ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking :ತಮಿಳುನಾಡಿನ ವಿದ್ಯಾರ್ಥಿನಿ ಸಾವು, ಆಸ್ಪತ್ರೆ ಹೊರಗೆ ಭಾರಿ ಭದ್ರತೆ

|
Google Oneindia Kannada News

ಚೆನ್ನೈ, ಜುಲೈ 26: ತಮಿಳುನಾಡಿನ ಇನ್ನೊಬ್ಬ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದು ಮತ್ತೆ ಭಾರಿ ಪ್ರತಿಭಟನೆ ನಡೆಯುವ ಆತಂಕಗಳಿವೆ. ಈ ಹಿನ್ನೆಲೆ ಶವಪರೀಕ್ಷೆ ನಡೆಯುತ್ತಿರವ ಆಸ್ಪತ್ರೆ ಹೊರಗೆ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

ತಮಿಳುನಾಡಿನ ತಿರುವಳ್ಳೂರಿನಲ್ಲಿ ಮತ್ತೊಬ್ಬ 12ನೇ ತರಗತಿಯ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ಸೋಮವಾರ (ಜುಲೈ 25) ತನ್ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿನಿಯ ಕೊಠಡಿಯಲ್ಲಿಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದರು.

Breaking: ತಮಿಳುನಾಡಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಶವವಾಗಿ ಪತ್ತೆBreaking: ತಮಿಳುನಾಡಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಶವವಾಗಿ ಪತ್ತೆ

ಕಳೆದೆರಡು ವಾರಗಳಲ್ಲಿ ದಾಖಲಾದ ಎರಡನೇ ಸಾವು ಇದಾಗಿದ್ದು, ಈ ಹಿನ್ನೆಲೆ ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿರುವ ಆಸ್ಪತ್ರೆಯ ಹೊರಗೆ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Tamil nadu student death case: Police protection increased near in hospital is taking place

ಶವಪರೀಕ್ಷೆ ವೇಳೆ CB-CID ಅಧಿಕಾರಿಗಳು ಮತ್ತು ಮೃತ ಬಾಲಕಿಯ ತಾಯಿ ಮತ್ತು ಸಹೋದರನ ಸಮ್ಮುಖದಲ್ಲಿ ವೀಡಿಯೊ ರೆಕಾರ್ಡಿಂಗ್ ಮಾಡಲಾಗುತ್ತಿದೆ. ಬಾಲಕಿಯ ಪರ ವಕೀಲ ಅರುಣ್, ತಿರುಟ್ಟಣಿ ಶಾಸಕ ಎಸ್ ಚಂದ್ರನ್ ಮತ್ತು ಡಿಎಂಕೆಯ ತಿರುವಳ್ಳೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಕೂಡ ಈ ವೇಳೆ ಶವಗಾರದಲ್ಲಿ ಉಪಸ್ಥಿತರಿದ್ದಾರೆ.

ವಿದ್ಯಾರ್ಥಿನಿ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ಪ್ರತಿಭಟನೆ ನಡೆಸಿದ್ದರು. ಅದಕ್ಕೂ ಮೊದಲೆ ಪೊಲೀಸರ ಪ್ರತಿಭಟನೆ ನಡೆಯುವ ಭೀತಿಯ ನಡುವೆ ಶಾಲೆಗೆ ಭದ್ರತೆಯನ್ನು ಒದಗಿಸಿದ್ದರು. ವಿದ್ಯಾರ್ಥಿನಿ ಸರಳಾ ತಮಿಳುನಾಡಿನ ತಿರುಟ್ಟಣಿಯವರಾಗಿದ್ದು, ಯಾವುದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ಆಕೆಯ ಗ್ರಾಮದಲ್ಲಿಯೂ ಭದ್ರತೆ ಕೈಗೊಳ್ಳಲಾಗಿತ್ತು.

Tamil nadu student death case: Police protection increased near in hospital is taking place

ಜುಲೈ 13 ರಂದು, ಕಲ್ಲಕುರಿಚಿ ಜಿಲ್ಲೆಯ ಶಾಲೆಯೊಂದರ 12 ನೇ ತರಗತಿಯ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿತ್ತು. ಸಾವು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರಿಗೆ ಗಾಯಗಳಾಗಿದ್ದವು. ಪ್ರತಿಭಟನಾಕಾರರು ಕನಿಷ್ಠ 15 ಬಸ್‌ಗಳಿಗೆ ಬೆಂಕಿ ಹಚ್ಚಿದ್ದರು.

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

English summary
Tamil nadu class 12 student death case: Police personnel deployed outside the hospital where the autopsy is taking place, student found dead inside the hostel in Tiruvallur. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X