ಸಾಮಾನ್ಯ ಜ್ವರಕ್ಕೆ ಚಿಕಿತ್ಸೆ ಪಡೆಯಲು ಬರಲಿದೆ 2 ಸಾವಿರ ಮಿನಿ ಕ್ಲಿನಿಕ್

ಚೆನ್ನೈ, ಸೆಪ್ಟೆಂಬರ್ 09 : ಸಾಮಾನ್ಯ ಆರೋಗ್ಯ ಸಮಸ್ಯೆಗಳು, ಜ್ವರಕ್ಕೆ ಚಿಕಿತ್ಸೆ ಪಡೆಯಲು ಮಿನಿ ಕ್ಲಿನಿಕ್‌ಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇಲ್ಲದ ಕಡೆ ಈ ಕ್ಲಿನಿಕ್‌ಗಳು ಸ್ಥಾಪನೆಯಾಗಲಿವೆ.

Recommended Video

      ಪೋಷಕರೇ ಮಕ್ಕಳನ್ನ school ಕಳುಹಿಸಲು ರೆಡಿಯಾಗಿ..! | Oneindia Kannada

      ತಮಿಳುನಾಡು ಸರ್ಕಾರ ರಾಜ್ಯದಲ್ಲಿ 2 ಸಾವಿರ ಮಿನಿ ಕ್ಲಿನಿಕ್‌ಗಳನ್ನು ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದೆ. ಕೋವಿಡ್ ಸಂದರ್ಭದಲ್ಲಿ ಜನರು ಈ ಕ್ಲಿನಿಕ್‌ಗಳಲ್ಲಿ ಜ್ವರ, ಸಾಮಾನ್ಯ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯಬಹುದು.

      ಮಿನಿ ಕ್ಲಿನಿಕ್‌ನಲ್ಲಿ ಒಬ್ಬರು ವೈದ್ಯರು, ನರ್ಸ್ ಮತ್ತು ಒಬ್ಬರು ಸಹಾಯಕರು ಇರುತ್ತಾರೆ. ಈ ಕ್ಲಿನಿಕ್‌ಗಳಿಗೆ ಬೇಕಾದ ವ್ಯವಸ್ಥೆ ಮತ್ತು ಔಷಧಿಗಳನ್ನು ಸರ್ಕಾರ ಪೂರೈಕೆ ಮಾಡಲಿದೆ.

      Tamil Nadu Govt To Start Mini Clinic To Treat For Ordinary Fever

      ಪ್ರಸ್ತುತ ಕೋವಿಡ್ ಪರಿಸ್ಥಿತಿ ಸಂದರ್ಭದಲ್ಲಿ ಪ್ರತಿ ದಿನ 85 ಸಾವಿರ ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಇದರಿಂದಾಗಿ ಸಾಮಾನ್ಯ ಆರೋಗ್ಯ ಸೇವೆಗೆ ತೊಂದರೆ ಆಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ.

      ಭಾರತದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ ರಾಜ್ಯಗಳಲ್ಲಿ ತಮಿಳುನಾಡು 3ನೇ ಸ್ಥಾನದಲ್ಲಿದೆ. ಮಂಗಳವಾರದ ಮಾಹಿತಿಯಂತೆ 4,74,940 ಸೋಂಕಿತರು ರಾಜ್ಯದಲ್ಲಿದ್ದಾರೆ.

      ತಮಿಳುನಾಡಿನಲ್ಲಿ ಚೆನ್ನೈ ನಗರದಲ್ಲಿ ಹೆಚ್ಚು ಸೋಂಕಿತರು ಇದ್ದಾರೆ. ಮಂಗಳವಾರದ ವರದಿಯಂತೆ ನಗರದಲ್ಲಿ 1,43,602 ಸೋಂಕಿತರು ಇದ್ದಾರೆ. ಕೋವಿಡ್ ಪರೀಕ್ಷೆ ಸಮಯದಲ್ಲಿ ಪಿಎಚ್‌ಸಿ ಮೇಲೆ ಹೆಚ್ಚು ಒತ್ತಡ ಬೀಳದಂತೆ ತಡೆಯಲು ಮಿನಿ ಕ್ಲಿನಿಕ್ ಸ್ಥಾಪನೆಯಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+