Get Updates
Get notified of breaking news, exclusive insights, and must-see stories!

ತಮಿಳುನಾಡು ಚುನಾವಣೆ: ಕೋವಿಲ್ಪಟ್ಟಿ ಕ್ಷೇತ್ರದಲ್ಲಿ ಟಿಟಿವಿ ದಿನಕರನ್ ನಾಮಪತ್ರ

ಚೆನ್ನೈ, ಮಾರ್ಚ್ 16: ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ಅಮ್ಮ ಮಕ್ಕಳ ಮುನ್ನೇತ್ರ ಕಳಗಂ(AMMK) ಪಕ್ಷದ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಕೋವಿಲ್ಪಟ್ಟಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ತಮಿಳುನಾಡು ಚುನಾವಣೆ ಹಿನ್ನೆಲೆ ಎಐಎಡಿಎಂಕೆ ಜೊತೆಗಿನ ಸೀಟು ಹಂಚಿಕೆಯಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಈ ಹಿನ್ನೆಲೆ ನಟ ಹಾಗೂ ರಾಜಕಾರಣಿ ವಿಜಯ್ ಕಾಂತ್ ನೇತೃತ್ವದ ಡಿಎಂಡಿಕೆ ಪಕ್ಷವು ಮೈತ್ರಿ ಮುರಿದುಕೊಂಡು ಎಎಂಎಂಕೆ ಜೊತೆಗೆ ಕೈ ಜೋಡಿಸಿತ್ತು.

Breaking: ಕೊಯಮತ್ತೂರು ಕ್ಷೇತ್ರದಿಂದ ಕಮಲ್ ಹಾಸನ್ ನಾಮಪತ್ರ
ಅಮ್ಮ ಮಕ್ಕಳ ಮುನ್ನೇತ್ರ ಕಳಗಂ ಮತ್ತು ಡಿಎಂಡಿಕೆ ನಡುವಿನ ಹೊಸ ಮೈತ್ರಿ ಅಡಿಯಲ್ಲಿ ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳ ಪೈಕಿ 60 ಕ್ಷೇತ್ರಗಳಲ್ಲಿ ಡಿಎಂಡಿಕೆ ಸ್ಪರ್ಧಿಸಲಿದೆ. ಕಳೆದ ಮಾರ್ಚ್ 9ರಂದು ನಡೆದ ಸೀಟು ಹಂಚಿಕೆ ಪ್ರಕ್ರಿಯೆ ವೇಳೆ ಬಿಜೆಪಿ-ಎಐಎಡಿಎಂಕೆ ಪಕ್ಷಗಳು ಡಿಎಂಡಿಕೆ ಪಕ್ಷಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಕ್ಷೇತ್ರಗಳನ್ನು ಹಂಚಿಕೆ ಮಾಡಲಿಲ್ಲ. ಹೀಗಾಗಿ ಆ ಮೈತ್ರಿಯನ್ನು ಕಡೆದುಕೊಳ್ಳಲಾಗಿತ್ತು ಎಂದು ತಿಳಿದು ಬಂದಿದೆ.

TN Election: AMMK General Secretary TTV Dhinakaran Files Nomination From Kovilpatti Constituency

ತಮಿಳುನಾಡಿನಲ್ಲಿ ಮೈತ್ರಿ ರಾಜಕಾರಣ:
ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿನ ಪ್ರಾಬಲ್ಯ ಹೊಂದಿವೆ. ರಾಷ್ಟ್ರೀಯ ಪಕ್ಷ ಎನಿಸಿರುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಅಖಾಡಕ್ಕೆ ಇಳಿದಿವೆ. ಎಐಎಡಿಎಂಕೆ-ಬಿಜೆಪಿ ಹಾಗೂ ಡಿಎಂಕೆ-ಕಾಂಗ್ರೆಸ್ ಮೈತ್ರಿಯ ಮೂಲಕ ಚುನಾವಣೆ ಎದುರಿಸಲು ಅಣಿಯಾಗಿವೆ. ಇದರ ಮಧ್ಯೆ ಎಎಂಎಂಕೆ ಮತ್ತು ಡಿಎಂಡಿಕೆ ಪಕ್ಷವು ಮೈತ್ರಿಯೊಂದಿಗೆ ಚುನಾವಣೆ ಎದುರಿಸುವುದಾಗಿ ತಿಳಿಸಿವೆ.
ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಏಪ್ರಿಲ್.06ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ.02ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+