ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯಾರ್ಥಿಗಳಿಗೆ ತಮಿಳುನಾಡು ಸರ್ಕಾರದ ಭರ್ಜರಿ ಸಂಕ್ರಾಂತಿ ಗಿಫ್ಟ್

|
Google Oneindia Kannada News

ಚೆನ್ನೈ, ಜನವರಿ 10: ಸುಮಾರು 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಮಿಳುನಾಡು ಸರ್ಕಾರ ಸಂಕ್ರಾಂತಿಗೆ ಭರ್ಜರಿ ಉಡುಗೊರೆ ನೀಡಿದೆ.

ತಮಿಳುನಾಡು ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತಿದೆ. ತಮಿಳುನಾಡು ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ 2ಜಿಬಿ ಡೇಟಾದೊಂದಿಗೆ ನೆಟ್ ಸೌಲಭ್ಯ ಕಲ್ಪಿಸಿಕೊಡುತ್ತಿದೆ.

ಏಪ್ರಿಲ್‌ನಲ್ಲಿ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಕಾಲ ಉಚಿತ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ. ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗುವಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್‌ ಕ್ಲಾಸ್‌ಗೆ 2 ಜಿಬಿ ಡೇಟಾವನ್ನು ಬಳಸಿಕೊಳ್ಳಬಹುದಾಗಿದೆ.

 Tamil Nadu Govt To Provide Free 2GB Daily Internet Data To Students For Online Classes

ಸರ್ಕಾರಿ ಅನುದಾನಿತ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜುಗಳು, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಒಟ್ಟು 9,69,047 ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಜನವರಿಯಿಂದ ಏಪ್ರಿಲ್‌ವರೆಗೆ ಡಾಟಾವನ್ನು ನೀಡಲಾಗುತ್ತದೆ. ಸರ್ಕಾರದ ಅನುದಾನಿತ ಕಾಳೇಜುಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗಿದೆ.

English summary
The Tamil Nadu government will provide free 2GB daily internet data to as many as 9,69,047 college students in the state until April 2021 to enable them to attend classes online at a time when the educational institutions have remained shut in view of the coronavirus pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X