ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 59ಕ್ಕೆ ಹೆಚ್ಚಿಸಿದ ತಮಿಳುನಾಡು ಸರ್ಕಾರ

|
Google Oneindia Kannada News

ಚೆನ್ನೈ, ಮೇ 7: ತಮಿಳುನಾಡು ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58ರಿಂದ 59ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಈ ಕ್ರಮವು ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಮತ್ತು ಹೆಚ್ಚುತ್ತಿರುವ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ತ್ವರಿತ ಕ್ರಮಗಳಿಗೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಬುಧವಾರದವರೆಗೆ, ತಮಿಳುನಾಡಿನಲ್ಲಿ 4,829 ಕೊರೊನಾವೈರಸ್ ಪ್ರಕರಣಗಳು ದಾಖಲಾಗಿದೆ.

ಕೊರೊನಾವೈರಸ್ ಹರಡುವಿಕೆ ತಡೆಗಾಗಿ ನಡೆಸುತ್ತಿರುವ ಪ್ರಯತ್ನಗಳ ಮಧ್ಯೆ ತಮಿಳುನಾಡು ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸನ್ನು 58 ರಿಂದ 59ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ನಿರ್ಧರಿಸಿದ್ದಾರೆ.

TN Govt Employees To Superannuate At 59

ನಿವೃತ್ತಿ ವಯಸ್ಸಿನ ಹೆಚ್ಚಳದ ಆದೇಶವು ಸರ್ಕಾರಿ ನೌಕರರು, ಶಿಕ್ಷಕರು, ಉಪನ್ಯಾಸಕರು ಮತ್ತು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳಲ್ಲಿನ ಪ್ರಾಧ್ಯಾಪಕರಿಗೆ ರಾಜ್ಯ ಸಾರ್ವಜನಿಕ ವಲಯದ ಘಟಕಗಳಿಗೆ ಅನ್ವಯಿಸುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಲಾಕ್‌ಡೌನ್‌: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ತಡೆ ಹಿಡಿದ ಸರ್ಕಾರಲಾಕ್‌ಡೌನ್‌: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ತಡೆ ಹಿಡಿದ ಸರ್ಕಾರ

ನಿವೃತ್ತಿಯ ವಯಸ್ಸನ್ನು ಹೆಚ್ಚಿಸುವ ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಈಗಾಗಲೇ, ಮಾರ್ಚ್ 31 ಮತ್ತು ಏಪ್ರಿಲ್ 30 ರಂದು ನಿವೃತ್ತರಾಗಬೇಕಿದ್ದ ಸರ್ಕಾರಿ ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗಳ ಸೇವೆಗಳನ್ನು ಇನ್ನೂ ಎರಡು ತಿಂಗಳು ವಿಸ್ತರಿಸಲಾಗಿದೆ .

English summary
Chief Minister K Palaniswami on Thursday ordered extension of the age of retirement of Tamil Nadu government employees to 59 from 58 amid stepped up efforts to prevent the spread of coronavirus in the State.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X