ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Sankranthi Special: ಜಲ್ಲಿಕಟ್ಟು ಆಚರಣೆಗೆ ಅನುಮತಿ ಕೊಟ್ಟ ಸಿಎಂ ಪಳನಿಸ್ವಾಮಿ

|
Google Oneindia Kannada News

ಚೆನ್ನೈ, ಡಿ. 23: ಕೊರೊನಾವೈರಸ್ ಸಾಂಕ್ರಾಮಿಕದ ನಡುವೆ ಪೊಂಗಲ್ (ಮಕರ ಸಂಕ್ರಾಂತಿ) ಸಂದರ್ಭದಲ್ಲಿ ಜಲ್ಲಿಕಟ್ಟು ಆಚರಣೆಗೆ ಎಡಪ್ಪಾಡಿ ಪಳನಿಸ್ವಾಮಿ ಅವರು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.

ಜಲ್ಲಿಕಟ್ಟು ನಿರ್ಬಂಧಿತ ಅನುಮತಿ ನೀಡಲಾಗಿದ್ದು, 150 ಮಂದಿ ಮಾತ್ರ ಭಾಗವಹಿಸಬೇಕು, ಆಚರಣೆಯಲ್ಲಿ ಪಾಲ್ಗೊಳ್ಳುವ ಸ್ಪರ್ಧಿಗಳು ಸೇರಿದಂತೆ ಎಲ್ಲರೂ ಮುಂಚಿತವಾಗಿ ನೋಂದಣಿ ಮಾಡಿಕೊಂಡಿರಬೇಕು. ಕೊವಿಡ್ 19 ನೆಗಟಿವ್ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. ಪ್ರೇಕ್ಷಕರ ಸಂಖ್ಯೆ ಕೂಡಾ 50% ರಷ್ಟು ತಗ್ಗಿರಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

Oneindia explainer: ಜಲ್ಲಿಕಟ್ಟು ಏನು, ಎತ್ತ? ಸ್ವಾರಸ್ಯಕರ ಸಂಗತಿ!Oneindia explainer: ಜಲ್ಲಿಕಟ್ಟು ಏನು, ಎತ್ತ? ಸ್ವಾರಸ್ಯಕರ ಸಂಗತಿ!

ಜಲ್ಲಿಕಟ್ಟು ನಿಷೇಧಕ್ಕೆ ಕುರಿತಂತೆ 2014ರಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶದಂತೆ ಜನವರಿ 15ರಂದು ಜಲ್ಲಿಕಟ್ಟು ಆಚರಣೆ ಮಾಡದಂತೆ ತಡೆ ನೀಡಲಾಗಿದೆ.

Tamil Nadu govt grants permission to hold Jallikattu

ಜಲ್ಲಿಕಟ್ಟು ಸ್ಪರ್ಧೆಯನ್ನು ನಿಷೇಧ ಮಾಡುವಂತೆ ಸುಪ್ರೀಂಕೋರ್ಟ್​​ ಸೂಚನೆ ನೀಡಿದ್ದರೂ ಸಹ ಸಂಪ್ರದಾಯ ಮುರಿಯಲು ಒಪ್ಪದ ತಮಿಳುನಾಡಿನ ಜನ ಪ್ರತಿವರ್ಷ ಈ ಕ್ರೀಡೆಯನ್ನು ಆಯೋಜಿಸುತ್ತಿದ್ದಾರೆ.

ಕಳೆದ ವರ್ಷ ಸುಪ್ರೀಂಕೋರ್ಟ್ ಆದೇಶದ ಬಳಿಕ ಅಧಿಕಾರಿಗಳ ತಂಡ ನಿಗಾದೊಂದಿಗೆ ಜಲ್ಲಿಕಟ್ಟು ಆಚರಣೆ ನಡೆಸಲಾಗಿತ್ತು.

ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ

ಪೊಂಗಲ್(ಸಂಕ್ರಾಂತಿ) ಹಬ್ಬದ ಮುಖ್ಯ ಭಾಗವಾದ "ಜಲ್ಲಿಕಟ್ಟು" ಅಥವಾ "ಮಂಜು ವೀರಟ್ಟು" ಸಾಹಸ ಪ್ರಧಾನ ರೋಮಾಂಚನಕಾರಿ ಆಟವಾಗಿದೆ. ಆದರೆ, ತಮಿಳುನಾಡು ಅಸೆಂಬ್ಲಿ ಚುನಾವಣೆಯನ್ನು ಮುಂದಿಟ್ಟುಕೊಂಡು ಜಲ್ಲಿಕಟ್ಟು ಮುನ್ನೆಲೆಗೆ ತರಲಾಗಿದೆ. ಪ್ರಾಣಿಗಳಿಗೆ ಹಿಂಸೆ ನೀಡುವ ಆಚರಣೆ ಬೇಡ ಎಂದು ಪರಿಸರ ಹಾಗೂ ಪ್ರಾಣಿ ಪ್ರಿಯ ಸಂಘಟನೆಗಳು ಕಾನೂನು ಸಮರ ನಡೆಸುತ್ತಿವೆ.

English summary
Tamil Nadu government has granted permission to hold Jallikattu events in the state with certain restrictions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X