• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

24 ಗಂಟೆ ಲೆಕ್ಕ: ದೇಶದಲ್ಲೇ ಅತಿಹೆಚ್ಚು ಕೊರೊನಾ ಕೇಸ್ ದಾಖಲಿಸಿದ ರಾಜ್ಯ?

|
Google Oneindia Kannada News

ಚೆನ್ನೈ, ಮೇ 25: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಭಾರತದ ಪೈಕಿ ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳ ಬದಲಿಗೆ ತಮಿಳುನಾಡು ಅತಿಹೆಚ್ಚು ಕೊವಿಡ್-19 ಪ್ರಕರಣಗಳನ್ನು ವರದಿ ಮಾಡಿದೆ.

ತಮಿಳುನಾಡಿನಲ್ಲಿ ಒಂದೇ ದಿನ 34,285 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 28,745 ಸೋಂಕಿತರು ಗುಣಮುಖರಾಗಿದ್ದು 24 ಗಂಟೆಗಳಲ್ಲಿ 468 ಜನರು ಪ್ರಾಣ ಬಿಟ್ಟಿದ್ದಾರೆ.

ಸಖತ್ ಸುದ್ದಿ: ಭಾರತದಲ್ಲಿ ಕೊರೊನಾವೈರಸ್ ನಿವಾರಣೆಗೆ UV-C ಬೆಳಕಿನ ಕಿರಣ!ಸಖತ್ ಸುದ್ದಿ: ಭಾರತದಲ್ಲಿ ಕೊರೊನಾವೈರಸ್ ನಿವಾರಣೆಗೆ UV-C ಬೆಳಕಿನ ಕಿರಣ!

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ತಮಿಳುನಾಡಿನಲ್ಲಿ ಒಟ್ಟು 19,11,496 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 15,83,504 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ 21,340 ಜನರು ಬಲಿಯಾಗಿದ್ದಾರೆ. ಉಳಿದಂತೆ 3,06,652 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಾಲ್ಕನೇ ಸ್ಥಾನದಲ್ಲಿ ಗುರುತಿಸಿಕೊಂಡ ಕರ್ನಾಟಕ:

ಭಾರತದಲ್ಲಿ ಅತಿಹೆಚ್ಚು ಕೊವಿಡ್-19 ಪ್ರಕರಣಗಳನ್ನು ದಾಖಲಿಸಿದ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಎರಡನೇ ಸ್ಥಾನ, ಮಹಾರಾಷ್ಟ್ರ ಮೂರು ಹಾಗೂ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಕರ್ನಾಟಕದಲ್ಲಿ ಒಂದೇ ದಿನ 22,758 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 38,224 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 588 ಜನರು ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು 24,72,973 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 20,22,172 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ 26,399 ಜನರು ಬಲಿಯಾಗಿದ್ದಾರೆ. ಉಳಿದಂತೆ 4,24,381 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Tamil Nadu Reported Highest Coronavirus Cases In India In Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X