ತಮಿಳುನಾಡಿನಲ್ಲಿ 20 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಚೆನ್ನೈ, ಮೇ 29: ತಮಿಳುನಾಡಿನಲ್ಲಿ ಕೊರೊನಾ ವೈರಸ್ ಪ್ರಕರಣಗಳು 20 ಸಾವಿರ ಗಡಿ ದಾಟಿದೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಬಿಟ್ಟರೆ ತಮಿಳುನಾಡು ಎರಡನೇ ಸ್ಥಾನದಲ್ಲಿದೆ.

ತಮಿಳುನಾಡಿನಲ್ಲಿ ಹೊಸದಾಗಿ ಇಂದು 874 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 20,246ಕ್ಕೆ ಏರಿಕೆಯಾಗಿದೆ. ಇಂದು 9 ಜನರು ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು 157 ಜನರು ಸಾವನ್ನಪ್ಪಿದ್ದಾರೆ.

ತಮಿಳುನಾಡಿನಲ್ಲಿ ಪ್ರಸ್ತುತ 8776 ಕೇಸ್‌ಗಳು ಸಕ್ರಿಯವಾಗಿದೆ. 11313 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Total Coronavirus Cases Crossed 20 thousand in Tamilnadu

ಈ ಕಡೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 62,228ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 2,682 ಜನರಿಗೆ ಸೋಂಕು ದೃಢವಾಗಿದೆ. 116 ಜನರು ಮೃತಪಟ್ಟಿದ್ದಾರೆ. ಇದುವರೆಗೂ ಮಹಾರಾಷ್ಟ್ರದಲ್ಲಿ ಒಟ್ಟು 2098 ಜನರು ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,65,799 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬೆಳಿಗ್ಗೆ ಮಾಹಿತಿ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+