದು ಅಧಿಕಾರಕ್ಕೆ ಬಂದಿತ್ತು. 1984ರ ಬಳಿಕ ಮೊದಲ ಬಾರಿಗೆ ತಮಿಳುನಾಡಿನಲ್ಲಿ ಸತತ ಎರಡು ಬಾರಿ ಅಧಿಕಾರಕ್ಕೆ ಬಂದ ಮೊದಲ ಪಕ್ಷ ಎನಿಸಿತ್ತು.

ಕೇರಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟಕೇರಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟ

ಕುಸಿದಿದ್ದ ಎಐಎಡಿಎಂಕೆ ಸಂಖ್ಯಾಬಲ

ಕುಸಿದಿದ್ದ ಎಐಎಡಿಎಂಕೆ ಸಂಖ್ಯಾಬಲ

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು 118 ಸೀಟುಗಳ ಅಗತ್ಯವಿದೆ. 2011ರ ಲೋಕಸಭೆ ಚುನಾವಣೆಯಲ್ಲಿ 203 ಸೀಟುಗಳಲ್ಲಿ ಗೆದ್ದಿದ್ದ ಎಐಎಡಿಎಂಕೆ, ಬಲ 2016ರಲ್ಲಿ 136ಕ್ಕೆ ಕುಸಿದಿತ್ತು. ಇನ್ನೊಂದೆಡೆ ಡಿಎಂಕೆ 31 ಸೀಟುಗಳಿಂದ 98ಕ್ಕೆ ಸೀಟುಗಳನ್ನು ಹೆಚ್ಚಿಸಿಕೊಂಡಿತ್ತು. ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ ರಾಜ್ಯದಲ್ಲಿ 62,674,446 ಮಂದಿ ಮತದಾರರಿದ್ದಾರೆ. ಇವರಲ್ಲಿ 30,838,473 ಪುರುಷರು ಮತ್ತು 31,828,727 ಮಹಿಳಾ ಮತದಾರರು ಹಾಗೂ 7246 ತೃತೀಯ ಲಿಂಗಿಗಳು ಇದ್ದಾರೆ.

English summary
Tamil Nadu Election Dates 2021: Voting on 6th April; counting of votes on 2nd May.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X