Breaking; ತಾಂಜವೂರು ರಥೋತ್ಸವ ದುರಂತ, ತನಿಖೆಗೆ ಸಮಿತಿ ರಚನೆ

ಚೆನ್ನೈ, ಏಪ್ರಿಲ್ 27; ತಮಿಳುನಾಡು ಸರ್ಕಾರ ತಂಜಾವೂರು ಜಿಲ್ಲೆಯಲ್ಲಿ ರಥೋತ್ಸವದ ವೇಳೆ ನಡೆದ ದುರಂತದ ಬಗ್ಗೆ ತನಿಖೆ ನಡೆಸಲು ಏಕ ಸದಸ್ಯ ಸಮಿತಿಯನ್ನು ರಚನೆ ಮಾಡಿದೆ. ರಥಕ್ಕೆ ವಿದ್ಯುತ್ ತಂತಿ ತಗುಲಿ 11 ಜನರು ಮೃತಪಟ್ಟಿದ್ದರು.

ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ಕಳಿಮೆಡುವಿನ ಅಪ್ಪಾರ್‌ ಮಡಂ ದೇವಸ್ಥಾನದ ರಥೋತ್ಸವ ವೇಳೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಮಕ್ಕಳು ಸೇರಿ 11 ಜನರು ಮೃತಪಟ್ಟಿದ್ದಾರೆ.

ತಮಿಳುನಾಡು ಸರ್ಕಾರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ 5 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ಮೃತಪಟ್ಟವರ ಕುಟುಂಬ ಸದಸ್ಯರಿಗೆ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.

Thanjavur Electrocution Incident Govt Set Up Committee For Probe

ಬುಧವಾರ ಮಧ್ಯಾಹ್ನ ತಮಿಳುನಾಡು ಸರ್ಕಾರ ಘಟನೆ ಬಗ್ಗೆ ತನಿಖೆ ನಡೆಸಲು ಏಕ ಸದಸ್ಯ ಸಮಿತಿ ರಚನೆ ಮಾಡಲಾಗಿದೆ. ರಾಜ್ಯ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಕಲಾಪ ಆರಂಭಕ್ಕೂ ಮುನ್ನ ಘಟನೆಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಯಿತು.

ಗ್ರಾಮಸ್ಥರು ಅನುಮತಿ ಪಡೆಯದೇ ರಥೋತ್ಸವ ನಡೆಸಿದ್ದಾರೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ಘಟನೆ ಕುರಿತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದೇವಾಲಯದ ರಥ ತಿರುವು ಪಡೆದುಕೊಳ್ಳುವಾಗ ಸ್ವಲ್ಪ ಅಡಚಣೆ ಉಂಟಾಗಿತ್ತು. ಬಳಿಕ ರಸ್ತೆಯ ಪಕ್ಕದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡಿತು. ಈ ಸಂದರ್ಭದಲ್ಲಿ ರಥದ ಅಕ್ಕ-ಪಕ್ಕದಲ್ಲಿ ನಿಂತಿದ್ದ 11 ಜನರು ಮೃತಪಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+