ಕಾಂಗ್ರೆಸ್‌ಗೆ 25 ಸೀಟುಗಳನ್ನು ನೀಡಲು ಒಪ್ಪಿದ ಡಿಎಂಕೆ

ಚೆನ್ನೈ, ಮಾರ್ಚ್ 7: ತಮಿಳುನಾಡಿನಲ್ಲಿ ಮುಂದಿನ ತಿಂಗಳು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ತನ್ನ ಮಿತ್ರಪಕ್ಷ ಕಾಂಗ್ರೆಸ್‌ಗೆ 25 ಸೀಟುಗಳನ್ನು ಬಿಟ್ಟುಕೊಡಲು ಡಿಎಂಕೆ ನಿರ್ಧರಿಸಿದೆ. ಜತೆಗೆ ರಾಜ್ಯಸಭೆಗೂ ಒಂದು ಸೀಟನ್ನು ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಚೆನ್ನೈನಲ್ಲಿನ ಡಿಎಂಕೆ ಹಿರಿಯ ನಾಯಕತ್ವದೊಂದಿಗೆ ಸಂಪರ್ಕದಲ್ಲಿರುವ ದೆಹಲಿಯ ಕಾಂಗ್ರೆಸ್ ನಾಯಕತ್ವವು ಶನಿವಾರ ಚರ್ಚೆ ನಡೆಸಿದ ಬಳಿಕ ಈ ಒಪ್ಪಂದವನ್ನು ಅಂತಿಮಗೊಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಮಿಳುನಾಡಿನ 234 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಇದರಲ್ಲಿ ಕಾಂಗ್ರೆಸ್‌ಗೆ 25 ಸೀಟುಗಳನ್ನು ಬಿಟ್ಟುಕೊಡಲು ಡಿಎಂಕೆ ನಿರ್ಧರಿಸಿದೆ. 2016ರ ವಿಧಾನಸಭೆ ಚುನಾವಣೆಯಲ್ಲಿ 41 ಸೀಟುಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿ ಏಳರಲ್ಲಿ ಮಾತ್ರ ಗೆಲುವು ಕಂಡಿತ್ತು.

 Tamil Nadu Election: DMK To Allot 25 Seats To its Ally Congress

ರಾಜ್ಯದಲ್ಲಿ ಸೀಟು ಹಂಚಿಕೆ ಸಂಬಂಧ ಸಣ್ಣ ಪ್ರಮಾಣದಲ್ಲಿ ಚೌಕಾಸಿ ಮಾತುಕತೆ ನಡೆದ ಬಳಿಕ, 'ಚೆಂಡು ಡಿಎಂಕೆ ಅಂಗಳದಲ್ಲಿ ಇದೆ' ಎಂದು ತಮಿಳುನಾಡು ಕಾಂಗ್ರೆಸ್ ಮುಖ್ಯಸ್ಥ ಕೆಎಸ್ ಅಳಗಿರಿ ಹೇಳಿದ್ದರು. ರಾಹುಲ್ ಗಾಂಧಿ ಅವರು ತಮಿಳುನಾಡಿನಲ್ಲಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಎರಡೂ ಪಕ್ಷಗಳ ನಾಯಕರ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿತ್ತು.

ಡಿಎಂಕೆಯ ಎದುರಾಳಿ ಎಐಎಡಿಎಂಕೆ, ಈ ಬಾರಿ ತನ್ನ ಮಿತ್ರಪಕ್ಷ ಬಿಜೆಪಿಗೆ 20 ಸೀಟುಗಳನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+