updates: ತಮಿಳುನಾಡು ಮಾಜಿ ಮುಖ್ಯಮಂತ್ರಿ 'ಕಲೈನಾರ್' ಕರುಣಾನಿಧಿ ಇನ್ನಿಲ್ಲ
Recommended Video

ಚೆನ್ನೈ, ಆಗಸ್ಟ್ 7: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ (94) ಮಂಗಳವಾರ ನಿಧನರಾದರು.
ದೀರ್ಘಕಾಲದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ 15 ದಿನಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕರುಣಾನಿಧಿ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾದ ಎಲ್ಲ ಹೋರಾಟಗಳನ್ನು ನಡೆಸಿದ್ದರೂ ಅವರು ಅದಕ್ಕೆ ಸ್ಪಂದಿಸುವಲ್ಲಿ ವಿಫಲರಾದರು. ಸಂಜೆ 6.10ರ ಸಮಯಕ್ಕೆ ಅವರು ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ.
ಕೇವಲ ಒಂದೂವರೆ ವರ್ಷದ ಅವಧಿಯಲ್ಲಿಯೇ ತಮಿಳುನಾಡು ತನ್ನ ಎರಡು ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಕರುಣಾನಿಧಿ ಅವರಿಗೆ ಬದ್ಧ ಪ್ರತಿಸ್ಪರ್ಧಿಯಾಗಿದ್ದ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ 2016ರ ಡಿಸೆಂಬರ್ 5ರಂದು ನಿಧನರಾಗಿದ್ದರು.
ಕರುಣಾನಿಧಿ ಅವರ ನಿಧನದ ಕಾರಣ ತಮಿಳುನಾಡಿನ ಎಲ್ಲ ಶಾಲೆ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ. ರಾಜ್ಯದಾದ್ಯಂತ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಪುದುಚೆರಿ ಸರ್ಕಾರ ಕೂಡ ಬುಧವಾರ ಸರ್ಕಾರಿ ರಜೆ ಘೋಷಿಸಿದೆ.
ಬುಧವಾರ ಸಂಜೆ 5.15ಕ್ಕೆ ಕರುಣಾನಿಧಿ ಅವರ ಅಂತ್ಯಕ್ರಿಯೆ ನಡೆಯಲಿದೆ.ಡಿಎಂಕೆ ಸಂಸ್ಥಾಪಕ ಅಣ್ಣಾದೊರೈ ಅವರ ಸಮಾಧಿ ಪಕ್ಕದಲ್ಲಿಯೇ ಕರುಣಾನಿಧಿ ಅವರ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವಂತೆ ಅವರ ಕುಟುಂಬ ಕೋರಿತ್ತು. ಆದರೆ, ಅದಕ್ಕೆ ಎಐಎಡಿಎಂಕೆ ಸರ್ಕಾರ ನಿರಾಕರಿಸಿದೆ.
ಮರೀನಾ ಬೀಚ್ ಬದಲು ಗಾಂಧಿ ಮಂಟಪದ ಸಮೀಪ ಎರಡು ಎಕರೆ ಜಾಗ ಮಂಜೂರು ಮಾಡಿ, ಅಂತ್ಯ ಸಂಸ್ಕಾರ ನಡೆಸಲು ಅವಕಾಶ ನೀಡುವುದಾಗಿ ಸರ್ಕಾರ ತಿಳಿಸಿದೆ.
ಸರ್ಕಾರದ ತೀರ್ಮಾನ ಡಿಎಂಕೆ ಬೆಂಬಲಿಗರನ್ನು ಕೆರಳಿಸಿದೆ. ಮರೀನಾ ಬೀಚ್‌ನಲ್ಲಿಯೇ ಅಂತ್ಯಕ್ರಿಯೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅಭಿಮಾನಿಗಳು ಪೊಲೀಸ್ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿದ್ದಾರೆ.
ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. ಮರೀನಾ ಬೀಚ್‌ನಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಡಿಎಂಕೆ ಸದಸ್ಯರು ಮುಂದಾಗಿದ್ದಾರೆ. ಇಂದು ಮಧ್ಯರಾತ್ರಿಯೇ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಈ ಮನವಿ ಪುರಸ್ಕರಿಸಿರುವ ಹೈಕೋರ್ಟ್ 10.30ಕ್ಕೆ ವಿಚಾರಣೆ ನಿಗದಿಪಡಿಸಿದೆ.
ಮರೀನಾ ಬೀಚ್‌ನಲ್ಲಿಯೇ ಅವಕಾಶ ಕಲ್ಪಿಸುವಂತೆ ಕೋರಿ ಕರುಣಾನಿಧಿ ಅವರ ಮಗ ಎಂ.ಕೆ. ಸ್ಟಾಲಿನ್, ಮುಖ್ಯಮಂತ್ರಿ ಪಳನಿಸ್ವಾಮಿ ಅವರಿಗೆ ಎರಡು ಪತ್ರಗಳನ್ನು ಬರೆದಿದ್ದಾರೆ.
Like Jayalalitha ji, Kalaignar was an expression of the voice of the Tamil people. That voice deserves to be given space on Marina Beach. I am sure the current leaders of Tamil Nadu will be magnanimous in this time of grief. #Marina4Kalaignar
— Rahul Gandhi (@RahulGandhi) 7 August 2018
ಪಳನಿಸ್ವಾಮಿ ಅವರನ್ನು ತಮಿಳುನಾಡು ಅಡ್ವೊಕೇಟ್ ಜನರಲ್ ಭೇಟಿ ಮಾಡಿದ್ದು, ಸಮಾಲೋಚನೆ ನಡೆಸುತ್ತಿದ್ದಾರೆ. ವಿವಿಧ ಪಕ್ಷಗಳು ಹಾಗೂ ಮುಖಂಡರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.
ಕೇಂದ್ರ ಸರ್ಕಾರ ಶೋಕಾಚರಣೆ ಘೋಷಿಸಿದ್ದು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸುವಂತೆ ಸೂಚಿಸಲಾಗಿದೆ.
ಕರ್ನಾಟಕದಲ್ಲಿ ಒಂದು ದಿನದ ಶೋಕಾಚರಣೆ ಘೋಷಿಸಲಾಗಿದೆ. ಸರ್ಕಾರಿ ಮತ್ತು ಸಾರ್ವಜನಿಕ ಸಮಾರಂಭಗಳು, ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ದೇಶದ ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ರಾಷ್ಟ್ರಧ್ವಜವನ್ನು ಬುಧವಾರ ಅರ್ಧಕ್ಕೆ ಹಾರಿಸಲಾಗುತ್ತದೆ.

ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಗೋಪಾಲಪುರಂನಲ್ಲಿರುವ ನಿವಾಸಕ್ಕೆ ಕರೆತರಲಾಗಿದೆ. ನಸುಕಿನ ನಾಲ್ಕು ಗಂಟೆವರೆಗೂ ಮನೆಯಲ್ಲಿ ಇರಿಸಿ ಬಳಿಕ ರಾಜಾಜಿ ಹಾಲ್‌ನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ನಟ ರಜನಿಕಾಂತ್ ಮುಂತಾದ ಗಣ್ಯರು ಕರುಣಾನಿಧಿ ಅವರ ಪಾರ್ಥಿವ ಶರೀರದ ದರ್ಶನ ಪಡೆದರು.
ಕರ್ನಾಟಕದಲ್ಲಿರುವ ಡಿಎಂಕೆ ಮತ್ತು ಕರುಣಾನಿಧಿ ಅಭಿಮಾನಿಗಳು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮನವಿ ಮಾಡಿದ್ದಾರೆ.

ಕರುಣಾನಿಧಿ ಅವರಿಗೆ ಪತ್ನಿಯರಾದ ರಜತಿ ಅಮ್ಮಾಳ್, ದಯಾಳು ಅಮ್ಮಾಳ್, ಮಕ್ಕಳಾದ ಎಂ.ಕೆ. ಸ್ಟಾಲಿನ್, ಕನಿಮೊಳಿ, ಎಂ.ಕೆ ಅಳಗಿರಿ, ಎಂ.ಕೆ. ಮುತ್ತು, ಎಂ.ಕೆ. ತಮಿಳರಸು ಮತ್ತು ಎಂ.ಕೆ. ಸೆಲ್ವಿ ಇದ್ದಾರೆ.ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷಕ್ಕೆ 50 ವರ್ಷ ಅಧ್ಯಕ್ಷರಾಗಿ ದಾಖಲೆ ಬರೆದಿದ್ದ ಅವರು, ದಕ್ಷಿಣ ಭಾರತದ ಅತ್ಯಂತ ಪ್ರಭಾವಿ ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ದರು.
ತಮಿಳುನಾಡಿನ ಮುಖ್ಯಮಂತ್ರಿಯಾಗಿ 1969-2011ರವರೆಗೆ ಐದು ಬಾರಿ ಆಡಳಿತ ನಡೆಸಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications