• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಯನಾಡ್ ಕಾಂಗ್ರೆಸ್ ಸಂಸದ ಶನವಾಸ್ ವಿಧಿವಶ

|

ಚೆನ್ನೈ, ನವೆಂಬರ್ 21: ಕಾಂಗ್ರೆಸ್ ನ ಹಿರಿಯ ನಾಯಕ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದ ಎಂ ಐ ಶನವಾಸ್(67) ಬುಧವಾರ ಬೆಳಗ್ಗಿನ ಜಾವ ನಿಧನರಾಗಿದ್ದಾರೆ.

ಲಿವರ್ ಜೋಡಣೆಯ ನಂತರ ಕಂಡುಬಂದ ಕೆಲವು ಆರೋಗ್ಯ ಸಂಬಂಧೀ ಸಮಸ್ಯೆಯಿಂದ ಅವರು ಚೆನ್ನೈನ ಆಸ್ಪತ್ರೆಯೊಂದರಲ್ಲಿ ನಿಧನರಾದರು.

2014 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು, ಸಂಸದರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದ ಅವರು, ಕೇರಳ ವಿಧ್ಯಾರ್ಥಿ ಸಂಘಟನೆಯ ಮೂಲ ರಾಜಕೀಯಕ್ಕೆ ಪ್ರವೇಶಿಸಿದ್ದರು.

ಕಾಂಗ್ರೆಸ್ ನಾಯಕ ಕೆ.ಕರುಣಾಕರನ್ ಅವರ ವಿರುದ್ಧ ಬಂಡಾಯ ಎದ್ದಿದ್ದ ಮೂವರು ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಇವರೂ ಒಬ್ಬರಾಗಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

English summary
Senior Congress leader and Wayanad MP M I Shanavas passes away this(No 21) Morning, following compications from a liver transplant.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X