ಆ.10ರಂದು ಹಣ್ಣು, ಹೂವು, ತರಕಾರಿ ಮಾರುಕಟ್ಟೆ ಬಂದ್
ಚೆನ್ನೈ, ಆಗಸ್ಟ್ 05 : ತಮಿಳುನಾಡಿನ ವ್ಯಾಪಾರಿಗಳು ಆಗಸ್ಟ್ 10ರಂದು ರಾಜ್ಯವ್ಯಾಪ್ತಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 2,68,285.
Recommended Video
ರಾಜ್ಯದ ತರಕಾರಿ, ಹಣ್ಣು ಮತ್ತು ಹೂವು ವ್ಯಾಪಾರಿಗಳು ರಾಜ್ಯವ್ಯಾಪ್ತಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಚೆನ್ನೈನ ಕೊಯಂಬೀಡು ಸೇರಿದಂತೆ ವಿವಿಧ ಮಾರುಕಟ್ಟೆಗಳನ್ನು ತೆರೆಯಬೇಕು ಎಂದು ಪ್ರತಿಭಟನೆ ನಡೆಸಲಾಗುತ್ತದೆ.
ಕೋವಿಡ್ 19 ಪರಿಸ್ಥಿತಿಯ ಹಿನ್ನಲೆಯಲ್ಲಿ ಮಾರುಕಟ್ಟೆಗಳನ್ನು ಬಂದ್ ಮಾಡಲಾಗಿದೆ. 'ಕೊಯಂಬೀಡು ಸೇರಿದಂತೆ ಎಲ್ಲಾ ಮಾರುಕಟ್ಟೆಗಳನ್ನು ತಕ್ಷಣ ತೆರೆಯಬೇಕು ಎಂದು ಸರ್ಕಾರಕ್ಕೆ ಪದೇ ಪದೇ ಮನವಿ ಮಾಡಲಾಗುತ್ತಿದೆ' ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ವ್ಯಾಪಾರಿಗಳು ಆಗಸ್ಟ್ 10ರಂದು ರಾಜ್ಯದ ಮಾರುಕಟ್ಟೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ. ಆದರೆ, ಎಲ್ಲೂ ವ್ಯಾಪಾರಿಗಳು ಗುಂಪು ಸೇರುವುದಿಲ್ಲ.
ಒಂದು ವೇಳೆ ಸರ್ಕಾರ ತನ್ನ ತೀರ್ಮಾನವನ್ನು ಪ್ರಕಟಿಸದಿದ್ದರೆ ಪ್ರತಿಭಟನೆಯನ್ನು ಮುಂದುವರೆಸುವುದು ಅನಿವಾರ್ಯವಾಗಲಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ. ಚೆನ್ನೈನಲ್ಲಿ ಸುಮಾರು 20 ಸಾವಿರ ಅಂಗಡಿಗಳನ್ನು ಆಗಸ್ಟ್ 10ರಂದು ಮುಚ್ಚಲಾಗುತ್ತದೆ ಎಂದು ತಿಳಿದುಬಂದಿದೆ.
ಚೆನ್ನೈ ನಗರದ ಅತಿ ದೊಡ್ಡ ಮಾರುಕಟ್ಟೆ ಕೊಯಂಬೀಡು. ಮೇ ತಿಂಗಳಿನಲ್ಲಿ ಕೋವಿಡ್ ಪರಿಸ್ಥಿತಿ ಕಾರಣ ಮಾರುಕಟ್ಟೆಯನ್ನು ಮುಚ್ಚಲಾಗಿದೆ. ಚೆನ್ನೈನಲ್ಲಿ ಪ್ರಸ್ತುತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1,04,027.












Click it and Unblock the Notifications