• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಮಿಳುನಾಡು ಸರ್ಕಾರದಿಂದ ಪೊಲೀಸರಿಗೆ 5,000 ರೂಪಾಯಿ ಪ್ರೋತ್ಸಾಹ ಧನ

|
Google Oneindia Kannada News

ಚೆನ್ನೈ, ಜೂನ್ 03: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಯೋಧರಂತೆ ಕಾರ್ಯ ನಿರ್ವಹಿಸುತ್ತಿರುವ ಆರಕ್ಷಕರಿಗೆ ತಮಿಳುನಾಡು ಸರ್ಕಾರ 5,000 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ.

ಗುರುವಾರ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೊವಿಡ್-19 ಕರ್ತವ್ಯದಲ್ಲಿ ತೊಡಗಿರುವ ಪೊಲೀಸರಿಗೆ ಸರ್ಕಾರದ ವತಿಯಿಂದ 5,000 ರೂಪಾಯಿ ಹೆಚ್ಚುವರಿ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆ ಕಥೆ: ಸರ್ಕಾರಿ ಆಸ್ಪತ್ರೆ ಕಥೆ: "ಶವಗಳ ರಾಶಿ ಮಧ್ಯೆ ಕೊವಿಡ್-19 ಸಂತ್ರಸ್ತ ದೇಹಗಳನ್ನು ನೀವೇ ಹುಡುಕಿ"

ತಮಿಳುನಾಡಿನಲ್ಲಿ ಕೊರೊನಾವೈರಸ್ ಭೀತಿ ನಡುವೆಯೂ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಭದ್ರತೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪೊಲೀಸರ ಆರೋಗ್ಯದ ದೃಷ್ಟಿಯಿಂದ ಬಹುಪಾಲು ಆರಕ್ಷಕರಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.


ತಮಿಳುನಾಡಿನಲ್ಲಿ ಕೊರೊನಾವೈರಸ್ ಸೋಂಕು:

ರಾಜ್ಯದಲ್ಲಿ ಒಂದೇ ದಿನ 25,317 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 483 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 25,205ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೂ 21,48,346 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 18,34,439 ಸೋಂಕಿತರು ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 2,88,702 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Tamil Nadu Chief Minister MK Stalin announced a special incentive of Rs 5000 to police personnel on Coronavirus duty.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion