ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಮೇಕೆದಾಟು ವಿರುದ್ಧ ತಮಿಳುನಾಡು ನಿರ್ಣಯ, ಬಿಜೆಪಿ ಬೆಂಬಲ

|
Google Oneindia Kannada News

ಚೆನ್ನೈ, ಮಾರ್ಚ್ 21: ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ಈ ಕುರಿತು ನಿರ್ಣಯ ಮಂಡನೆ ಮಾಡಿದೆ. ರಾಜ್ಯದ ವಿರೋಧ ಪಕ್ಷದ ಬಿಜೆಪಿ ಸಹ ಇದಕ್ಕೆ ಬೆಂಬಲ ಸೂಚಿಸಿದೆ.

ತಮಿಳುನಾಡು ರಾಜ್ಯದ ಸಚಿವ ದೊರೈ ಮುರುಗನ್ ವಿಧಾನಸಭೆಯಲ್ಲಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರುವ ವಿರುದ್ಧ ನಿರ್ಣಯ ಮಂಡಿಸಿದರು.

ಮೇಕೆದಾಟು ಯೋಜನೆ ತ್ವರಿತ ಅನುಮೋದನೆಗೆ ಕ್ರಮ ಎಂದ ಸಿಎಂ ಮೇಕೆದಾಟು ಯೋಜನೆ ತ್ವರಿತ ಅನುಮೋದನೆಗೆ ಕ್ರಮ ಎಂದ ಸಿಎಂ

Tamil Nadu Resolution Against Mekedatu Project BJP Support State Govt

ರಾಜ್ಯದ ಅನುಮತಿ ಇಲ್ಲದೇ ಕಾವೇರಿ ನದಿ ವ್ಯಾಪ್ತಿಯಲ್ಲಿ ಮೇಕೆದಾಟು ಯೋಜನೆ ಕೈಗೊಳ್ಳುವ ಕರ್ನಾಟಕ ಸರ್ಕಾರದ ವಿರುದ್ಧ ನಿರ್ಣಯ ಮಂಡಿಸಲಾಗಿದೆ. ಯೋಜನೆಗೆ ಅನುಮತಿ ನೀಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಣಯದಲ್ಲಿ ಪ್ರಸ್ತಾಪಿಸಲಾಗಿದೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಜೊತೆ ಮಾತುಕತೆ ಅಗತ್ಯವಿಲ್ಲ: ಕುಮಾರಸ್ವಾಮಿಮೇಕೆದಾಟು ಯೋಜನೆಗೆ ತಮಿಳುನಾಡು ಜೊತೆ ಮಾತುಕತೆ ಅಗತ್ಯವಿಲ್ಲ: ಕುಮಾರಸ್ವಾಮಿ

ತಮಿಳುನಾಡಿನ ಪ್ರತಿಪಕ್ಷವಾದ ಬಿಜೆಪಿ ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯದ ಡಿಎಂಕೆ ಸರ್ಕಾರ ಕೈಗೊಂಡ ತೀರ್ಮಾನಕ್ಕೆ ಬೆಂಬಲ ನೀಡಿದೆ. "ತಮಿಳುನಾಡು ಬಿಜೆಪಿ ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಿದೆ" ಎಂದು ಬಿಜೆಪಿ ನಾಯಕ ನೈನಾರ್ ನರೇಂದ್ರನ್ ಹೇಳಿದ್ದಾರೆ.

ಕರ್ನಾಟಕ ಬಜೆಟ್ 2022: ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಘೋಷಣೆಕರ್ನಾಟಕ ಬಜೆಟ್ 2022: ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಘೋಷಣೆ

ಮಾರ್ಚ್ 4ರಂದು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಕೆದಾಟು ಯೋಜನೆ ಜಾರಿಗೊಳಿಸಲು 1000 ಕೋಟಿ ರೂ.ಗಳ ಅನುದಾನ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಇದೆ. ಆದರೆ ತಮಿಳುನಾಡು ಬಿಜೆಪಿ ಘಟಕ ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಮೇಕೆದಾಟು ಯೋಜನೆ ವಿರೋಧಿಸುತ್ತಿದೆ.

ಕರ್ನಾಟಕದ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮೇಕೆದಾಟುವಿನಿಂದ ಬೆಂಗಳೂರು ತನಕ ಬೃಹತ ಪಾದಯಾತ್ರೆ ನಡೆಸಿದದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಸರ್ವಪಕ್ಷ ಸಭೆ ನಡೆಸಿದ್ದರು.

ಸರ್ವ ಪಕ್ಷಗಳ ಸಭೆ ಬಳಿಕ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಮೇಕೆದಾಟು ಯೋಜನೆಗೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಪರಿಸರ ಸಚಿವಾಲಯದಿಂದ ತ್ವರಿತವಾಗಿ ಅನುಮೋದನೆ ಪಡೆದುಕೊಂಡು ಯೋಜನೆಗೆ ಚಾಲನೆ ನೀಡಲು ವಿಧಾನ‌ ಮಂಡಲ ಉಭಯ ಸದನಗಳ ಸಭಾ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಯಿತು" ಎಂದು ಹೇಳಿದರು.

"ಕಾವೇರಿ ಜಲನಿರ್ವಹಣಾ ಪ್ರಾಧಿಕಾರದ ಸಭೆಗಳಲ್ಲಿ ಮೇಕೆದಾಟು ಯೋಜನೆಯ ಕುರಿತು ವಿಸ್ತೃತ ಚರ್ಚೆಯಾಗಿದೆ. ಈ ಕುರಿತು ನಡಾವಳಿಗಳಲ್ಲಿ ದಾಖಲಿಸದೆ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೂಡಲೇ ಜಲಶಕ್ತಿ ಸಚಿವರು ಹಾಗೂ ಪ್ರಾಧಿಕಾರದವರೊಂದಿಗೆ ಚರ್ಚಿಸಿ, ನಡಾವಳಿಗಳಲ್ಲಿ ಚರ್ಚೆಯ ಅಂಶಗಳನ್ನು ದಾಖಲಿಸುವ ಕುರಿತು ಕ್ರಮ ವಹಿಸಲಾಗುವುದು. ಹಾಗೂ ಮುಂದಿನ ಸಭೆಯಲ್ಲಿ ಯೋಜನೆಗೆ ಅನುಮೋದನೆ ನೀಡಲು ಹಾಗೂ ಪರಿಸರ ಸಚಿವಾಲಯದ ತೀರುವಳಿ ಪಡೆಯಲು ಕ್ರಮ ವಹಿಸಲಾಗುವುದು" ಎಂದು ತಿಳಿಸಿದ್ದರು.

"ಮುಂದಿನ ವಾರ ಜಲಸಂಪನ್ಮೂಲ ಸಚಿವರು ದೆಹಲಿಗೆ ತೆರಳಲಿದ್ದು, ಅಧಿವೇಶನ ಮುಗಿದ ತಕ್ಷಣ ತಾವು ಸ್ವತಃ ದೆಹಲಿಗೆ ತೆರಳಿ ಕೇಂದ್ರ ಸಚಿವರೊಂದಿಗೆ ಈ ಬಗ್ಗೆ ಚರ್ಚಿಸುತ್ತೇನೆ. ಮತ್ತೆ ಅಗತ್ಯವಿದ್ದರೆ ಸರ್ವಪಕ್ಷಗಳ ನಿಯೋಗವನ್ನು‌ ನವದೆಹಲಿಗೆ ಕರೆದೊಯ್ಯಲಾಗುವುದು" ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದರು.

ತಮಿಳುನಾಡು ವಿರೋಧ; ಮೇಕೆದಾಟು ಯೋಜನೆಗೆ ತಮಿಳುನಾಡು, ಪುದುಚೇರಿ ರಾಜ್ಯಗಳು ಮೊದಲಿನಿಂದಲೂ ವಿರೋಧ ಮಾಡುತ್ತಿವೆ. ತಮಿಳುನಾಡು ಯೋಜನೆ ವಿರೋಧಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿಯೂ ಯೋಜನೆ ವಿರೋಧಿಸಿದೆ. ಪ್ರಧಾನಿ ನರೇಂದ್ರ ಮೋದಿಗೆ ಹಲವು ಬಾರಿ ಪತ್ರ ಬರೆದು ಕರ್ನಾಟಕ ಸರ್ಕಾರದ ಪ್ರಸ್ತಾವಿತ ಯೋಜನೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದೆ.

English summary
Tamil Nadu minister Durai Murugan brings resolution in assembly opposing Karnataka's decision to allot money for constructing a reservoir at Mekedatu. Tamil Nadu BJP also support state govt in Mekedatu issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X