ತಮಿಳುನಾಡಿನಲ್ಲಿ ಜನತಾ ಕರ್ಫ್ಯೂ ವಿಸ್ತರಣೆ

ಚೆನ್ನೈ, ಮಾರ್ಚ್ 22 : ತಮಿಳುನಾಡು ಸರ್ಕಾರ ಕೊರೊನಾ ಹರಡದಂತೆ ತಡೆಯಲು ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಜನತಾ ಕರ್ಫ್ಯೂವನ್ನು ಸೋಮವಾರ ಮುಂಜಾನೆ 5 ಗಂಟೆಯ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ನಡೆಯುತ್ತಿರುವ ಜನತಾ ಕರ್ಫ್ಯೂ ಭಾನುವಾರ ಬೆಳಗ್ಗೆ 7ಗಂಟೆಯಿಂದ ರಾತ್ರಿ 9 ಗಂಟೆಯ ತನಕ ನಡೆಯಲಿದೆ. ಆದರೆ, ತಮಿಳುನಾಡಿನಲ್ಲಿ ಸೋಮವಾರ ಮುಂಜಾನೆ 5 ಗಂಟೆಯ ತನಕ ಜನತಾ ಕರ್ಫ್ಯೂ ವಿಸ್ತರಣೆಯಾಗಿದೆ.

ಭಾನುವಾರ ರಾತ್ರಿ 9 ಗಂಟೆಗೆ ಜನತಾ ಕರ್ಫ್ಯೂ ಅಂತ್ಯಗೊಂಡ ಬಳಿಕ ಜನರು ನೂರಾರು ಸಂಖ್ಯೆಯಲ್ಲಿ ರಸ್ತೆಗೆ ಬರಬಾರದು ಎಂದು ಈಗಾಗಲೇ ಸರ್ಕಾರ ಮನವಿ ಮಾಡಿದೆ. ಕೊರೊನಾ ಹರಡದಂತೆ ತಡೆಯಲು ಜನತಾ ಕರ್ಫ್ಯೂವನ್ನು ಮುಂದೂಡಲಾಗಿದೆ.

Tamil Nadu Extends Janata Curfew Till Monday

ಸ್ಪೈನ್‌ನಿಂದ ಕೊಯಮತ್ತೂರಿಗೆ ಮಾರ್ಚ್ 13ರಂದು ಆಗಮಿಸಿದ್ದ ಮಹಿಳೆಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ತಮಿಳುನಾಡಿನಲ್ಲಿ ಕೊರೊನಾ ಸೋಂಕಿತ ರೋಗಿಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ತಮಿಳುನಾಡು ರಾಜ್ಯದ ಆರೋಗ್ಯ ಸಚಿವ ಡಾ. ಸಿ. ವಿಜಯಭಾಸ್ಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. "ಸ್ಪೈನ್‌ನಿಂದ ಆಗಮಿಸಿದ ಮಹಿಳೆಗೆ ಕೊರೊನಾ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಹೇಳಿದ್ದಾರೆ.

ಶನಿವಾರ ತಮಿಳುನಾಡಿನಲ್ಲಿ 3 ಕೊರೊನಾ ಪ್ರಕರಣಗಳು ದಾಖಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಜನತಾ ಕರ್ಫ್ಯೂವನ್ನು ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಾಹನಗಳನ್ನು ಸರ್ಕಾರ ನಿಷೇಧಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+