ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೀಘ್ರದಲ್ಲೇ ನಿಮ್ಮನ್ನೆಲ್ಲ ಭೇಟಿಯಾಗುತ್ತೇನೆ, ಸಕ್ರಿಯ ರಾಜಕೀಯಕ್ಕೆ ಬರುತ್ತೇನೆ: ಶಶಿಕಲಾ

|
Google Oneindia Kannada News

ಚೆನ್ನೈ, ಫೆಬ್ರವರಿ 8: ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ನಾಲ್ಕು ವರ್ಷದ ಬಳಿಕ ಮತ್ತೆ ತಮಿಳುನಾಡಿಗೆ ಮರಳಿರುವುದು ಅಲ್ಲಿನ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಜೈಲು ಶಿಕ್ಷೆ ಅನುಭವಿಸಿದ ಬಳಿಕ ತಮಿಳುನಾಡಿಗೆ ವಾಪಸಾಗಿರುವ ಶಶಿಕಲಾ, ಸಕ್ರಿಯ ರಾಜಕಾರಣಕ್ಕೆ ಮರಳುವುದಾಗಿ ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕಲಾ, 'ನಿಮ್ಮನ್ನು ಶೀಘ್ರವೇ ಭೇಟಿಯಾಗಲಿದ್ದೇನೆ; ಪೂರ್ಣ ಪ್ರಮಾಣದ ರಾಜಕೀಯಕ್ಕೆ ಪ್ರವೇಶಿಸಲಿದ್ದೇನೆ' ಎಂದು ತಿಳಿಸಿದರು.

ತಮಿಳುನಾಡಿಗೆ ಶಶಿಕಲಾ ನಟರಾಜನ್ ಗ್ರ್ಯಾಂಡ್ ಎಂಟ್ರಿ: ಮತ್ತೆ ಘರ್ಜಿಸುವುದೇ ಮನ್ನಾರ್ ಗುಡಿ ಗ್ಯಾಂಗ್ ತಮಿಳುನಾಡಿಗೆ ಶಶಿಕಲಾ ನಟರಾಜನ್ ಗ್ರ್ಯಾಂಡ್ ಎಂಟ್ರಿ: ಮತ್ತೆ ಘರ್ಜಿಸುವುದೇ ಮನ್ನಾರ್ ಗುಡಿ ಗ್ಯಾಂಗ್

ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಶಶಿಕಲಾ ಅವರಿಗೆ ತಮಿಳುನಾಡಿನಲ್ಲಿ ಬೆಂಬಲಿಗರಿಂದ ಭವ್ಯ ಸ್ವಾಗತ ದೊರಕಿತು. ಎಐಎಡಿಎಂಕೆಯಿಂದ ಉಚ್ಚಾಟನೆಯಾಗಿದ್ದರೂ ತಮ್ಮ ಗೆಳತಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪಕ್ಷದೊಂದಿಗಿನ ನಂಟನ್ನು ಮುಂದುವರಿಸುವುದಾಗಿ ಪುನರುಚ್ಚರಿಸಿದರು.

VK Sasikala Says I Will Never Surrender To Oppression, Enter Full Fledged Politics

'ಎಐಎಡಿಎಂಕೆ ಅನೇಕ ಸಂಕಷ್ಟಗಳನ್ನು ಎದುರಿಸಿದೆ. ಫೀನಿಕ್ಸ್ ರೀತಿ ಎದ್ದುಬಂದಿದೆ. ಎಲ್ಲರೂ ಜತೆಗೂಡಿ ಕೆಲಸ ಮಾಡಿ ನಮ್ಮ ಸಾಮಾನ್ಯ ವೈರಿಯನ್ನು ಬಗ್ಗುಬಡಿಯುವುದನ್ನು ಬಯಸುತ್ತೇನೆ' ಎಂದರು.

"ಎಐಎಡಿಎಂಕೆ ಮೇಲೆ ಶಶಿಕಲಾಗೆ ಹಕ್ಕಿದೆ; ಅವರು ಧ್ವಜ ಬಳಸಿದರೆ ತಪ್ಪೇನು"

'ನಾನು ಎಂದಿಗೂ ದಬ್ಬಾಳಿಕೆಗೆ ಶರಣಾಗುವುದಿಲ್ಲ. ಎಐಎಡಿಎಂಕೆಯ ಬಾವುಟ ಬಳಸಿದ್ದಕ್ಕಾಗಿ ನನ್ನ ವಿರುದ್ಧ ದೂರು ದಾಖಲಿಸಿರುವುದು ಪಕ್ಷದ ನಾಯಕರ ಭಯವನ್ನು ತೋರಿಸುತ್ತದೆ. ಪಕ್ಷದ ಕಾರ್ಯಕರ್ತರಿಗಾಗಿ ಸಕ್ರಿಯ ರಾಜಕಾರಣದಲ್ಲಿರುತ್ತೇನೆ. ತಮಿಳು ನೀತಿ ಮತ್ತು ನಾನು ತೆಗೆದುಕೊಳ್ಳುವ ತತ್ವಗಳಿಗೆ ಬದ್ಧನಾಗಿರುತ್ತೇನೆ' ಎಂದು ತಿಳಿಸಿದರು.

English summary
VK Sasikala in Tamil Nadu said i will never surrender to oppression, Will meet you all soon. Enter full fledged politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X