ತಮಿಳುನಾಡಿನಲ್ಲಿ 'ಡೆಲ್ಟಾ ಪ್ಲಸ್' ರೂಪಾಂತರಕ್ಕೆ ಮೊದಲ ಬಲಿ
ಚೆನ್ನೈ, ಜೂ.26: ಕೋವಿಡ್‌ನ ಡೆಲ್ಟಾ ಪ್ಲಸ್ ರೂಪಾಂತರಕ್ಕೆ ತಮಿಳುನಾಡಿನಲ್ಲಿ ಮೊದಲ ಬಲಿಯಾಗಿದೆ. ''ಮಧುರೈನ ವ್ಯಕ್ತಿಯೊಬ್ಬರು ಡೆಲ್ಟಾ ಪ್ಲಸ್ ರೂಪಾಂತರ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ,'' ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ವೈದ್ಯಕೀಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಬ್ರಮಣಿಯನ್, ''ರಾಜ್ಯದಲ್ಲಿ ಹೊಸ 'ಡೆಲ್ಟಾ ಪ್ಲಸ್' ರೂಪಾಂತರದ ಮೂರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಇಬ್ಬರು ಚೇತರಿಸಿಕೊಂಡಿದ್ದಾರೆ,'' ಎಂದು ತಿಳಿಸಿದ್ದಾರೆ.
''ಚೆನ್ನೈನ 32 ವರ್ಷದ ನರ್ಸ್ ಮತ್ತು ಕಾಂಚೀಪುರಂ ಜಿಲ್ಲೆಯ ಇನ್ನೊಬ್ಬ ವ್ಯಕ್ತಿಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಪಾಸಿಟಿವ್ ಆಗಿದೆ. ಇನ್ನು ಮಧುರೈನಲ್ಲಿ ರೋಗಿಯ ಸಾವಿನ ನಂತರ, ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಿದಾಗ 'ಡೆಲ್ಟಾ ಪ್ಲಸ್' ರೂಪಾಂತರ ಸೋಂಕು ಇರುವುದು ಎಂದು ದೃಢಪಟ್ಟಿದೆ,'' ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಈ ರೋಗಿಯ ಸಂಪರ್ಕದಲ್ಲಿದ್ದವರಲ್ಲಿ ಕೊರೊನಾ ನೆಗೆಟಿವ್ ಆಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್‌ನ ಗರಿಷ್ಠ 22 ಪ್ರಕರಣಗಳು ವರದಿಯಾದರೆ, ತಮಿಳುನಾಡಿನಲ್ಲಿ ಶುಕ್ರವಾರದವರೆಗೆ ಒಂಬತ್ತು ಜನರಲ್ಲಿ ಈ ಸೋಂಕು ಕಂಡು ಬಂದಿದೆ.
ಈ ನಡುವೆ, ''ಶುಕ್ರವಾರ ಡೆಲ್ಟಾ ಪ್ಲಸ್ ರೂಪಾಂತರಕ್ಕೆ ಮಹಾರಾಷ್ಟ್ರದಲ್ಲಿ ಮೊದಲ ಬಲಿಯಾಗಿದೆ. ರತ್ನಾಗಿರಿ ಸಿವಿಲ್ ಆಸ್ಪತ್ರೆಯಲ್ಲಿ ವೃದ್ಧ ಮಹಿಳೆ ಸಾವನ್ನಪ್ಪಿದ್ದಾರೆ,'' ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
''ಕೆಲವು ದಿನಗಳ ಹಿಂದೆ ಮುಂಬೈನಿಂದ 330 ಕಿಲೋಮೀಟರ್ ದೂರದಲ್ಲಿರುವ ಸಂಗಮೇಶ್ವರ್ ಮೂಲದ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಹಿಳೆಯು ಕೊಮೊರ್ಬಿಡಿಟಿಗಳಿಂದಲೂ ಬಳಲುತ್ತಿದ್ದಾರೆಯೇ ಎಂದು ಪರೀಕ್ಷೆ ನಡೆಸಲಾಗುತ್ತಿದೆ,'' ಎಂದು ರತ್ನಾಗಿರಿ ಜಿಲ್ಲಾ ಅಧಿಕಾರಿ ಸಂಜಯ್ ಶಿಂಧೆ ಪಿಟಿಐಗೆ ತಿಳಿಸಿದ್ದಾರೆ.
ದೇಶದಲ್ಲಿ ಈವರೆಗೆ 51 ಪ್ರಕರಣಗಳು 'ಡೆಲ್ಟಾ ಪ್ಲಸ್' ರೂಪಾಂತರ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ 20 ಕ್ಕೂ ಅಧಿಕ ಪ್ರಕರಣ ಮಹಾರಾಷ್ಟ್ರದಲ್ಲಿ ದೃಢಪಟ್ಟಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರದ 22 ಪ್ರಕರಣಗಳು ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಒಂಬತ್ತು, ಮಧ್ಯಪ್ರದೇಶದಲ್ಲಿ ಏಳು, ಕೇರಳದಲ್ಲಿ ಮೂರು, ಪಂಜಾಬ್ ಮತ್ತು ಗುಜರಾತ್‌ನಲ್ಲಿ ತಲಾ ಎರಡು ಪ್ರಕರಣಗಳು ಮತ್ತು ಆಂಧ್ರಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ಹರಿಯಾಣ ಮತ್ತು ಕರ್ನಾಟಕದಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ
(ಒನ್‌ಇಂಡಿಯಾ ಸುದ್ದಿ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications