ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು ಮಳೆ ತಂದ ಆಪತ್ತು: ಧರೆಗುರುಳಿದ ಮನೆಗಳು

|
Google Oneindia Kannada News

ಸೇಲಂ, ನವೆಂಬರ್ 23: ಭಾರೀ ಮಳೆಗೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ 4 ಮನೆಗಳು ಕುಸಿದಿದ್ದು, 4 ಮಂದಿ ಸಿಲುಕಿರುವ ಆತಂಕವಿದೆ. ಮಂಗಳವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಲ್‌ಪಟ್ಟಿಯಲ್ಲಿ ನಾಲ್ಕು ಮನೆಗಳು ಕುಸಿದಿವೆ. ಅವಶೇಷಗಳಡಿ ನಾಲ್ವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಹದಿಮೂರು ಜನರನ್ನು ರಕ್ಷಿಸಿ ಸೇಲಂನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಗ್ನಿಶಾಮಕ ದಳದವರು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ತಮಿಳುನಾಡಿನಲ್ಲಿ 23 ರಿಂದ 26ರವರೆಗೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆಯು ತಮಿಳುನಾಡಿನ ತಿರುನಲ್ವೇಲಿ, ತೂತುಕುಡಿ, ಮಧುರೈ ಮತ್ತು ರಾಮನಾಥಪುರಂ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಂಗಳವಾರ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ಈಶಾನ್ಯ ಮಾನ್ಸೂನ್‌ನ ಈ ಸಮಯದಲ್ಲಿ ತಮಿಳುನಾಡು ಶೇಕಡಾ 61 ರಷ್ಟು ಅಧಿಕ ಮಳೆಯನ್ನು ದಾಖಲಿಸಿದೆ. ಪುದುಚೇರಿಯಲ್ಲಿ ಅಭೂತಪೂರ್ವ ಮಳೆಯಾಗಿದ್ದು 7,000 ಹೆಕ್ಟೇರ್ ಭತ್ತದ ಗದ್ದೆಗಳು, ತೋಟಗಾರಿಕೆ ಬೆಳೆ ಮತ್ತು ಇತರ ಕೃಷಿ ಉತ್ಪನ್ನಗಳು ಹಾನಿಗೊಳಗಾಗಿವೆ. ಈ ಋತುವಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯು ದಕ್ಷಿಣ ಭಾರತದ ಕೆಲವು ಭಾಗಗಳನ್ನು ಆವರಿಸಿದೆ. ತಮಿಳುನಾಡು ಮತ್ತು ಪುದುಚೇರಿಯನ್ನು ಹೊರತುಪಡಿಸಿ ಆಂಧ್ರಪ್ರದೇಶ, ಕೇರಳ ಮತ್ತು ಕರ್ನಾಟಕದಲ್ಲೂ ಭಾರೀ ಮಳೆಯಾಗುತ್ತಿದೆ.

Tamil Nadus worst rainfall: Homes collapse

ತಮಿಳುನಾಡಿನಲ್ಲಿ ವಿಪರೀತ ಮಳೆ ಸುರಿಯಲು ಪ್ರಾರಂಭಿಸಿ ಅದಾಗಲೇ ವಾರದ ಮೇಲಾಯಿತು. ಅದರೊಂದಿಗೆ ಆಂಧ್ರಪ್ರದೇಶ, ಕೇರಳ, ಪುದುಚೇರಿಯಲ್ಲೂ ಒಂದೇ ಸಮ ಮಳೆಯಾಗುತ್ತಿದೆ. ಐಎಂಡಿ ದಕ್ಷಿಣ ತಮಿಳುನಾಡು, ಪುದುಕೊಟ್ಟೈ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಅಲ್ಲಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನು ಮುಂದಿನ ಐದು ದಿನಗಳ ಕಾಲ ತಮಿಳುನಾಡಿನ ಎರೋಡ್, ನಮಕ್ಕಲ್, ಕಲ್ಲಕುರಿಚಿ ಮತ್ತು ಪೆರಂಬಲೂರ್ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಅದರಲ್ಲೂ ಇಂದು ತಿರುನೇಲ್ವೇಲಿ, ತೂತುಕುಡಿ, ಮಧುರೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಬೀಳಲಿದೆ ಎಂದು ಐಎಂಡಿ ಊಹಿಸಿದೆ. ಇನ್ನು ಶುಕ್ರವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಕರಾವಳಿ ತೀರಗಳಲ್ಲಿ ಗುಡುಗಿನೊಂದಿಗೆ ಭಾರಿ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಮಿಳುನಾಡಿನಲ್ಲಿ ಮಳೆಯಿಂದ ಆಗುವ ಅನಾಹುತ, ಅವಘಡಗಳು ಹೆಚ್ಚುತ್ತಲೇ ಇವೆ. ಕಳೆದ 24ಗಂಟೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನು 300ಕ್ಕೂ ಹೆಚ್ಚು ಜಾನುವಾರಗಳು ಸಾವನ್ನಪ್ಪಿವೆ ಎಂದು ಸರ್ಕಾರ ಮಾಹಿತಿ ನೀಡಿದೆ.

ನವೆಂಬರ್​ 24ರವರೆಗೆ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ. ಹಾಗೇ, ಉಳಿದ ಕಡೆಗಳಲ್ಲೂ ಮೋಡ ಮುಸುಕಿದ ವಾತಾವರಣವೇ ಇರಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ತಮಿಳುನಾಡಿನಲ್ಲಿ ವಿಪರೀತ ಮಳೆ ಸುರಿಯಲು ಪ್ರಾರಂಭಿಸಿ ಅದಾಗಲೇ ವಾರದ ಮೇಲಾಯಿತು. ಅದರೊಂದಿಗೆ ಆಂಧ್ರಪ್ರದೇಶ, ಕೇರಳ, ಪುದುಚೇರಿಯಲ್ಲೂ ಒಂದೇ ಸಮ ಮಳೆಯಾಗುತ್ತಿದೆ. ಐಎಂಡಿ ದಕ್ಷಿಣ ತಮಿಳುನಾಡು, ಪುದುಕೊಟ್ಟೈ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಅಲ್ಲಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇನ್ನು ಶುಕ್ರವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್​ನ ಕರಾವಳಿ ತೀರಗಳಲ್ಲಿ ಗುಡುಗಿನೊಂದಿಗೆ ಭಾರಿ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Recommended Video

ಡ್ಯಾಮ್ ಗೇಟ್ ಓಪನ್ ಆದ ತಕ್ಷಣ ಕೊಚ್ಚಿಕೊಂಡು ಹೋದ ಕಾರ್ಮಿಕರ ವಿಡಿಯೋ | Oneindia Kannada

English summary
As a result of heavy rainfall on Tuesday morning, four houses collapsed in Karungalpatti in Tamil Nadu's Salem district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X