ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನಲ್ಲಿ 24 ಗಂಟೆಯಲ್ಲಿ 820 ಮಿ.ಮೀ ದಾಖಲೆ ಮಳೆ

|
Google Oneindia Kannada News

ಚೆನ್ನೈ, ಆಗಸ್ಟ್ 9: ತಮಿಳುನಾಡಿನ ನೀಲಗಿರಿ ತಪ್ಪಲಿನ ಅವಲಾಂಚಿಯಲ್ಲಿ 4 ಗಂಟೆಗಳಲ್ಲಿ 820 ಮಿ.ಮೀ ದಾಖಲೆಯ ಮಳೆಯಾಗಿದೆ.

ಕರ್ನಾಟಕ, ಆಂಧ್ರ, ಮಹಾರಾಷ್ಟ್ರದಲ್ಲಿ ಮುಂಗಾರು ಮಳೆ ಭಾರೀ ಅನಾಹುತ ತಂದೊಡ್ಡುತ್ತಿರುವ ಬೆನ್ನಲ್ಲೇ ತಮಿಳುನಾಡಿನ ಅವಲಾಂಚಿ ಎನ್ನುವ ಪ್ರದೇಶದಲ್ಲಿ ಕೇವಲ 24 ಗಂಟೆಗಳ ಅವಧಿಯಲ್ಲಿ ಭರ್ಜರಿ ಮಳೆಯಾಗಿದೆ. 820 ಮಿ.ಮೀನಷ್ಟು ಮಳೆಯಾಗಿದೆ.

ವರುಣನ ಆರ್ಭಟ: ಉತ್ತರ ಕರ್ನಾಟಕದಲ್ಲಿ ಮಳೆ ಮತ್ತಷ್ಟು ಹೆಚ್ಚಳ ಸಾಧ್ಯತೆ ವರುಣನ ಆರ್ಭಟ: ಉತ್ತರ ಕರ್ನಾಟಕದಲ್ಲಿ ಮಳೆ ಮತ್ತಷ್ಟು ಹೆಚ್ಚಳ ಸಾಧ್ಯತೆ

ಇದು ಈ ವರ್ಷ ತಮಿಳುನಾಡಿನಲ್ಲಿ ಸುರಿದ ದಾಖಲೆಯ ಪ್ರಮಾಣದ ಮಳೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ 8.30ಕ್ಕೆ ಆರಂಭವಾಗಿ ಗುರುವಾರ ಬೆಳಗ್ಗೆ 8.30ಕ್ಕೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ನೀಲಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಸುಂದರ ಪ್ರವಾಸಿತಾಣ ಅವಲಾಂಚಿಯಲ್ಲಿ 820 ಮಿ.ಮೀ ನಷ್ಟು ಮಳೆಯಾಗಿದೆ.

Tamil Nadu Rain Records 820 mm Per Day

ಕಳೆದ 48 ಗಂಟೆಗಳಿಂದಲೂ ಅಲ್ಲಿ ಮಳೆ ಸುರಿಯುತ್ತಿದೆ. ಮುಂದಿನ ಒಂದೆರೆಡು ದಿನ ಇದೇ ಪ್ರಮಾಣದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇನ್ನು ಕರ್ನಾಟಕದ ಸ್ಥಿತಿಯಂತೂ ಹೇಳ ತೀರದು, ಉತ್ತರ ಕರ್ನಾಟಕ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಉಡುಪಿ, ಚಿಕ್ಕಮಗಳೂರಿನಲ್ಲೂ ಕೂಡ ಭಾರಿ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಮಳೆ ಹೀಗೆಯೇ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

English summary
Tamil Nadu Rain: Tamil Nadu Rain Records 820 mm Per Day, The Avalanche region in the Nilgiris received 820 mm of rain over a 24-hour period till Thursday morning, the highest in Tamil Nadu’s history.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X