ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು ಚುನಾವಣೆ: ಮತದಾನ,ಎಣಿಕೆ ನಡುವೆ ದೀರ್ಘ ಅಂತರದ ಬಗ್ಗೆ ಕಳವಳ

|
Google Oneindia Kannada News

ಚೆನ್ನೈ,ಮಾರ್ಚ್ 2: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮತದಾನ ಹಾಗೂ ಎಣಿಕೆ ಕಾರ್ಯದ ನಡುವೆ ಇರುವ ದೀರ್ಘ ಅಂತರದ ಕುರಿತು ರಾಜಕೀಯ ಪಕ್ಷಗಳು ಕಳವಳ ವ್ಯಕ್ತಪಡಿಸಿವೆ.

ಏಪ್ರಿಲ್ 6 ರಂದು ನಡೆಯಲಿದ್ದು, ಮೇ 2ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ.ತಮಿಳುನಾಡು ವಿಧಾನಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ನಡುವೆ ಧೀರ್ಘ ಅಂತರ ಇರುವ ಬಗ್ಗೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದ್ದು, ಈ ಅಂತರವನ್ನು ಕಡಿಮೆ ಮಾಡುವಂತೆ ಮುಖ್ಯ ಚುನಾವಣಾಧಿಕಾರಿ ಸತ್ಯಬ್ರಹತ ಸಾಹೂ ಅವರನ್ನು ಒತ್ತಾಯಿಸಿದ್ದಾರೆ.

ತಮಿಳುನಾಡು ಚುನಾವಣೆ: ಮತದಾನ, ಫಲಿತಾಂಶ ಯಾವಾಗ?ತಮಿಳುನಾಡು ಚುನಾವಣೆ: ಮತದಾನ, ಫಲಿತಾಂಶ ಯಾವಾಗ?

ಪೋಸ್ಟಲ್ ಬ್ಯಾಲೆಟ್ ಸೌಕರ್ಯಗಳ ಬಗ್ಗೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಐಎಡಿಎಂಕೆಯ ಪೊಲಾಚಿ ವಿ ಜಯರಾಮನ್ ಹೇಳಿದರು. ಮತದಾನ ಮತ್ತು ಎಣಿಕೆ ದಿನಗಳ ನಡುವಿನ ನಡುವೆ ಧೀರ್ಘ ಅಂತರವನ್ನು ಗಣನೀಯವಾಗಿ ಕಡಿಮೆ ಮಾಡಬೇಕು ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪ್ರತಿನಿಧಿ ಒತ್ತಾಯಿಸಿದರು.

Election

ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. 12ನೇ ಮಾರ್ಚ್ ಅಧಿಸೂಚನೆ ಪ್ರಕಟ. 19ನೇ ಮಾರ್ಚ್ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. 20 ಮಾರ್ಚ್ ನಾಮಪತ್ರ ಪರಿಶೀಲನೆ. ನಾಮಪತ್ರ ಹಿಂಪಡೆಯಲು ಮಾರ್ಚ್ 22 ಕೊನೆ ದಿನ. ಚುನಾವಣೆ 6ನೇ ಏಪ್ರಿಲ್. ಕನ್ಯಾಕುಮಾರಿ ಲೋಕಸಭೆ ಕ್ಷೇತ್ರದ ಚುನಾವಣೆ ಕೂಡ ಏ. 6ರಂದು ನಡೆಯಲಿದೆ.

ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಹಾಗೂ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟಗಳು ಪ್ರಮುಖವಾಗಿ ಸೆಣಸಾಟ ನಡೆಸುವ ನಿರೀಕ್ಷೆಯಿದೆ. ಕಮಲ ಹಾಸನ್ ಅವರ ಪಕ್ಷ ಸೇರಿದಂತೆ ಇತರೆ ಪಕ್ಷಗಳೂ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.

ಮುಖ್ಯ ಚುನಾವಣಾಧಿಕಾರಿ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ವಿವಿಧ ವಿಷಯಗಳನ್ನು ಎತ್ತಿದ ರಾಜಕೀಯ ಪಕ್ಷಗಳು, 80ಕ್ಕಿಂತ ಹೆಚ್ಚು ಮತದಾರರಿಗೆ ಪೋಸ್ಟಲ್ ಬ್ಯಾಲೆಟ್ ಸೌಕರ್ಯವನ್ನು ಹೆಚ್ಚಿಸುವುದು, ಮತದಾರರಿಗೆ ಹಂಚಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸೇರಿದಂತೆ ಮತ್ತಿತರ ಸಲಹೆಗಳನ್ನು ನೀಡಿದವು.

English summary
Representatives of many political parties in Tamil Nadu on Monday expressed concern over the long gap between polling and counting in the state and urged Chief Electoral Officer Satyabrata Sahoo to reduce this gap.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X