• search

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ತಮಿಳು ನಾಡು ಸರ್ಕಾರದ ಶಿಫಾರಸು

By Mahesh
Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಚೆನ್ನೈ, ಸೆಪ್ಟೆಂಬರ್ 09: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸ್ಸು ಸಲ್ಲಿಸಲು ತಮಿಳುನಾಡಿನ ಸರ್ಕಾರದ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

  ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸಂಬಂಧಿಸಿದ ಕಳೆದ ಕೆಲ ದಿನಗಳಿಂದ ತಮಿಳುನಾಡು ಹಾಗೂ ಕೇಂದ್ರ ಸರ್ಕಾರದ ನಡುವೆ ಕಾನೂನು ಸಮರ ನಡೆಯುತ್ತಿದೆ.

  ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಷ್ಟ್ರಪತಿ ನಕಾರ

  ಅಪರಾಧಿಗಳ ತ್ವರಿತ ಬಿಡುಗಡೆಗೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರಂಜನ್ ಗೋಗೊಯ್, ನವೀನ್ ಸಿನ್ಹಾ, ಕೆಎಂ ಜೋಸೆಫ್ ಅವರಿದ್ದ ನ್ಯಾಯಪೀಠವು, ಈ ಸಂಬಂಧ ರಾಜ್ಯದ ರಾಜ್ಯಪಾಲ(ಬಾನ್ವಾರಿಲಾಲ್ ಪುರೋಹಿತ್) ರ ಅಭಿಪ್ರಾಯ ಮತ್ತು ನಿರ್ದೇಶನಗಳನ್ನು ಪಾಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿತ್ತು.

  Tamil Nadu govt recommends Governor to release Rajiv Gandhi assassination convicts

  ಸಂವಿಧಾನದ ಪರಿಚ್ಛೇಧ 161ರ ಅನ್ವಯ ರಾಜ್ಯಪಾಲರಿಗೆ ಕೆಲವು ವಿಶೇಷ ಪ್ರಕರಣಗಳಲ್ಲಿ ಅಪರಾಧಿಗಳ ಶಿಕ್ಷೆ ಪ್ರಮಾಣ ತಗ್ಗಿಸುವ ಹಾಗೂ ಕ್ಷಮಾದಾನ ನೀಡುವ ಅಧಿಕಾರವಿರುತ್ತದೆ ಎಂದು ತಮಿಳುನಾಡಿನ ಮೀನುಗಾರಿಕಾ ಸಚಿವ ಜಯಕುಮಾರ್ ಅವರು ಹೇಳಿದ್ದಾರೆ.

  ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಎಲ್ಲ ಏಳು ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡುವಂತೆ 2016ರಲ್ಲಿ ತಮಿಳುನಾಡು ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು.

  ರಾಜೀವ್ ಗಾಂಧಿ ಹತ್ಯೆ, ಕರುಣಾನಿಧಿ ಮತ್ತು ಕಾಂಗ್ರೆಸ್‌: ಏನೀ ಸಂಬಂಧ?

  ಕಳೆದ 27 ವರ್ಷಗಳಿಂದ ಜೈಲುಶಿಕ್ಷೆ ಅನುಭವಿಸುತ್ತಿರುವ ಈ ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.

  ಆದರೆ, ಮನವಿಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರವು, ಯಾವುದೇ ಕಾರಣಕ್ಕೂ ರಾಜೀವ್​ ಹತ್ಯೆ ಆರೋಪಿಗಳನ್ನು ಬಿಡುಗಡೆ ಮಾಡುವುದಿಲ್ಲ, ಇಂಥ ಅಪರಾಧಿಗಳನ್ನು ಬಿಡುಗಡೆ ಮಾಡಿದರೆ, ತಪ್ಪು ಸಂದೇಶ ರವಾನಿಸಿದ್ದಂತಾಗುತ್ತದೆ ಎಂದಿದೆ.

  ಪ್ರಭಾಕರನ್ ನೇತೃತ್ವದ ಎಲ್ ಟಿಟಿಐನ ಆತ್ಮಾಹುತಿ ದಳದ ಮೂಲಕ ಶ್ರೀಪೆರಂಬದೂರಿನಲ್ಲಿ ಚುನಾವಣಾ ಪ್ರಚಾರ ನಿರತ ರಾಜೀವ್ ಗಾಂಧಿ ಅವರನ್ನು ಮೇ 21, 1991ರಂದು ಹತ್ಯೆ ಮಾಡಲಾಗಿತ್ತು.

  ನಳಿನಿ, ಮುರುಗನ್, ಎಜೆ ಪೆರಾರಿವಾಲನ್, ರಾಬರ್ಟ್ ಫಿಯೋಸ್, ಜಯಕುಮಾರ್, ರವಿಚಂದ್ರನ್ ಅವರಿಗೆ ಶಿಕ್ಷೆಯಾಗಿದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Tamil Nadu government today recommended Governor to release Rajiv Gandhi assassination convicts. The Supreme Court asked Tamil Nadu government to seek state Governor's direction for its demand to release the convicts in the Rajiv Gandhi assassination case.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more