• search
 • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಗೀತ ದಿಗ್ಗಜ ಎಸ್‌ಪಿ ಬಾಲಸುಬ್ರಹ್ಮಣ್ಯಂ ವಿಧಿವಶ

|
Google Oneindia Kannada News

ಚೆನ್ನೈ, ಸೆ. 25: ಕಳೆದ ಒಂದೂವರೆ ತಿಂಗಳಿಂದ ಜೀವನ್ಮರಣ ಹೋರಾಟ ನಡೆಸಿದ್ದ ಸಂಗೀತ ದಿಗ್ಗಜ ಶ್ರೀಪತಿ ಪಂಡಿತರಾಧ್ಯಲು ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಮಧ್ಯಾಹ್ನ 1.04ರಂದು ಕೊನೆಯುಸಿರೆಳೆದಿದ್ದಾರೆ.

ಕೊರೊನಾ ವೈರಸ್‌ಗೆ ತುತ್ತಾಗಿದ್ದ ಎಸ್‌ಪಿಬಿ ಕಳೆದ ಕೆಲವು ದಿನಗಳ ಹಿಂದೆ ಕೊರೊನಾದಿಂದ ಗುಣಮುಖರಾಗಿದ್ದರು. ಆದ್ರೆ, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿರಲಿಲ್ಲ. ಕಳೆದ ಎರಡು ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ವೆಂಟಿಲೇಟರ್ ಮೂಲಕ ಉಸಿರಾಟ ನಡೆಸಿದ್ದರು.

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದ ವೈದ್ಯರು ಅಮೆರಿಕದ ತಜ್ಞರ ನೆರವು ಕೂಡಾ ಪಡೆದುಕೊಂಡಿದ್ದರು. ಆದರೆ, ವೈದ್ಯರು ಹಾಗೂ ಕೋಟ್ಯಾಂತರ ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ.

ಎಸ್‌.ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನ ಕುರಿತು ಚೆನ್ನೈ ಹೆಲ್ತ್ ಕೇರ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಲಿದೆ. ಮಧ್ಯಾಹ್ನ 1.04ರಂದು ಕೊನೆಯುಸಿರೆಳೆದಿದ್ದಾರೆ ಎಂದು ಪುತ್ರ ಎಸ್ ಪಿ ಚರಣ್ ಎಂಜಿಎಂ ಆಸ್ಪತ್ರೆ ಹೊರಗೆ ಬಂದು ಪ್ರಕಟಿಸಿದ್ದಾರೆ.

ಸಂಗೀತ ದಿಗ್ಗಜ ಎಸ್ಪಿ ಬಾಲಸುಬ್ರಹ್ಮಣ್ಯಂ ಅಪರೂಪದ ಚಿತ್ರಗಳು

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆ ಸೇರಿದಂತೆ ಸುಮಾರು 16 ಭಾಷೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಎಸ್‌ಪಿಬಿ ಹಾಡಿದ್ದರು. ಅತಿ ಹೆಚ್ಚು ಹಾಡಿಗೆ ಧ್ವನಿಯಾಗಿದ್ದ ಎಸ್‌ಪಿಬಿ ಅವರು ಗಿನ್ನಿಸ್ ದಾಖಲೆಗೆ ಸಹ ಪಾತ್ರರಾಗಿದ್ದಾರೆ.

Recommended Video

   SPB Hospital Bill, ನಿಜಕ್ಕೂ SPB ಆಸ್ಪತ್ರೆ ಬಿಲ್ ಎಷ್ಟು | Filmibeat Kannada

   ತಮ್ಮ ಗಾಯನಕ್ಕಾಗಿ ಆರು ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. 25 ಬಾರಿ ಆಂಧ್ರ ಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯ ಸರ್ಕಾರಗಳು ನೀಡುವ ರಾಜ್ಯ ಪ್ರಶಸ್ತಿಗಳು ಸಹ ಪಡೆದಿದ್ದಾರೆ. ಚಿತ್ರರಂಗದಲ್ಲಿ ಎಸ್‌ಪಿಬಿ ಅವರ ಕೊಡುಗೆಗೆ ಗೌರವಿಸಿ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಸಹ ಲಭಿಸಿದೆ.

   English summary
   Veteran Singer SP Balasubrahmanyam dies at MGM Hospital, Chennai today (Sept 25). He was 74.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X