ಜಿಲ್ಲೆಯಿಂದ ಜಿಲ್ಲೆಗೆ ಹೋಗುವುದಕ್ಕೂ ಸರ್ಕಾರದಿಂದ ಪಾಸ್ ಅಗತ್ಯವೇ?

ಚೆನ್ನೈ, ಜೂನ್.25: ನೊವೆಲ್ ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ಕೇಂದ್ರ ಸರ್ಕಾರ ಆಯಾ ರಾಜ್ಯ ಸರ್ಕಾರಗಳಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ವಿಶೇಷ ಅಧಿಕಾರವನ್ನು ನೀಡಿದೆ. ಈ ಹಿನ್ನೆಲೆ ತಮಿಳುನಾಡು ಸರ್ಕಾರವು ವಿಶೇಷ ಕ್ರಮವನ್ನು ಜಾರಿಗೊಳಿಸಿದೆ.

Recommended Video

      Sushanth Singh Rajput : ಬಂತು ಸುಶಾಂತ್ ಸಿಂಗ್ 2ನೇ ಮರಣೋತ್ತರ ಪರೀಕ್ಷೆ ವರದಿ|Final Report | Oneindia Kannada

      ಜೂನ್.25ರಿಂದ ಜೂನ್.30ರವರೆಗೂ ಅಂತರ್-ಜಿಲ್ಲಾ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ತಿಳಿಸಿದ್ದಾರೆ. ವಲಯಗಳಲ್ಲಿ ವಾಹನಗಳ ಸಂಚಾರಕ್ಕೆ ಎಂದಿನಂತೆ ಅನುಮತಿ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

      ವಲಯಗಳಲ್ಲಿ ಮತ್ತು ಜಿಲ್ಲೆಗಳಲ್ಲಿ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳು ಹಾಗೂ ಖಾಸಗಿ ವಾಹನಗಳ ಸಂಚಾರಕ್ಕೆ ಮುಂದಿನ ಐದು ದಿನಗಳವರೆಗೂ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಪ್ರಯಾಣಿಸುವುದು ನಿಷಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

      Tamil Nadu: Inter-District Movement Of Buses, Cars Suspended Till June.30


      ಜಿಲ್ಲೆಯಿಂದ ಜಿಲ್ಲೆಗೆ ತೆರಳಲು ಸರ್ಕಾರದ ಅನುಮತಿ:

      ತಮಿಳುನಾಡಿನಲ್ಲಿ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಮತ್ತು ಖಾಸಗಿ ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ. ಆದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ತೆರಳಬೇಕಿದ್ದಲ್ಲಿ ಸರ್ಕಾರದಿಂದ ಕಡ್ಡಾಯವಾಗಿ ಅನುಮತಿ ಪಾಸ್ ಪಡೆದುಕೊಳ್ಳಬೇಕು. ತಮಿಳುನಾಡು ಸರ್ಕಾರದ ವೆಬ್ ಸೈಟ್ ನಲ್ಲಿ ಇ-ಪಾಸ್ ಪಡೆದವರಿಗೆ ಮಾತ್ರ ಬೇರೆ ಜಿಲ್ಲೆಗಳಿಗೆ ಸಂಚರಿಸಲು ಅವಕಾಶ ನೀಡಲಾಗುತ್ತದೆ ಎಂದು ಸಿಎಂ ಪಳನಿಸ್ವಾಮಿ ಸ್ಪಷ್ಟಪಡಿಸಿದ್ದಾರೆ.

      ಬುಧವಾರವಷ್ಟೇ ತಮಿಳುನಾಡಿನಲ್ಲಿ ಒಂದೇ ದಿನ 2,865 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿದ್ದು, 33 ಜನರು ಮಹಾಮಾರಿಗೆ ಬಲಿಯಾಗಿದ್ದರು. ರಾಜ್ಯದಲ್ಲಿ ಕೊರೊನಾವೈರಸ್ ಒಟ್ಟು ಸೋಂಕಿತರ ಸಂಖ್ಯೆಯು 67,865ಕ್ಕೆ ಏರಿಕೆಯಾಗಿದ್ದರೆ, ಒಟ್ಟು ಸಾವಿನ ಸಂಖ್ಯೆ 866ಕ್ಕೆ ತಲುಪಿರುವುದಾಗಿ ರಾಜ್ಯ ಆರೋಗ್ಯ ಇಲಾಖೆಯು ಮಾಹಿತಿ ನೀಡಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+