ಸೋಮವಾರದಿಂದ ಕಮಲ್ ಹಾಸನ್ ಚುನಾವಣಾ ಪ್ರಚಾರ ಶುರು
ಚೆನ್ನೈ, ಡಿಸೆಂಬರ್ 10: ತಮಿಳುನಾಡು ವಿಧಾನಸಭೆ ಚುನಾವಣೆ 2021ರಲ್ಲಿ ನಡೆಯಲಿದೆ. ಮುಂದಿನ ವರ್ಷದ ಮೇ ತಿಂಗಳಲ್ಲಿ ಪ್ರಸ್ತುತ ಇರುವ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಏಪ್ರಿಲ್ ತಿಂಗಳಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.
ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜಕೀಯ ಪಕ್ಷಗಳು ಸಕ್ರಿಯವಾಗಲು ಆರಂಭಿಸಿವೆ. ಸೂಪರ್ ಸ್ಟಾರ್ ರಜನಿಕಾಂತ್ ಜನವರಿಯಲ್ಲಿ ತಮ್ಮಹೊಸ ಪಕ್ಷ ಸ್ಥಾಪನೆಯನ್ನು ಘೋಷಿಸುವುದಾಗಿ ತಿಳಿಸಿದ್ದಾರೆ. ಆದರೆ ಮತ್ತೊಬ್ಬ ನಟ, ರಾಜಕಾರಣಿ ಕಮಲ ಹಾಸನ್ ಅವರು ಈಗಲೇ ಚುನಾವಣಾ ಪ್ರಚಾರಕ್ಕೆ ಕಾಲಿರಿಸುತ್ತಿದ್ದಾರೆ.
ಮಕ್ಕಳ್ ನೀಧಿ ಮೈಯಮ್ (ಎಂಎನ್‌ಎಂ) ಮುಖ್ಯಸ್ಥರಾಗಿರುವ ಕಮಲ್ ಹಾಸನ್ 2021ರ ತಮಿಳುನಾಡು ವಿಧಾನಸಭೆ ಚುನಾವಣೆಯ ತಮ್ಮ ಪ್ರಚಾರವನ್ನು ಡಿಸೆಂಬರ್ 13ರಂದು ಆರಂಭಿಸಲಿದ್ದಾರೆ ಎಂದು ಅವರ ಪಕ್ಷ ಗುರುವಾರ ತಿಳಿಸಿದೆ.

ಡಿ. 13 ರಿಂದ 16ರವರೆಗೆ ಮೊದಲ ಹಂತದಲ್ಲಿ ಕಮಲ್ ಹಾಸನ್ ಅವರು ಪ್ರಚಾರ ನಡೆಸಲಿದ್ದಾರೆ. ನಾಲ್ಕು ದಿನಗಳ ಅವಧಿಯ ಪ್ರಚಾರದಲ್ಲಿ ಅವರು ಮದುರೈ, ಥೇಣಿ, ದಿಂಡಿಗಲ್, ವಿರುದ್ಧನಗರ್, ತಿರುನೆಲ್ವೇಲಿ, ತೂತುಕುಡಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಅವರು ಪ್ರಚಾರ ನಡೆಸಲಿದ್ದಾರೆ ಎಂದು ಎಂಎನ್‌ಎಂ ಉಪಾಧ್ಯಕ್ಷ ಡಾ. ಆರ್ ಮಹೇಂದ್ರನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಮಲ್ ಹಾಸನ್ ಅವರು 2018ರ ಫೆಬ್ರವರಿಯಲ್ಲಿ ತಮ್ಮ ಪಕ್ಷವನ್ನು ಸ್ಥಾಪಿಸಿದ್ದರು. ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಆದರೆ ಗೆಲುವಿನ ಆರಂಭ ಸಿಕ್ಕಿರಲಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications