ತಮಿಳುನಾಡಿನಲ್ಲಿ ನವೆಂಬರ್ 26ರವರೆಗೂ ಭಾರಿ ಮಳೆಯ ಮುನ್ಸೂಚನೆ
ಚೆನ್ನೈ, ನವೆಂಬರ್ 23: ತಮಿಳುನಾಡಿನಲ್ಲಿ ನವೆಂಬರ್ 23ರಿಂದ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು ಹಾಗೂ ಕೇರಳ ಸದ್ಯಕ್ಕಂತೂ ಮಳೆಯ ಕಾಟದಿಂದ ಪಾರಾಗುವ ಲಕ್ಷಣ ಗೋಚರಿಸುತ್ತಿಲ್ಲ.
ಈಗಾಗಲೇ ಸತತ ವರ್ಷಧಾರೆ, ಪ್ರವಾಹ, ಮಳೆ ಸಂಬಂಧಿ ದುರಂತಗಳಿಂದ ಕಂಗೆಟ್ಟಿರುವ ಈ ರಾಜ್ಯಗಳಿಗೆ ಮತ್ತೊಂದು ಆಘಾತ ಎದುರಾಗಿದೆ.
ನವೆಂಬರ್ 27ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ದಕ್ಷಿಣ ಅಂಡಮಾನ್ ಸಮುದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇನ್ನು ನಾಲ್ಕೈದು ದಿನಗಳಲ್ಲಿ ತಮಿಳುನಾಡು ಕರಾವಳಿಯತ್ತಚಲಿಸಲಿದೆ.
ಇದರ ಪರಿಣಾಮವಾಗಿ ಬುಧವಾರದಿಂದ ತಮಿಳುನಾಡು, ಪುದುಚೇರಿ, ಕಾರೈಕಲ್‌ಗಳಲ್ಲಿ ಭಾರಿ ಮಳೆಯಾಗಲಿದೆ. ಕೊಯಮತ್ತೂರು, ಈರೋಡ್, ಕೃಷ್ಣಗಿರಿ, ಪುದುಕೊಟ್ಟೈ, ಅರಿಯಲೂರು, ಕಡಲೂರು, ಕರೂರು, ಪೆರಂಬಲೂರು, ತಿರುಚ್ಚಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತಮಿಳುನಾಡಿನಲ್ಲಿ ವಿಪರೀತ ಮಳೆ ಸುರಿಯಲು ಪ್ರಾರಂಭಿಸಿ ಅದಾಗಲೇ ವಾರದ ಮೇಲಾಯಿತು. ಅದರೊಂದಿಗೆ ಆಂಧ್ರಪ್ರದೇಶ, ಕೇರಳ, ಪುದುಚೇರಿಯಲ್ಲೂ ಒಂದೇಸಮ ಮಳೆಯಾಗುತ್ತಿದೆ. ಐಎಂಡಿ ದಕ್ಷಿಣ ತಮಿಳುನಾಡು, ಪುದುಕೊಟ್ಟೈ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಅಲ್ಲಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮುಂದಿನ ಐದು ದಿನಗಳ ಕಾಲ ತಮಿಳುನಾಡಿನ ಎರೋಡ್, ನಮಕ್ಕಲ್, ಕಲ್ಲಕುರಿಚಿ ಮತ್ತು ಪೆರಂಬಲೂರ್ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.
ಅದರಲ್ಲೂ ಇಂದು ತಿರುನೇಲ್ವೇಲಿ, ತೂತುಕುಡಿ, ಮಧುರೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಬೀಳಲಿದೆ ಎಂದು ಐಎಂಡಿ ಊಹಿಸಿದೆ.
ಇನ್ನು ಶುಕ್ರವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನ ಕರಾವಳಿ ತೀರಗಳಲ್ಲಿ ಗುಡುಗಿನೊಂದಿಗೆ ಭಾರಿ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಮಿಳುನಾಡಿನಲ್ಲಿ ಮಳೆಯಿಂದ ಆಗುವ ಅನಾಹುತ, ಅವಘಡಗಳು ಹೆಚ್ಚುತ್ತಲೇ ಇವೆ. ಕಳೆದ 24ಗಂಟೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನು 300ಕ್ಕೂ ಹೆಚ್ಚು ಜಾನುವಾರಗಳು ಸಾವನ್ನಪ್ಪಿವೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಅದರಲ್ಲೂ ಕಾವೇರಿ ನದಿ ಮುಖಜಭೂಮಿಯ ಜಿಲ್ಲೆಗಳಿಗೆ ನೀರು ಒದಗಿಸುವ ಸೇಲಂನ ಮೆಟ್ಟೂರು ಸೇರಿ ಕೆಲವು ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಹೊರಬಿಡಲಾಗುತ್ತಿರುವುದು ಇನ್ನಷ್ಟು ಅಪಾಯದ ಆತಂಕಕ್ಕೆ ಕಾರಣವಾಗಿದೆ. ವಿಲ್ಲುಪುರಂನ ತೆನ್‌ಪೆನ್ನೈ ಮತ್ತು ಕಾಂಚಿಪುರಂನ ಪಾಲಾರ್ ನದಿಗಳು ತುಂಬಿ ಹರಿಯುತ್ತಿವೆ. ಮೆಟ್ಟೂರು ಜಲಾಶಯದಿಂದ 65 ಸಾವಿರ ಕ್ಯೂಸೆಕ್ಸ್ ಮತ್ತು ಪೂಂಡಿ ಜಲಾಶಯದಿಂದ 29,684 ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದೆ.
ವಿಲ್ಲುಪುರಂನ ತೆನ್‌ಪೆನ್ನೈ ನದಿ ಉಕ್ಕಿ ಹರಿಯುತ್ತಿದ್ದರೆ, ಕಾಂಚೀಪುರಂನ ಪಾಲಾರ್ ತುಂಬಿ ಹರಿಯುತ್ತಿದೆ. ಕಳೆದ 24ಗಂಟೆಯಿಂದ ತಮಿಳುನಾಡಿನ 37 ಜಿಲ್ಲೆಗಳಲ್ಲಿ ಒಂದೇ ಸಮನೆ ಮಳೆ ಸುರಿಯುತ್ತಿದೆ. ಅದರಲ್ಲೂ ತಿರುಪತೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 39.91 ಎಂಎಂ ಮಳೆ ಸುರಿದಿದೆ. ವಿಲ್ಲುಪುರಂನಲ್ಲಿ ಬರೋಬ್ಬರಿ 18,500 ಹೆಕ್ಟೇರ್ಗಳಷ್ಟು ಕೃಷಿ ಭೂಮಿ ಜಲಾವೃತಗೊಂಡಿದೆ.
ರಾಜ್ಯಾದ್ಯಂತ ಅದರಲ್ಲೂ ಚೆನ್ನೈ, ಕಾಂಚಿಪುರಂ, ತಿರುವಲ್ಲೂರ್ ಮತ್ತು ವೆಲ್ಲೋರ್ಗಳಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಎನ್ಡಿಆರ್ಎಫ್ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಕೆಳಪ್ರದೇಶಗಳಲ್ಲಿರುವ ಜನರನ್ನು ಸ್ಥಳಾಂತರ ಮಾಡುವ ಕಾರ್ಯ ಭರದಿಂದ ಸಾಗುತ್ತಿವೆ.
ವರುಣನ ಆರ್ಭಟಕ್ಕೆ ಈಗಾಗಲೇ ಕಂಗೆಟ್ಟಿರುವ ತಮಿಳುನಾಡಿಗೆ ನವೆಂಬರ್ 26ರವರೆಗಂತೂ ಮಳೆಯಿಂದ ಮುಕ್ತಿಯಿಲ್ಲ. ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 26ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಇನ್ನು ಮುಂದಿನ ಐದು ದಿನಗಳ ಕಾಲ ತಮಿಳುನಾಡಿನ ಎರೋಡ್, ನಮಕ್ಕಲ್, ಕಲ್ಲಕುರಿಚಿ ಮತ್ತು ಪೆರಂಬಲೂರ್ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಅದರಲ್ಲೂ ಇಂದು ತಿರುನೇಲ್ವೇಲಿ, ತೂತುಕುಡಿ, ಮಧುರೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಬೀಳಲಿದೆ ಎಂದು ಐಎಂಡಿ ಊಹಿಸಿದೆ.
ನವೆಂಬರ್ 24ರವರೆಗೆ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ. ಹಾಗೇ, ಉಳಿದ ಕಡೆಗಳಲ್ಲೂ ಮೋಡಮುಸುಕಿದ ವಾತಾವರಣವೇ ಇರಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
ತಮಿಳುನಾಡಿನಲ್ಲಿ ವಿಪರೀತ ಮಳೆ ಸುರಿಯಲು ಪ್ರಾರಂಭಿಸಿ ಅದಾಗಲೇ ವಾರದ ಮೇಲಾಯಿತು. ಅದರೊಂದಿಗೆ ಆಂಧ್ರಪ್ರದೇಶ, ಕೇರಳ, ಪುದುಚೇರಿಯಲ್ಲೂ ಒಂದೇಸಮ ಮಳೆಯಾಗುತ್ತಿದೆ.
ಐಎಂಡಿ ದಕ್ಷಿಣ ತಮಿಳುನಾಡು, ಪುದುಕೊಟ್ಟೈ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಅಲ್ಲಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇನ್ನು ಶುಕ್ರವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನ ಕರಾವಳಿ ತೀರಗಳಲ್ಲಿ ಗುಡುಗಿನೊಂದಿಗೆ ಭಾರಿ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ತಿರುಮಲ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ, ತಿರುಪತಿಯನ್ನು ಬೆಂಗಳೂರು, ಚೆನ್ನೈ, ಹೈದರಾಬಾದ್, ವಿಜಯವಾಡಕ್ಕೆ ಸಂಪರ್ಕಿಸುವ ತಾತ್ಕಾಲಿಕ ರಸ್ತೆಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.