ತಮಿಳುನಾಡು ; ಒಂದೇ ದಿನ 110 ಹೊಸ ಕೊರೊನಾ ಪ್ರಕರಣ!
ಚೆನ್ನೈ, ಏಪ್ರಿಲ್ 01 : ತಮಿಳುನಾಡಿನಲ್ಲಿ ಬುಧವಾರ ಒಂದೇ ದಿನ 110 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 234ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಇಷ್ಟು ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಇದೇ ಮೊದಲು.
Recommended Video
ನವದೆಹಲಿಯ ಮರ್ಕಜ್ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲೀಗ್ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಮರಳಿದ್ದ 110 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬುಧವಾರ ಎಲ್ಲರ ಪರೀಕ್ಷೆ ನಡೆಸಲಾಗಿದೆ.
"ಒಂದೇ ದಿನದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇಷ್ಟು ಹೆಚ್ಚಾಗಿರುವುದು ಇದೇ ಮೊದಲು. ರಾಜ್ಯದ 15 ಜಿಲ್ಲೆಗಳ 110 ಜನರಿಗೆ ಪರೀಕ್ಷೆ ಮಾಡಲಾಗಿದ್ದು, ಪಾಸಿಟೀವ್ ವರದಿ ಬಂದಿದೆ" ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಬೀಲಾ ರಾಜೇಶ್ ಹೇಳಿದ್ದಾರೆ.

ಕೊರೊನಾ ಸೋಂಕು ಖಚಿತಗೊಂಡಿರುವ ಎಲ್ಲಾ 110 ಜನರು ತಬ್ಲೀಗ್ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದು ಖಚಿತವಾಗಿದೆ. ತಮಿಳುನಾಡಿನಲ್ಲಿ ಬುಧವಾರ ಕೊರೊನಾ ಸೋಂಕಿತರ ಸಂಖ್ಯೆ 234ಕ್ಕೆ ತಲುಪಿದೆ.
ತಮಿಳುನಾಡಿನಿಂದ 1,500 ಜನರು ತಬ್ಲೀಗ್ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂಬ ಮಾಹಿತಿ ಸಿಕ್ಕಿದೆ. ಇವರಲ್ಲಿ 1,131 ಜನರು ರಾಜ್ಯಕ್ಕೆ ವಾಪಸ್ ಆಗಿದ್ದರು.












Click it and Unblock the Notifications