ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ

|
Google Oneindia Kannada News

ನವದೆಹಲಿ, ಫೆಬ್ರವರಿ 14: ತಂಜಾವೂರು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ನಿರ್ದೇಶಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಡಿಜಿಪಿ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ.

ಆದರೆ, ಹೈಕೋರ್ಟ್‌ ಆದೇಶದಂತೆ ನಡೆಯುತ್ತಿರುವ ತನಿಖೆಗೆ ತಡೆ ನೀಡಲು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ಬೇಲಾ ತ್ರಿವೇದಿ ಅವರಿದ್ದ ಪೀಠ ನಿರಾಕರಿಸಿತು.

ನಿಂದನೆ, ಬಲವಂತದ ಮತಾಂತರಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸ್ಟೆಲ್ ವಾರ್ಡನ್ ಬಂಧನನಿಂದನೆ, ಬಲವಂತದ ಮತಾಂತರಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸ್ಟೆಲ್ ವಾರ್ಡನ್ ಬಂಧನ

ವಿದ್ಯಾರ್ಥಿನಿ ಸಾವಿನ ಹಿಂದೆ ಮತಾಂತರ ಕೈವಾಡ ಇದೆ ಎಂಬ ಆರೋಪ ತಮಿಳುನಾಡಿನಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಬಿಜೆಪಿ ಮತ್ತು ಆಡಳಿತಾರೂಢ ಡಿಎಂಕೆ ಪರಸ್ಪರ ವಾಗ್ವಾದ ನಡೆಸಿದ್ದವು. ಸುಪ್ರೀಂ ಕೋರ್ಟ್‌ ಮುಂದೆ ತಮಿಳುನಾಡು ಡಿಜಿಪಿ ಸಲ್ಲಿಸಿದ್ದ ಅರ್ಜಿಯಲ್ಲಿ ಸಿಬಿಐಗೆ ಪ್ರಕರಣ ಹಸ್ತಾಂತರಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸುವುದರ ಜೊತೆಗೆ, ವಿಚಾರಣೆ ವೇಳೆ ತಮಿಳುನಾಡು ಪೊಲೀಸರ ತನಿಖೆಯ ಬಗ್ಗೆ ಹೈಕೋರ್ಟ್‌ ವ್ಯಕ್ತಪಡಿಸಿದದ ಅಭಿಪ್ರಾಯವನ್ನು ಕೈಬಿಡುವಂತೆ ಕೋರಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್‌ ನೀಡಲಾಗಿದೆ.

Thanjavur Suicide Case: SC Allows CBI To Continue Probe Death Of 17-Year-Old Girl

ತಮಿಳುನಾಡಿನಲ್ಲಿ 17 ವರ್ಷ ವಯಸ್ಸಿನ ಶಾಲಾ ಬಾಲಕಿಯ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆಯ ವಿರುದ್ಧ ಸಲ್ಲಿಸಿದ ಪೊಲೀಸರ ಮನವಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಆದರೆ ಈ ವಿದ್ಯಾರ್ಥಿನಿಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಲು ಬಲವಂತ ಮಾಡಲಾಗಿತ್ತು ಎಂಬ ಆರೋಪದ ಪ್ರಕರಣದಲ್ಲಿ ಸಿಬಿಐ ತನಿಖೆ ಮುಂದುವರೆಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಹರಿಹರೆಯದ ಬಾಲಕಿ ಜನವರಿ 9ರಂದು ತಾಂಜಾವೂರಿನ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಮತ್ತು 10 ದಿನಗಳ ಬಳಿಕ ಮೃತಪಟ್ಟಳು. ತನ್ನ ಹಾಸ್ಟೆಲ್ ವಾರ್ಡನ್ ಹಾಸ್ಟೆಲ್ ಶುಚಿಗೊಳಿಸಲು ಮತ್ತು ನಿರ್ವಹಣಾ ಕೆಲಸಗಳನ್ನು ಮಾಡಲು ಒತ್ತಾಯಿಸುತ್ತಿದ್ದುದಾಗಿ ಈ ಬಾಲಕಿ ವಿಡಿಯೋ ಒಂದರಲ್ಲಿ ಆರೋಪಿಸಿದ್ದಳು.

ಹದಿಹರಿಯದವರ ಕಾಯ್ದೆಯಡಿ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಹಾಸ್ಟೆಲ್ ವಾರ್ಡನ್‍ರನ್ನು ಬಂಧಿಸಲಾಗಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂ.ತ್ರಿವೇದಿ ಅವರನ್ನು ಒಳಗೊಂಡ ನ್ಯಾಯಪೀಠವು ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ ಮನವಿಯ ಮೇರೆಗೆ ನೋಟಿಸ್ ಜಾರಿ ಮಾಡಿತು.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿ, ದೌರ್ಜನ್ಯ ನಡೆಸಿದ್ದರಿಂದ ತಮಿಳುನಾಡಿನ ತಂಜಾವೂರಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಈ ಘಟನೆ ಜನವರಿ 19ರಂದು ನಡೆದಿತ್ತು. ಆತ್ಮಹತ್ಯೆಗೂ ಮುನ್ನ ಮಾಡಿದ್ದ ವಿಡಿಯೋದಲ್ಲಿ ಹಾಸ್ಟೆಲ್‌ನ ವಾರ್ಡನ್ ತನ್ನಿಂದ ಹಾಸ್ಟೆಲ್‌ನ ಎಲ್ಲಾ ಕೊಠಡಿಗಳನ್ನು ಸ್ವಚ್ಛಗೊಳಿಸುತ್ತಿದ್ದರು.

ಅಲ್ಲದೆ, ನಿರಂತರವಾಗಿ ನಿಂದಿಸುತ್ತಿದ್ದರು ಎಂದು ಯುವತಿ ಆರೋಪಿಸಿದ್ದಳು. ಅಲ್ಲದೇ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದಳು. ಮತಾಂತರ ಕಿರುಕುಳ, ನಿಂದನೆಯಂತಹ ಘಟನೆಗಳಿಂದ ವಿಚಲಿತಳಾದ ವಿದ್ಯಾರ್ಥಿನಿ ಲಾವಣ್ಯ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಳು.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಕೊನೆಯುಸಿರೆಳೆಯುವ ಮುನ್ನ ತನಗೆ ಆದ ದೌರ್ಜನ್ಯದ ಕುರಿತು ವೈದ್ಯರು ಹಾಗೂ ಪೊಲೀಸರ ಬಳಿ ಹೇಳಿಕೊಂಡಿದ್ದಳು.

ಆ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಹಾಸ್ಟೆಲ್ ವಾರ್ಡನ್ ಸಕಾಯಮರಿ ಎಂಬುವವರನ್ನು ಬಂಧಿಸಲಾಗಿತ್ತು. ಇನ್ನು ಯುವತಿ ಸಾವಿನ ಬಳಿಕ ಯುವತಿಗೆ ನ್ಯಾಯಕ್ಕಾಗಿ ಭಾರೀ ಪ್ರತಿಭಟನೆಗಳು ನಡೆದಿದ್ದವು.

English summary
The Supreme Court on Monday did not interfere in a Madras High Court order transferring the investigation into the death by suicide of a 17-year-old student at Thanjavur to the Central Bureau of Investigation (CBI).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X