ಜ.31ರವರೆಗೂ ಲಾಕ್ ಡೌನ್ ವಿಸ್ತರಿಸಿದ ತಮಿಳುನಾಡು ಸರ್ಕಾರ
ಚೆನ್ನೈ, ಡಿಸೆಂಬರ್ 31: ಕೇಂದ್ರ ಸರ್ಕಾರದ ನಿರ್ದೇಶನದಂತೆ ಗುರುವಾರ ತಮಿಳುನಾಡು ರಾಜ್ಯ ಸರ್ಕಾರ ಜನವರಿ 31ರವರೆಗೂ ಲಾಕ್ ಡೌನ್ ವಿಸ್ತರಿಸಿದೆ.
ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಜನವರಿ 31ರವರೆಗೂ ಕೆಲವು ನಿರ್ಬಂಧಗಳನ್ನು ಸಡಿಲಿಸಿ ಲಾಕ್ ಡೌನ್ ವಿಸ್ತರಿಸಿರುವುದಾಗಿ ತಿಳಿಸಿದೆ. ಇದರ ಜೊತೆಗೆ ಹೊಸ ವರ್ಷಾಚರಣೆಯನ್ನು ರದ್ದುಗೊಳಿಸಿದ್ದು, ಸಂಕ್ರಾಂತಿ ಹಬ್ಬದಂದು (ಜನವರಿ 16) ರಾಜ್ಯದ ಬೀಚ್ ಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು ಲಾಕ್ ಡೌನ್ ವಿಸ್ತರಿಸುವ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಹೊಸ ವರ್ಷಾಚರಣೆಯನ್ನು ರದ್ದುಗೊಳಿಸಿರುವ ತಮಿಳುನಾಡು ಸರ್ಕಾರ, ಬೀಚ್ ಗಳಲ್ಲಿ ಡಿ.31 ಹಾಗೂ ಜ.1 ರಂದು ಗುರುವಾರ ಹಾಗೂ ಶುಕ್ರವಾರ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿದೆ. ಡಿ.30ರ ವರದಿಯಂತೆ ಎರಡನೇ ಬಾರಿ ತಮಿಳುನಾಡಿನಲ್ಲಿ ಸಾವಿರಕ್ಕಿಂತ ಕಡಿಮೆ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 8,17,077 ಪ್ರಕರಣಗಳು ದಾಖಲಾಗಿವೆ. ಇದುವರೆಗೂ ಸೋಂಕಿನಿಂದ 12,109 ಸಾವು ಸಂಭವಿಸಿದೆ. ಚೆನ್ನೈನಲ್ಲೇ 4,004 ಹೆಚ್ಚು ಸಾವಿನ ಪ್ರಕರಣ ದಾಖಲಾಗಿದೆ.
ಈ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಲಾಕ್ ಡೌನ್ ವಿಸ್ತರಣೆ ಮಾಡಿರುವುದಾಗಿ ತಿಳಿದುಬಂದಿದೆ.











Click it and Unblock the Notifications