ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಕೆದಾಟು ಯೋಜನೆ; ಕ್ಯಾತೆ ತೆಗೆದ ತಮಿಳುನಾಡು ಹೊಸ ಸರ್ಕಾರ

|
Google Oneindia Kannada News

ಚೆನ್ನೈ, ಮೇ 27; ಕರ್ನಾಟಕ ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಾಣ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಹೇಳಿದೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿನ ಹೊಸ ಸರ್ಕಾರ ಮೊದಲ ಬಾರಿಗೆ ಕ್ಯಾತೆ ತೆಗೆದಿದೆ.

ತಮಿಳುನಾಡಿನ ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಬುಧವಾರ ಈ ಕುರಿತು ಮಾತನಾಡಿದ್ದಾರೆ. ಮೇಕೆದಾಟು ಬಳಿ ಅಕ್ರಮವಾಗಿ ನಿರ್ಮಾಣ ಚಟುವಟಿಕೆ ನಡೆಯುತ್ತಿದೆ ಎಂದು ಮಂಗಳವಾರ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಹೇಳಿತ್ತು.

ಮತ್ತೆ ಸುದ್ದಿಯಾದ ಮೇಕೆದಾಟು ವಿವಾದ; ಸಮಿತಿ ರಚಿಸಿದ ಎನ್‌ಜಿಟಿ ಮತ್ತೆ ಸುದ್ದಿಯಾದ ಮೇಕೆದಾಟು ವಿವಾದ; ಸಮಿತಿ ರಚಿಸಿದ ಎನ್‌ಜಿಟಿ

ಅಕ್ರಮ ನಿರ್ಮಾಣ ಚಟುವಟಿಕೆ ಕುರಿತು ಪರಿಶೀಲನೆ ನಡೆಸಿ ಜುಲೈ 5ರೊಳಗೆ ವರದಿ ಸಲ್ಲಿಸಲು ಜಂಟಿ ಸಮಿತಿಯನ್ನು ಎನ್‌ಜಿಟಿ ಮಂಗಳವಾರ ರಚನೆ ಮಾಡಿ ಆದೇಶ ಹೊರಡಿಸಿತ್ತು. ಈ ಆದೇಶದ ಬಳಿಕ ತಮಿಳುನಾಡು ಯೋಜನೆ ಬಗ್ಗೆ ಮಾತನಾಡಿದೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಮತ್ತೆ ಕಿರಿಕ್ ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಮತ್ತೆ ಕಿರಿಕ್

ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗಿ ಸಮುದ್ರ ಸೇರುವ ಕಾವೇರಿ ನದಿ ನೀರನ್ನು ಸಂಗ್ರಹ ಮಾಡಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಕರ್ನಾಟಕ ಸರ್ಕಾರ ಯೋಜನೆ ರೂಪಿಸಿದೆ. ತಮಿಳುನಾಡು ಸರ್ಕಾರ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಸುಪ್ರೀಂಕೋರ್ಟ್ ಮೆಟ್ಟಿಲನ್ನು ಏರಿದೆ.

ಮೇಕೆದಾಟು ಯೋಜನೆ : ಕೇಂದ್ರದ ವಿರುದ್ಧ ಡಿಕೆಶಿ ಅಸಮಾಧಾನ! ಮೇಕೆದಾಟು ಯೋಜನೆ : ಕೇಂದ್ರದ ವಿರುದ್ಧ ಡಿಕೆಶಿ ಅಸಮಾಧಾನ!

ಅಣೆಕಟ್ಟಲು ಕಟ್ಟಲು ಬಿಡಲ್ಲ

ಅಣೆಕಟ್ಟಲು ಕಟ್ಟಲು ಬಿಡಲ್ಲ

ತಮಿಳುನಾಡಿನ ಜಲಸಂಪನ್ಮೂಲ ಸಚಿವ ದೊರೈ ಮುರುಗನ್, "ಸರ್ಕಾರ ಕಾನೂನು ತಜ್ಞರ ಜೊತೆ ಈ ಕುರಿತು ಸಮಾಲೋಚನೆ ನಡೆಸಲಿದೆ. ತಮಿಳುನಾಡು ಕರ್ನಾಟಕಕ್ಕೆ ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಡ್ಡವಾಗಿ ಅಣೆಕಟ್ಟು ಕಟ್ಟಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ" ಎಂದು ಹೇಳಿದ್ದಾರೆ.

ಕಾನೂನು ತಜ್ಞರ ಜೊತೆ ಸಭೆ

ಕಾನೂನು ತಜ್ಞರ ಜೊತೆ ಸಭೆ

ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮೇಕೆದಾಟು ಯೋಜನೆ ಕುರಿತು ಕಾನೂನು ಹೋರಾಟ ನಡೆಸಲು ಇಂದು ಕಾನೂನು ತಜ್ಞರ ಜೊತೆ ಸಭೆಯನ್ನು ನಡೆಸಲಿದ್ದಾರೆ. ಎನ್‌ಜಿಟಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿಯನ್ನು ಪಡೆಯಲಿದ್ದಾರೆ.

ಎರಡು ಸಮಾನಾಂತರ ಅಣೆಕಟ್ಟು

ಎರಡು ಸಮಾನಾಂತರ ಅಣೆಕಟ್ಟು

ಕನಕಪುರ ತಾಲೂಕಿನ ಒಂಟಿಗುಂಡ್ಲು ಮತ್ತು ಹನೂರು ಅರಣ್ಯ ವಲಯದ 2 ಬೆಟ್ಟಗಳ ನಡುವೆ ಸಮಾನಾಂತೆ ಅಣೆಕಟ್ಟು ನಿರ್ಮಾಣ ಮಾಡಿ ಅಲ್ಲಿ ಸಂಗ್ರಹ ಮಾಡುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲು ಕರ್ನಾಟಕ ಯೋಜನೆ ರೂಪಿಸಿದೆ. ಆದರೆ ತಮಿಳುನಾಡು ಸರ್ಕಾರ ಇದು ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪಿನ ಉಲ್ಲಂಘನೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕ್ಯಾತೆ ತೆಗೆದಿದೆ.

ತನ್ನ ಪಾಲಿನ ನೀರು ಕಡಿಮೆಯಾಗಲಿದೆ

ತನ್ನ ಪಾಲಿನ ನೀರು ಕಡಿಮೆಯಾಗಲಿದೆ

ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಾಣವಾದರೆ ರಾಜ್ಯ ತನ್ನ ಪಾಲಿನ ನೀರನ್ನು ಕೊಡುವುದಿಲ್ಲ ಎಂಬುದು ಕರ್ನಾಟಕ ಸರ್ಕಾರದ ವಾದವಾಗಿದೆ. ಕಾವೇರಿ ನದಿ ಪಾತ್ರದ ರಾಜ್ಯಗಳ ಒಪ್ಪಿಗೆ ಇಲ್ಲದೇ ಕರ್ನಾಟಕ ಅಣೆಕಟ್ಟು ನಿರ್ಮಾಣ ಮಾಡುವುದು ಅಸಾಧ್ಯ. ತಮಿಳುನಾಡು ಮೇಕೆದಾಟು ಯೋಜನೆ ಬಗ್ಗೆ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿಯೂ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ.

English summary
Tamil Nadu water resource minister Durai Murugan said that we will never allow Karnataka to build a reservoir across Cauvery river in Mekedatu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X