• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಮಿಳುನಾಡು ಅನ್ ಲಾಕ್ 4.0: ಹೋಟೆಲ್, ರೆಸಾರ್ಟ್ ಪುನಾರಂಭಕ್ಕೆ ಅನುಮತಿ

|

ಚೆನ್ನೈ, ಆಗಸ್ಟ್.30: ಕೊರೊನಾವೈರಸ್ ಸೋಂಕು ಹರಡುವಿಕೆ ಹಿನ್ನೆಲೆ ತಮಿಳುನಾಡಿನಲ್ಲಿ ಸಪ್ಟೆಂಬರ್.30ರವರೆಗೂ ಲಾಕ್ ಡೌನ್ ಮುಂದುವರಿಸಲು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸರ್ಕಾರವು ತೀರ್ಮಾನಿಸಿದೆ. ಆದರೆ ರಾಜ್ಯದಲ್ಲಿ ಕೆಲವು ವಲಯಗಳಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ.

ಭಾನುವಾರ ಸುದ್ಧಿಗೋಷ್ಠಿ ನಡೆಸಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ತಮಿಳುನಾಡಿನಲ್ಲಿ ಅನ್ ಲೌಕ್ 4.0 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದರು. ಸಪ್ಟೆಂಬರ್ ತಿಂಗಳಿನಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅನ್‌ ಲಾಕ್ ಮಾರ್ಗಸೂಚಿ 4.0; ಇನ್ನು ಮುಂದೆ ಲಾಕ್ ಡೌನ್ ಇಲ್ಲ

ರಾಜ್ಯದಲ್ಲಿ ಹೋಟೆಲ್, ರೆಸಾರ್ಟ್ ಗಳ ಪುನಾರಂಭಕ್ಕೆ ಸರ್ಕಾರವು ಹಸಿರು ನಿಶಾನೆ ತೋರಿಸಿದೆ. ಅಂತರ್-ಜಿಲ್ಲಾ ಪ್ರಯಾಣಕ್ಕೆ ಮೊದಲಿದ್ದ ಇ-ಪಾಸ್ ವ್ಯವಸ್ಥೆಯನ್ನು ತೆಗೆದು ಹಾಕಲಾಗಿದೆ. ಮಾಲ್, ಕ್ಲಬ್, ಹೋಟೆಲ್ ಮತ್ತು ಪಾರ್ಕ್ ಗಳನ್ನು ತೆರೆಯುವುದಕ್ಕೆ ಅನುಮತಿ ನೀಡಲಾಗಿದೆ. ಆದರೆ ಸಿನಿಮಾ ಥಿಯೇಟರ್ ಗಳನ್ನು ಸದ್ಯಕ್ಕೆ ತೆರೆಯಲು ಯಾವುದೇ ಅನುಮತಿ ನೀಡಿಲ್ಲ.

ತಮಿಳುನಾಡಿನಲ್ಲಿ ಯಾವುದಕ್ಕೆಲ್ಲ ನಿರ್ಬಂಧ:

ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಮೆಟ್ರೋ ಸೇವೆಗಳು ಸಪ್ಟೆಂಬರ್.07ರಿಂದ ಪುನಾರಂಭಗೊಳ್ಳಲಿವೆ. ಆದರೆ ರಾಜ್ಯದ ಅನ್ ಲಾಕ್ 4.0 ಮಾರ್ಗಸೂಚಿಯಲ್ಲಿ ಕೆಲವು ಚಟುವಟಿಕೆಗಳಿಗೆ ನಿರ್ಬಂಧವನ್ನು ಮುಂದುವರಿಸಲಾಗಿದೆ. ಧಾರ್ಮಿಕ ಕಾರ್ಯಕ್ರಮ, ಸಮುದಾಯ ಕಾರ್ಯಕ್ರಮ, ರಾಜಕೀಯ ಕಾರ್ಯಕ್ರಮ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸದಂತೆ ನಿರ್ಬಂಧವನ್ನು ವಿಧಿಸಲಾಗಿದೆ.

ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲೇ 6495 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 4.22 ಲಕ್ಷದ ಗಡಿ ದಾಟಿದ್ದು, ಮಹಾಮಾರಿಗೆ ಇದುವರೆಗೂ 7231 ಜನರು ಪ್ರಾಣ ಬಿಟ್ಟಿದ್ದಾರೆ.

English summary
Tamil Nadu Unlock 4.0 Guideline: Govt Allows Hotels, Resorts to Open. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X